
ಬೆಂಗಳೂರು (ಜು.21): ರಾಜ್ಯಮಟ್ಟದ ವಿನೂತನ ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಇಂದಿನಿಂದ ಅಧಿಕೃತವಾಗಿ ಚಾಲನೆಯಾಗಿದೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನ ಬಲಪಡಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಗೃಹ ಸಚಿವ ಜಿ ಪರಮೇಶ್ವರ್ ಅಧಿಕೃತ ಚಾಲನೆ ನೀಡಿದ್ದಾರೆ.
ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದ್ದು, ಬೀಟ್‌ಗಳು ಮತ್ತು ಸಬ್‌ಬೀಟ್ ಮಾದರಿಯಲ್ಲಿ ಠಾಣೆಗಳನ್ನ ವಿಂಗಡಿಸಿದ್ದು, ಸಬ್‌ಬೀಟ್‌ಗಳಲ್ಲಿ 40-50 ಮನೆಗಳನ್ನೊಳಗೊಂಡ ಒಂದು ಕ್ಲಸ್ಟರ್ ಇರುತ್ತದೆ.
ಪ್ರತಿ ಕ್ಲಸ್ಟರ್‌ಗೆ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿ ಉಸ್ತುವಾರಿ ಅಧಿಕಾರಿಗಳಾಗಿ ಎಎಸ್‌ಐ ಮತ್ತು ಪಿಎಸ್‌ಐ ನಿಯೋಜಿಸಲಾಗುತ್ತದೆ..ಇನ್ನು ಮುಂದೆ ಸಕ್ರಿಯವಾಗಿ ಮನೆ-ಮನೆಗೆ ಪೊಲೀಸರು ಬಂದು ಕಾನೂನು ಚೌಕಟ್ಟಿನಲ್ಲಿ ಸಾರ್ವಜನಿಕರ ದೂರುಗಳನ್ನ ಆಲಿಸಲಿದ್ದಾರೆ..
ಪ್ರತಿ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಅಥವಾ ಸಮಸ್ಯೆ ಗಳನ್ನ ರಿಜಿಸ್ಟರ್‌ನಲ್ಲಿ ನಮೂದು ಮಾಡಲಿದ್ದಾರೆ. ಅಹವಾಲುಗಳನ್ನು ತಕ್ಷಣವೇ ಬಗೆಹರಿಸಲು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು, ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ಮಾಹಿತಿ ಹಾಗೂ ಡ್ರಗ್ಸ್ ನಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ಪೊಲೀಸರು ಅಭಿಯಾನದಲ್ಲಿ ಜಾಗೃತಿ ಮೂಡಿಸಲಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ