
ಬೆಂಗಳೂರು (ನ.20): ನಗರದಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ದರೋಡೆಕೋರರಿಗೆ ನೀಡಲಾಗಿದೆ. ಅದನ್ನಾಧರಿಸಿ ದರೋಡೆ ಮಾಡಲಾಗಿದೆ. ಈ ದರೋಡೆ ಮಾಡಿದವರ್‍ಯಾರು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ನೀಡಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಮಾಹಿತಿ ನೀಡಿದ್ದಾರೆಯೇ ಅಥವಾ ದರೋಡೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಕುರಿತಂತೆ ಮಾಹಿತಿಗಳು ದೊರೆತಿವೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ದರೋಡೆಕೋರರನ್ನು ಬಂಧಿಸುತ್ತೇವೆ ಎಂದರು.
ಬೆಂಗಳೂರಿನಲ್ಲಿ ಹಾಡುಹಗಲೇ ಈ ರೀತಿಯ ಕೃತ್ಯ ಎಸಗಿದ್ದಾರೆ. 7 ಕೋಟಿ ರು.ಗೂ ಹೆಚ್ಚಿನ ಮೊತ್ತದ ರಾಬರಿ ಮಾಡಲಾಗಿದೆ. ದರೋಡೆಗೆ ಬಳಸಿದ ವಾಹನ ಸಂಖ್ಯೆ ಸೇರಿದ ಹಲವು ಮಾಹಿತಿ ಸಿಕ್ಕಿದೆ. ದರೋಡೆ ಎಸಗಿದವರು ರಾಜ್ಯದವರಾ ಅಥವಾ ಹೊರ ರಾಜ್ಯದವರಾ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಈಗಲೇ ಎಲ್ಲ ಮಾಹಿತಿ ಬಹಿರಂಗ ಮಾಡಲಾಗದು. ದರೋಡೆಕೋರರನ್ನು ಖಂಡಿತ ಹಿಡಿಯುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ