ಗೌರಿ ಗಣೇಶ ಹಬ್ಬದ ಪ್ರಯುಕ್ತ 1,200 ಹೆಚ್ಚುವರಿ ಬಸ್‌ಗಳನ್ನು ಬಿಟ್ಟ ಕೆಎಸ್‌ಆರ್‌ಟಿಸಿ

By Sathish Kumar KH  |  First Published Sep 11, 2023, 6:35 PM IST

ರಾಜ್ಯದಲ್ಲಿ ವಾರಾಂತ್ಯದ ದಿನಗಳು ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತವಾಗಿ ಕೆಎಸ್ಆರ್‌ಟಿಸಿ 1,200 ಹೆಚ್ಚುವರಿ ಬಸ್‌ಗಳನ್ನು ಸಂಚಾರ ಬಿಡುವ ಮೂಲಕ ಪ್ರಯಾಣಿಕರಿಗೆ ಮಾಡಿಕೊಟ್ಟಿದೆ.


ಬೆಂಗಳೂರು (ಸೆ.11): ರಾಜ್ಯದಲ್ಲಿ ವಾರಾಂತ್ಯದ ದಿನಗಳು ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಬರೋಬ್ಬರಿ 1,200 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಸಂಚಾರ ಬಿಡುವ ಮೂಲಕ ಪ್ರಯಾಣಿಕರಿಗೆ ಮಾಡಿಕೊಟ್ಟಿದೆ.

ವಾರಾಂತ್ಯ ದಿನಗಳಾದ ಸೆ.15 ಮತ್ತು ಸೆ.16 ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15ರಿಂದ ಸೆ.17ರವರೆಗೆ ಬೆಂಗಳೂರಿನಿಂದ ಕೆಳಕಂಡ ಸ್ಥಳಗಳಿಗೆ 1,200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

  • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.  ಮಾಡಲಾಗುತ್ತದೆ. 
  • ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುತ್ತದೆ.
  • ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

Tap to resize

Latest Videos

ಅಳಿವಿನಂಚಿನಲ್ಲಿರುವ ಗೆದ್ದಲು ಹಿಡಿದ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೈಯೆಲ್ಲಾ ರಂಧ್ರಗಳೇ: ಜೆಡಿಎಸ್‌ ತಿರುಗೇಟು

  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 
  • ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
  • ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
  • ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. 
  • ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಜೊತೆಗೆ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ವಾಪಸ್‌ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
  • ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. 

ಮೈಮೇಲೆ ಮಲಗಿ ತುಟಿಗೆ ತುಟಿ ಸವರಿದರೂ, ವಿರೋಧಿಸದೆ ತಬ್ಬಿಕೊಂಡ ಪಡುಕೋಣೆ!

  • ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. 
  • ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
  • ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

click me!