ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋ ಹಂಚಿಕೊಂಡು ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಬೆಂಗಳೂರು (ಆ.21): ರಾಜ್ಯದಲ್ಲಿ ಐಎಎಸ್ ಅಧಿಕಾರಿ ಆಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳನ್ನು 15 ಕ್ಕೂ ಅಧಿಕ ಆರೋಪಗಳನ್ನು ಮಾಡಿ, ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ಜಗಳ ತಾರಕಕ್ಕೆ ಏರಿಕೆಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಹರಿಬಿಟ್ಟು ಅವರ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು. ಜೊತೆಗೆ, ಅಧಿಕಾರಿಗಳ ಸಂಸಾರಗಳನ್ನೂ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಾದ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಇಬ್ಬರಿಗೂ ತಾರಟೆಗೆ ತೆಗೆದುಕೊಳ್ಳಲಾಗಿತ್ತು. ಇಷ್ಟಕ್ಕೂ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಸುಮ್ಮನಾಗದ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.
ಸಿಂಧೂರಿ ಕೇಸ್: ರೂಪಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
ಇನ್ನು ಮಾನನಷ್ಟ ಮೊಕದ್ದಮೆ ದಾಖಲಿಸುವ ಜೊತೆಗೆ ತಮ್ಮ ಕುರಿತು ಯಾವುದೇ ವಿಚಾರಗಳನ್ನು ಹಂಚಿಕೊಳ್ಳದಂತೆ, ವಿಷಯಗಳನ್ನು ಪ್ರಕಟಣೆ ಮಾಡದಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಾದ ನಂತರ ನ್ಯಾಯಾಲಯವು ರೋಹಿಣಿ ಸಿಂಧೂರಿ ಅವರ ಪರವಾಗಿ ತೀರ್ಪು ನೀಡಿದ್ದು, ಅವರ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಹಾಗೂ ಸುದ್ದಿ ಪ್ರಕಟ ಮಾಡದಂತೆ ಆದೇಶ ಹೊರಡಿಸಿತ್ತು. ಇದಾದ ನಂತರ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಮೇಲೆ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಇನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ, ಪ್ರಕರಣ ರದ್ದು ಕೋರಿದ್ದ ಡಿ. ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಲಾಗಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ. ಇನ್ನು ಈ ಕುರಿತಂತೆ ಡಿ. ರೂಪಾ ಹೈಕೋರ್ಟ್ ರೂಪಾ ಮೌದ್ಗಿಲ್ ಗೆ ಸಮನ್ಸ್ ಜಾರಿಗೊಳಿಸಿತ್ತು. ಈ ವೇಳೆ ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದಿದ್ದರು. ಈಗ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದತಿಗೂ ನ್ಯಾಯಾಲಯ ನಕಾರ ಮಾಡಿದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
IAS vs IPS: ಡಿ. ರೂಪಾ ಮತ್ತೊಂದು ಸಂಕಷ್ಟ: ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ಆಗಿದ್ದಾಗ ಸಂಬಂಧ ಹಾಳಾಗಿತ್ತು: ಬೆಂಗಳೂರು (ಫೆ.19): ರೋಹಿಣಿ ಸಿಂಧೂರಿ ಪ್ರೊಬೆಷನರಿ ಡಿಸಿ ಆಗಿದ್ದಾಗ ಅವರ ಪತಿಯೊಂದಿಗಿನ ಸಂಬಂಧ ಹಾಳಾಗಿತ್ತು. ಆದರೆ, ಬರಬರುತ್ತಾ ಅವರ ಬಿಹೇವಿಯರ್ ಸರಿಯಾಗಿ ಕಾಣಿಸಲಿಲ್ಲ. ಕಳಿಸಬಾರದಂತ ಪಿಕ್ಸ್ ಕೆಲ ಐಎಎಸ್ ಅಧಿಕಾರಿಗಳಿಗೆ ಕಳಿಸಿದ್ದಾರೆ. ನಂತರ ಡಿ.ಕೆ. ರವಿ ಅವರ ವಿಚಾರ ಮಾಧ್ಯಮಗಳಿಂದ ಗೊತ್ತಾಯಿತು. ನನಗೆ ಗೊತ್ತಿರುವಷ್ಟು ಮಾಹಿತಿ ಹಂಚಿಕೊಂಡಿದ್ದೇನೆ. ಆದರೆ, ಈಗ ಹಂಚಿಕೊಂಡಿರುವ ಫೋಟೋಗಳು ಸ್ಯಾಂಪಲ್ ಅಷ್ಟೇ ಎಂದು ಹೇಳುವ ಮೂಲಕ ಇನ್ನಷ್ಟು ದಾಖಲೆಗಳು ಇರುವ ಬಗ್ಗೆ ಐಜಿಪಿ ಡಿ.ರೂಪಾ ಸುಳಿವು ನೀಡಿದ್ದರು.