ಐಎಎಸ್ Vs ಐಪಿಎಸ್: ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ದೂರು ದಾಖಲಿಸಿದ ಡಿ.ರೂಪಾ!

By Sathish Kumar KH  |  First Published Dec 18, 2024, 1:37 PM IST

ಐಪಿಎಸ್ ಅಧಿಕಾರಿ ಡಿ. ರೂಪಾ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ಮತ್ತು ಎಕ್ಸ್ ಜಾಲತಾಣದ ಪೋಸ್ಟ್ ನಿಂದ ಡಿ. ರೂಪಾ ಮತ್ತು ಅವರ ಕುಟುಂಬಕ್ಕೆ ಮಾನಸಿಕ ಯಾತನೆಯಾಗಿದೆ ಎಂದು ಆರೋಪಿಸಿದ್ದಾರೆ.


ಬೆಂಗಳೂರು (ಡಿ.18): ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ನಿಂದ ರೋಹಿಣಿ ಸಿಂಧೂರಿ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಡ ಮೊಕದ್ದಮೆ ಹೂಡಿದ್ದಾರೆ. ಬೆಂಗಳೂರಿನ 7 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿ ಪರಿಶೀಲಿಸಿದ ಕೋರ್ಟ್‌ನಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇನ್ನು ಡಿ. ರೂಪಾ ಅವರು ಸಲ್ಲಿಕೆ ಮಾಡಿರುವ ದೂರಿನಲ್ಲಿ '19.2.2023 ರಂದು ರೋಹಿಣಿ ಸಿಂಧೂರಿ ನನ್ನ ವಿರುದ್ಧ ಮಾಧ್ಯಮ ಹೇಳಿಕೆ ನೀಡಿದ್ದರು. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ'..

Tap to resize

Latest Videos

undefined

ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಸುಮಾರು 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಅವರ ಹೇಳಿಕೆಯಿಂದ, ನನ್ನ ತಂಗಿ, ನನ್ನ ಪತಿ ಮನೀಶ್ ಮೌದ್ಗಿಲ್ ಹಾಗೂ ನನ್ನ ಮಕ್ಕಳು ಸೇರಿ ಬಹುತೇಕ ಕುಟುಂಬಸ್ಥರು ಮಾನಸಿಕ ಯಾತನೆ ಅನುಭವಿಸಿದ್ದೇವೆ. ಹೀಗಾಗಿ, ಕ್ರಿಮಿನಲ್ ಮಾನನಷ್ಡ ಪ್ರಕರಣ ದಾಖಲಿಸುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಡಿ. ರೂಪಾ ಅವರ ಅರ್ಜಿ ಸಂಬಂಧ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್‌ನಿಂದ ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ vs ಡಿ.ರೂಪಾ: ಹೈಪವರ್ ಅಧಿಕಾರಿಗಳ ಜಗಳ ಸುಪ್ರೀಂ ಕೋರ್ಟ್‌ನಿಂದ, ಹೈಕೋರ್ಟ್‌ಗೆ ವಾಪಸ್!

ಪ್ರಕರಣದ ಹಿನ್ನೆಲೆಯನ್ನೂ ತಿಳಿಯಿರಿ: ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವೆ ಕಳೆದ ಎರಡು ವರ್ಷಗಳ ಹಿಂದೆ ಆರಂಭವಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಆರಂಭವಾಗಿದ್ದ ಇವರ ಆರೋಪ, ಪ್ರತ್ಯಾರೋಪದ ಜಗಳ ಬಿಜೆಪಿ ಹೋಗಿ ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷ ಆಡಳಿತ ಮಾಡಿದರೂ ಮುಕ್ತಾಯಗೊಂಡಿಲ್ಲ. ಡಿ. ರೂಪಾ ಅವರು ರೋಹಿಣಿ ಸಿಂಧೂರಿ ಅವರ ಮೇಲೆ ಕೆಲವೊಂದಿಷ್ಟು ಆರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಕೋರ್ಟ್ ಮೊರೆ ಹೋಗಿದ್ದ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಾದ ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್‌ವರೆಗೂ ಹೋಗಿತ್ತು. ಆದರೆ, ಅಲ್ಲಿಯೂ ನ್ಯಾಯ ಬಗೆಹರಿಯದೇ ಪುನಃ ಹೈಕೋರ್ಟ್‌ನಲ್ಲಿ ಬಗೆಹರಿಸಿಕೊಳ್ಳುವಂತೆ ವಾಪಸ್ ಕಳುಹಿಸಲಾಗಿತ್ತು.

ಇದನ್ನೂ ಓದಿ: 'ಇಬ್ಬರೂ ಕೂತು ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ' ಡಿ.ರೂಪಾ, ಸಿಂಧೂರಿಗೆ ಸುಪ್ರೀಂ ಸಲಹೆ

click me!