ಕನ್ನಡ ನಾಡಿನ ಹಳದಿ-ಕೆಂಪು ಧ್ವಜದಲ್ಲಿ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಸಿಎಂ ಡಿ.ಕೆ. ಶಿವಕುಮಾರ್

Published : Nov 01, 2026, 09:40 AM IST
Karnataka Rajyotsava New Flag

ಸಾರಾಂಶ

ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ-ಕೆಂಪು ಧ್ವಜಕ್ಕೆ ಹೊಸ ಬಣ್ಣ ಮತ್ತು ರಾಜ್ಯ ಲಾಂಛನ ಸೇರಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಧ್ವಜಾರೋಹಣ ಕಡ್ಡಾಯಗೊಳಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿ ಕೇಂದ್ರದ ಅನುಮತಿಗೆ ಕಳುಹಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು (ನ.01): ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜದಲ್ಲಿ ಮತ್ತೊಂದು ಬಣ್ಣವನ್ನು ಹಾಗೂ ಮಧ್ಯ ಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸಲು ನಿರ್ಧರಿಸಲಾಗಿದೆ. ಧ್ವಜ 71-72 ರ ಚೌಕಟ್ಟಿನಲ್ಲಿ ವಿವಿಧ ರೀತಿಯಲ್ಲಿ ಸಂಭ್ರಮಿಸಲು ಮತ್ತು ಆಚರಿಸಲು ಸೂಕ್ತ ಮಾರ್ಗದರ್ಶನಗಳೊಂದಿಗೆ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಿ ನಂತರ ಅನುಮತಿಗಾಗಿ ಕೇಂದ್ರಕ್ಕೆ ಕಳಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವಾದ್ಯಂತ ನೆಲೆಸಿರುವ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿರುವ ನಾಯಕರು, ಕನ್ನಡ ನಾಡು, ನುಡಿ ಹಾಗೂ ನಮ್ಮ ಧ್ವಜದ ರಕ್ಷಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಹಾಗೂ ಧ್ವಜದ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ಧ್ವಜದಲ್ಲಿ ಹೊಸ ಬಣ್ಣ ಮತ್ತು ರಾಜ್ಯ ಲಾಂಛನ:

ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜದಲ್ಲಿ ಮತ್ತೊಂದು ಬಣ್ಣವನ್ನು ಹಾಗೂ ಮಧ್ಯ ಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸಲು ನಿರ್ಧರಿಸಲಾಗಿದೆ. ಧ್ವಜ 71-72 ರ ಚೌಕಟ್ಟಿನಲ್ಲಿ ವಿವಿಧ ರೀತಿಯಲ್ಲಿ ಸಂಭ್ರಮಿಸಲು ಮತ್ತು ಆಚರಿಸಲು ಸೂಕ್ತ ಮಾರ್ಗದರ್ಶನಗಳೊಂದಿಗೆ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. 'ನಮ್ಮ ಧ್ವಜ ಹೇಗಿರಬೇಕು ಹಾಗೂ ಅದನ್ನು ಎಲ್ಲಿ ಹಾರಿಸಬೇಕು ಎಂಬ ಸ್ಪಷ್ಟ ಮಾರ್ಗದರ್ಶನ ಇರಬೇಕಾಗುತ್ತದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಸಾರ್ವಜನಿಕ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ' ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಿ, ಅಂತಿಮ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

ಖಾಸಗಿ ಕಂಪನಿ, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಕಡ್ಡಾಯ:

ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಷ್ಟೇ ಅಲ್ಲದೆ, ಐಟಿ-ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಲ್ಲೂ ಕನ್ನಡದ ಬಾವುಟವನ್ನು ಹಾರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಮೇಲೆಯೂ ಈ ಧ್ವಜ ಹಾರಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಭಾಷೆ ಮತ್ತು ಗಡಿ ರಕ್ಷಣೆಗೆ ಬದ್ಧತೆ:

'ಭುವನೇಶ್ವರಿ ತಾಯಿ ಕನ್ನಡವನ್ನು ಕಾಪಾಡುವ ದೇವತೆ. ನಾವಿಂದು ತಾಯಿಗೆ ಪೂಜೆ ಸಲ್ಲಿಸಿದ್ದೇವೆ. ಕನ್ನಡ ಭಾಷೆಗೆ ಯಾವುದೇ ಗಡಿಗಳಿಲ್ಲ. ಬ್ರಿಟಿಷರ ಆಡಳಿತ ಕಾಲದಲ್ಲೂ ಮಕ್ಕಳಿಗೆ ಮಾತೃಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ಇತಿಹಾಸವಿತ್ತು. ಸಾಂಸ್ಕೃತಿಕವಾಗಿ ಈ ಭಾಷೆಗೆ ಸುದೀರ್ಘ ಇತಿಹಾಸವಿದೆ' ಎಂದು ಸ್ಮರಿಸಿದರು.

ಇಂತಹ ಧ್ವಜ ಮಾದರಿ ಬೇರೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮ ಉಸಿರು, ನಮ್ಮ ಭಾಷೆ, ನೆಲ ಹಾಗೂ ಧ್ವಜವನ್ನು ರಕ್ಷಿಸಲು ನಾವು ಸದಾ ಬದ್ಧರಾಗಿದ್ದೇವೆ. ದೇಶ-ವಿದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಎಲ್ಲಾ ಕನ್ನಡಿಗರಿಗೂ ಹೆಮ್ಮೆಯಿಂದ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕನ್ನಡದ ಬಗ್ಗೆ ನಾವು ಹೇಳುವ 5 ಸುಳ್ಳುಗಳು, ಕಹಿ ಸತ್ಯ! ಅಭಿಮಾನ-ವಾಸ್ತವಕ್ಕಿರೋ ಅಂತರ
ರಾಜ್ಯಾದ್ಯಂತ ಪಕ್ಷಿ ಗಣತಿ ಆರಂಭ; ಮೊದಲ ದಿನವೇ 179 ಹಕ್ಕಿ ಪ್ರಭೇದಗಳನ್ನು ದಾಖಲಿಸಿ ನಂ.1 ಆದ ಉತ್ತರ ಕನ್ನಡ!