
ಕರ್ನಾಟಕದ ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಮಹತೋಭಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುವ ದೇವಸ್ಥಾನ ಇದಾಗಿದ್ದು,
2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. (155,95,19,567) ಅಂದರೆ ಕಳೆದ ಹಣಕಾಸು ವರ್ಷದಲ್ಲಿ ವಾರ್ಷಿಕ ಆದಾಯ 146.01 ಕೋಟಿ ಆಗಿತ್ತು. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು ಆದಾಯ 155.95 ಕೋಟಿ ಆಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ. (79,82,73,197) ಆಗಿದೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಭುದೇವ ಭೇಟಿ, ವಿಶೇಷ ಪೂಜೆ ಸಲ್ಲಿಸಿದ ಕುಟುಂಬ!
ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಪ್ರಸಿದ್ದ ವ್ಯಕ್ತಿಗಳು, ರಾಜಕಾರಣಿಗಳು, ಬಾಲಿವುಡ್ ಸೇರಿದಂತೆ ಚಿತ್ರರಂಗದ ಗಣ್ಯರು, ಕನ್ನಡ ರಾಜ್ಯದವರಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಆದಾಯ ಗಳಿಕೆಯಲ್ಲಿ ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ವರ್ಷದಿಂದ ವರ್ಷಕ್ಕೆ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗುತ್ತಿದೆ.
2020-21ರಲ್ಲಿ 68.94 ಕೋಟಿ ರೂ, 2021-22 ರಲ್ಲಿ 72.73 ಕೋಟಿ ರೂ., 2022-23ರಲ್ಲಿ 123 ಕೋಟಿ ರೂ., 2023-24 146.01 ಕೋಟಿ ರೂ. ಗಳ ಆದಾಯ ಬಂದಿತ್ತು. 2011-12 ರಲ್ಲಿ ದೇವಸ್ಥಾನದ ಆದಾಯ 56.24 ಕೋಟಿ ರೂ. ಗಳಾಗಿದ್ದವು. ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಮಹಿಳಾ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ.
\ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ವಿವಾದ, ಮಲೆಕುಡಿಯರನ್ನು ಕಡೆಗಣಿಸಿ ರೌಡಿಶೀಟರ್‌ಗೆ ಸ್ಥಾನ ಕೊಟ್ಟ ಸರ್ಕಾರ!
2006-07ರಲ್ಲಿ 19.76 ಕೋಟಿ ರೂ. ಆದಾಯ ಬಂದಿತ್ತು. ಇದು 2007-08ರಲ್ಲಿ 24.44 ಕೋಟಿ ರೂ.ಗೆ ಏರಿ ಕರ್ನಾಟಕದ ಅತ್ಯಂತ ಶ್ರೀಮಂತ ದೇವಸ್ಥಾನ ಎಂಬ ಖ್ಯಾತಿಯನ್ನು ಸ್ಥಾಪಿಸಿತು. ಅಂದಿನಿಂದ ಇಂದಿನವರೆಗೂ ತನ್ನ ಪ್ರಮುಖ ಸ್ಥಾನವನ್ನು ಸ್ಥಿರವಾಗಿ ಕಾಪಾಡಿಕೊಂಡು ಬಂದಿದೆ. ದೇವಸ್ಥಾನದ ಆದಾಯದ ಮೂಲಗಳಲ್ಲಿ ಒಪ್ಪಂದಗಳು, ದೇವಸ್ಥಾನದ ತೋಟಗಳಿಂದ ಬರುವ ಉತ್ಪನ್ನಗಳು, ವಾಣಿಜ್ಯ ಮತ್ತು ವಸತಿ ಬಾಡಿಗೆಗಳು, ನೈವೇದ್ಯ ಸೇವೆಗಳು, ಪ್ರತಿಜ್ಞೆ ಸೇವೆಗಳು, ಅನುದಾನಗಳು ಮತ್ತು ಶಾಶ್ವತ ಸೇವೆಗಳು ಸೇರಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ