
ಬೆಂಗಳೂರು(ಮಾ.31) ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಹಾಲಿನ ದರ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಿದೆ. ಇದಕ್ಕೂ ಮೊದಲು ವಿದ್ಯುತ್ ದರ ಏರಿಕೆ ಮಾಡಿತ್ತು. ಪ್ರತಿ ಕ್ಷೇತ್ರದಲ್ಲಿ ದರ ಏರಿಕೆಯಾಗುತ್ತಿದೆ. ಪ್ರಯಾಣ ಟಿಕೆಟ್ ದರ ಸೇರಿದಂತೆ ಎಲ್ಲವೂ ದುಬಾರಿಯಾಗಿದೆ. ಬೆಲೆ ಏರಿಕೆಯಿಂದ ಜನರು ಹೈರಾಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಎದುರಾಗಿದೆ. ಹಾಲಿನ ದರ ಏರಿಕೆಯಿಂದ ಇದೀಗ ಹೊಟೆಲ್ ತಿನಿಸುಗಳ ಬೆಲೆ ಅನಿವಾರ್ಯವಾಗಿ ಏರಿಕೆಯಾಗುತ್ತಿದೆ. ಹೋಟೆಲ್ ಮಾಲೀಕರು ಈ ಕುರಿತು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ.
ವಿದ್ಯುತ್, ಪ್ರಯಾಣ, ಹಾಲಿನ ದರ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಇದೀಗ ತಿನಿಸುಗಳ ಬೆಲೆ ಏರಿಕೆ ಅನಿವಾರ್ಯ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ. ನಂದಿನ ಹಾಲು, ಮೊಸರು ದರ ಪರಿಷ್ಕರಣೆಯಿಂದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರು ಹೋಟೆಲ್ ಮಾಲೀಕರು ಇದೀಗ ಕಾಫಿ, ತಿಂಡಿ, ಊಟ ಸೇರಿದಂತೆ ಹೋಟೆಲ್ ತಿನಿಸುಗಳ ಬೆಲೆ ಏರಿಕೆಗೆ ಮುಂದಾಗಿದ್ದಾರೆ.
ಯುಗಾದಿಗೆ ಬೆಲೆ ಏರಿಕೆ ಹೋಳಿಗೆ, ಮಹಾದೇವಪ್ಪನಿಗೂ ಶಾಕು-ಕಾಕಾ ಪಾಟೀಲಗೂ ಶಾಕು,ಕಾಂಗ್ರೆಸ್ ತಿವಿದ HDK
ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲು,ಮೊಸರಿಗೆ 4 ರೂ ಏರಿಕೆ ಮಾಡಲಾಗಿದೆ. ಇದರ ಜೊತೆಗೆ ಪ್ರತಿ ಯೂನಿಟ್ 36 ಪೈಸೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಇದು ನೇರವಾಗಿ ಹೋಟೆಲ್ ಉದ್ಯಮದ ಮೇಲೆ ಹೊಡೆತ ನೀಡುತ್ತಿದೆ. ವಿದ್ಯುತ್ ಹಾಗೂ ಹಾಲು ಹೋಟೆಲ್ ಉದ್ಯಮದ ಜೀವಾಳ. ಆದರೆ ಇವರೆರಡ ಬೆಲೆ ಏರಿಕೆ ಹೋಟೆಲ್ ಉದ್ಯಮವನ್ನು ಮತ್ತಷ್ಟು ನಷ್ಟಕ್ಕ ದೂಡಲಿದೆ ಅನ್ನೋ ಆತಂಕವನ್ನು ಹೋಟೆಲ್ ಮಾಲೀಕರು ವ್ಯಕ್ತಪಡಿಸಿದ್ದಾರೆ.
ಅನಿವಾರ್ಯವಾಗಿ ಹೋಟೆಲ್ ನಲ್ಲಿ ಟೀ,ಕಾಫಿ, ತಿಂಡಿ,ಊಟ ದರ ಪರಿಷ್ಕರಣೆ ಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಅತೀ ಶೀಘ್ರದಲ್ಲೇ ಹೋಟೆಲ್ ಮಾಲೀಕರ ಸಂಘ ಸಭೆ ನಡೆಸಲಿದೆ. ಈ ಸಭೆಯಲ್ಲಿ ಚರ್ಚಿಸಿ ದರ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಹೋಟೆಲ್ ಮಾಲೀಕರ ಸಂಘದ ಪ್ರಕಾರ ಶೇಕಡಾ 10 ರಿಂದ 15 ರಷ್ಟು ದರ ಏರಿಕೆಗೆ ಚರ್ಚಿಸಲಾಗಿದೆ. ಸಭೆ ನಡೆಸಿ ಏಪ್ರಿಲ್ ತಿಂಗಳಲ್ಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ಹೇಳಿದೆ.
ದಿನಸಿ, ಹಾಲು,ವಿದ್ಯುತ್, ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಹೆಚ್ಚಳವಾಗಿದೆ. ಹೀಗಾಗಿ,ಊಟ, ತಿಂಡಿ,ಕಾಫಿ ಟೀ ಶೇ.10-15 ರಷ್ಟು ಏರಿಕೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ ಎಂದಿದ್ದಾರೆ. ಬೆಲೆ ಏರಿಕೆಯಿಂದ ನೇರವಾಗಿ ಹೋಟೆಲ್ ಉದ್ಯಮ ವ್ಯಾಪಾರ ವಹಿವಾಟಿನಲ್ಲಿ ಕುಸಿತವಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಜನತೆಗೆ ಬೆಲೆ ಏರಿಕೆ ವಿರುದ್ಧ ಏ.2ರಿಂದ ಬಿಜೆಪಿ ಸರಣಿ ಧರಣಿ: ಬಿ.ವೈ.ವಿಜಯೇಂದ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ