
ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ್ದು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 19 ಅಪಘಾತ ವಲಯಗಳಿವೆ ಎಂದು ಗುರುತಿಸಲಾಗಿದ್ದು ಇಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ ನೀಡಿದರು. ಕಳೆದ ಎರಡೂವರೆ ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 700 ಜನರ ಸಾವು ಕಂಡಿದ್ದಾರೆ. 1400 ಗಾಯಗೊಂಡಿರುವ ಪ್ರಕರಣ ದಾಖಲಾಗಿದ್ದು, ಗಂಭೀರವಾಗಿ ಪರಿಗಣಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರ ಜೊತೆಗೆ ಪೋಕ್ಸೋ ಕೇಸ್ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಅನೇಕ ಕಾರಣಗಳಿಂದ ಕಡಿಮೆ ಆಗ್ತಿದೆ. ಶಿಕ್ಷೆ ಆಗೋ ರೀತಿಯಲ್ಲಿ ಪೂರಕ ದಾಖಲೆಗಳೊಂದಿಗೆ ಕ್ರಮವಾಗಬೇಕು ಎಂದು ಹೇಳಿದ್ದಾರೆ
ಚಿಕ್ಕಬಳ್ಳಾಪುರ ಜಿಲ್ಲೆ ಆಂಧ್ರಪ್ರದೇಶದ ಗಡಿಭಾಗದಲ್ಲಿದೆ ಹಾಗಾಗಿ ಡ್ರಗ್ಸ್ ಹೆಚ್ಚಾಗಿ ಆಂಧ್ರಪ್ರದೇಶದಿಂದ ಬರುತ್ತಿದೆ. ಅನೇಕ ಭಾರಿ ಈ ಸಂಬಂಧ ಪ್ರಕರಣ ದಾಖಲಾಗಿದೆ, ಅಕ್ರಮಗಳ ನಿಯಂತ್ರಣಕ್ಕೆ ಗಡಿಯಲ್ಲಿ ಶಿಸ್ತುಬದ್ಧ ಕೆಲಸ ಆಗಬೇಕು ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಬೇಕು. ಪಿಯುಸಿ ನಂತರ 40-50 ಸಾವಿರ ವಿದ್ಯಾರ್ಥಿಗಳಿದ್ದು, ಡ್ರಗ್ಸ್ ದಾಸರಾಗದಂತೆ ನೋಡಿಕೊಳ್ಳಬೇಕು. ವ್ಹೀಲಿಂಗ್ ನಿಯಂತ್ರಣಕ್ಕೂ ಸೂಚನೆ ನೀಡಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 24 ಜನರ ಕೊಲೆಯಾಗಿದ್ಧು, ಅವುಗಳನ್ನ ಭೇದಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವ ರಾಜಣ್ಣ ಹನಿಟ್ರ್ಯಾಪ್ ಕೇಸ್‌ನಲ್ಲಿ ಸಾಕ್ಷ್ಯ ಸಿಕ್ಕಿಲ್ಲ: ಪರಮೇಶ್ವರಗೆ ಸಿಐಡಿ ಡಿಜಿಪಿ ವಿವರಣೆ
ಸಿದ್ದರಾಮಯ್ಯ ಉತ್ತಮ ಆಡಳಿತ:
ಸಿಎಂ ಸಿದ್ಧರಾಮಯ್ಯ ಗ್ಯಾರಂಟಿಗಳ ಮೂಲಕ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಉತ್ತಮ ಬಜೆಟ್ ನೀಡಿದ್ದಾರೆ. ಇದು ಬಿಜೆಪಿಯವರಿಗೆ ನೆಗೆಟಿವ್ ಆಗ್ತಿದೆ.
ಡಿಕ್ಷನರಿಯಲ್ಲಿ ಪದ ಇದೆ ಅಂತ ಜನಾಕ್ರೋಶ ಪದ ಬಳಕೆ ಮಾಡೋದು ತಪ್ಪು. ಕೇಂದ್ರ ಸರ್ಕಾರದ ತೆರಿಗೆಯಿಂದ ಬೆಲೆ ಏರಿಕೆ ಆಗ್ತಿದೆ. ರಾಜ್ಯದಲ್ಲಿ ಅತಿಹೆಚ್ಚು ತೆರಿಗೆ ನೀಡ್ತಿರೋ ರಾಜ್ಯಗಳಲ್ಲಿ ಕರ್ನಾಟಕ ಎರಡನೇಯದು. ಜನಪರ ಆಡಳಿತಕ್ಕೆ ಬೆಲೆ ಏರಿಕೆ ಅನಿವಾರ್ಯ ಎಂದರು.
ನನ್ನ, ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಗೃಹ ಸಚಿವ ಪರಮೇಶ್ವರ
ಇನ್ನು ಕೊಡಗಿನ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದೆ ಬಳಿಕಷಷ್ಟೇ ಸತ್ಯಾತ್ಯತೆ ಗೊತ್ತಾಗಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಸಿದ್ದರಾಮಯ್ಯ ಉತ್ತಮ ಆಡಳಿತ ನಡೆಸ್ತಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ