ಕರ್ನಾಟಕ ಲಂಬಾಣಿ ಕಸೂತಿ ಕಲೆಗೆ ಗಿನ್ನಿಸ್‌ ದಾಖಲೆ: ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಸಭೆ

By Sathish Kumar KH  |  First Published Jul 9, 2023, 10:40 PM IST

ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1,300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ.


ವರದಿ : ನರಸಿಂಹ ಮೂರ್ತಿ, ಏಷ್ಯಾನೆಟ್‌ ಸುವರ್ಣ ನ್ಯೂಸ್ 
ಬಳ್ಳಾರಿ (ಜು.09): ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಇಂದಿನಿಂದ (ಜುಲೈ 9) ರಿಂದ  ಜುಲೈ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ಜು.10ರಂದು ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಕರ್ನಾಟಕದ ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1,300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ಹೇಳಿದರು.

ಜಿಂದಾಲ್  ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಚರ್ಚೆಗೆ  ಸಂಬಂಧಿಸಿದಂತೆ ಮಾತನಾಡಿ‌, ದೇಶದ ಜವಳಿ ಕ್ಷೇತ್ರದ ವೈವಿದ್ಯತೆ ಬಿಂಬಿಸುವ ಹಾಗೂ ಜಾಗತಿಕವಾಗಿ ಸಾಂಸ್ಕೃತಿಕ ಜವಳಿ ಉದ್ದಿಮೆಯ ಬೆಳವಣಿಗೆಗೆ ಇಂಬು ಕೊಡುವ ನಿಟ್ಟಿನಲ್ಲಿ, ಹಂಪಿ ಎದುರು ಬಸವಣ್ಣ ಮಂಪಟದ ಆವರಣದಲ್ಲಿ ಜವಳಿ ವಸ್ತು ಪ್ರದರ್ಶನಕ್ಕೆ  ಚಾಲನೆ ನೀಡಲಾಗುವುದು. ಜು.10ರಂದು ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1,300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ. ಇದರ ಪ್ರದರ್ಶನವೂ ಇಲ್ಲಿರುತ್ತದೆ. ಜೊತೆಗೆ ಇತರೆ ಕರಕಶುಲ ಹಾಗೂ ಜವಳಿ ಕಸೂತಿ ಕಲೆಗಾರರು ಪಾಲ್ಗೊಳ್ಳುವರು ಎಂದರು ಮಾಹಿತಿ ನೀಡಿದರು.

Tap to resize

Latest Videos

undefined

ಹೆಂಡ್ತಿ, ಮಕ್ಕಳ ಸಾವಿನ ಸ್ಮಾರಕವಾಗಿ ಬಡಜನರಿಗೆ ಮನೆ ನಿರ್ಮಿಸಿಕೊಟ್ಟ ಕುಟುಂಬ ಪ್ರೇಮಿ

ದೇಶಿ ಸಾಂಸ್ಕೃತಿಕ ಕಲೆಗಳ ಜಾಗತಿಕ ಅನಾವರಣಕ್ಕೆ ಜಿ-20 ವೇದಿಕೆಯಾಗಲಿದೆ. ಈ ಹಿಂದೆ ಒರಿಸ್ಸಾದ ಖಜುರಾಹೋ ಹಾಗೂ ಭುವನೇಶ್ವರದಲ್ಲಿ ಜರುಗಿದ ಜಿ-20 ಶೃಂಗಸಭೆಯ 1ನೇ ಮತ್ತು 2ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗಳು ಯಶಸ್ವಿಯಾಗಿವೆ. ಇದರಲ್ಲಿ ಜಿ-20 ಸದಸ್ಯ ರಾಷ್ಟ್ರಗಳ 45 ಅತ್ಯುನ್ನತ ಪ್ರತಿನಿಧಿಗಳು ಭಾಗವಹಿಸಿದ್ದರು. ಇದರ ಜೊತೆಗೆ ಹಲವಾರು ವೆಬಿನಾರ್‌ಗಳನ್ನು ಸಹ ಆಯೋಜಿಸಲಾಗಿತ್ತು ಎಂದು ಹೇಳಿದರು.

ಜಿ- 20 ಸಭೆ ನಾಲ್ಕು ಉದ್ದೇಶ ಹೊಂದಿದೆ: ಜಾಗತಿಕ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪು ಪ್ರಮುಖ ನಾಲ್ಕು ಉದ್ದೇಶಗಳನ್ನು ಹೊಂದಿದೆ. ಮೊದಲನೆಯದಾಗಿ ಸದಸ್ಯ ರಾಷ್ಟ್ರಗಳ ಸಾಂಸ್ಕೃತಿಕ ಅಸ್ಮಿತೆಯನ್ನು ರಕ್ಷಿಸಿ, ಪುನರ್‌ ಸ್ಥಾಪಿಸುವುದಾಗಿದೆ. ಎರಡನೇ ಮುಖ್ಯ ಉದ್ದೇಶ ಜನಜೀವನದ ಜೊತೆಗೆ ಪಾರಂಪರಿಕವಾಗಿ ಬಳಕೆಗೆ ಬಂದ ಪದ್ದತಿಗಳನ್ನು ಉಳಿಸಿ ಬೆಳೆಸುವುದು ಆಗಿದೆ. ಭಾರತದಲ್ಲಿ ಆರ್ಯುವೇದ ಪದ್ದತಿ ಬಳಕೆಯಲ್ಲಿ ಇದೆ. ಹಲವಾರು ಸಂದರ್ಭದಲ್ಲಿ ಆರ್ಯವೇದಲ್ಲಿ ಬಳಕೆಯಲ್ಲಿದ್ದ ಔಷಧೋಪಚಾರಗಳ ಸ್ವಾಮ್ಯ ಹಕ್ಕು (ಪೇಟೆಂಟ್) ಬೇರೆಯವರ ಪಾಲಾಗಿದೆ. ಈ ರೀತಿಯ ಘಟನೆಗಳನ್ನು ತಪ್ಪಿಸುವುದು ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಕೆಲಸವಾಗಿದೆ. 
ಸಾಂಸ್ಕೃತಿಕ ಅಂಶಗಳಿಗೆ ಡಿಜಿಟಲ್‌ ರೂಪ:  ಮೂರನೇ ಉದ್ದೇಶ ಸಾಂಸ್ಕೃತಿಕ ಅಂಶಗಳು, ಕಲಾ ಕುಸುರಿ ಹಾಗೂ ಉದ್ದಿಮೆಗಳನ್ನು ಪ್ರಚುರ ಪಡಿಸುವುದಾಗಿದೆ. ಇದರ ಅಂಗವಾಗಿ ಹಂಪಿಯಲ್ಲಿ ಜವಳಿ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ನಾಲ್ಕನೇ ಉದ್ದೇಶ ಸಾಂಸ್ಕೃತಿಕ ಅಂಶಗಳಿಗೆ ಡಿಜಿಟಲ್ ರೂಪ ನೀಡಿ, ಆಡಿಯೋ, ವಿಡಿಯೋ ಹಾಗೂ ಇನ್ನಿತರ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು. ಸಂಸ್ಕೃತಿ ಎಲ್ಲರನ್ನೂ ಒಗ್ಗೂಡಿಸಲು ಆಧಾರವಾಗಿದೆ. ವಾರಣಾಸಿಯಲ್ಲಿ ಆಗಸ್ಟ್ 26 ರಂದು ಸಾಂಸ್ಕೃತಿಕ ಕಾರ್ಯಕಾರಣಿ ಗುಂಪಿನ ಅಂತಿಮ ಸಭೆ ನಡೆಯಲಿದೆ. ವಾರಣಾಸಿ ಸಭೆಯಲ್ಲಿ ಡಿಜಟಲೀಕರಣಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು. 

ಪ್ರವಾಸಿಗರ ಸ್ವರ್ಗವಾದ ಧುಮ್ಮಿಕ್ಕುವ ಸಿರಿಮನೆ ಫಾಲ್ಸ್‌: ಒನ್‌ಡೇ ಟ್ರಿಪ್‌ಗೆ ಬೆಸ್ಟ್‌ ಪ್ಲೇಸ್‌

ಲಂಬಾಣಿ ಕಸೂತಿ ಕಲೆಗೆ ಮನ್ನಣೆ: ಕೇಂದ್ರ ಸಂಸ್ಕೃತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಿಲ್ಲಿ ಪಾಂಡೆ ಮಾತನಾಡಿ, ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1,300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ. ಈ ಮೂಲಕ ಜಾಗತಿಕವಾಗಿ ಸಾಂಪ್ರದಾಯಿಕ ಲಂಬಾಣಿ ಕಸೂತಿಗೆ ಮನ್ನಣೆ ದೊರಕಿಸಿ, ಅಂತರಾಷ್ಟ್ರೀಯ ಮಾರುಕಟ್ಟೆ ಸೌಲಭ್ಯ ದೊರಕಿಸುವ ಜೊತೆಗೆ ಸಾಂಪ್ರದಾಯಿಕ ಬದುಕಿನ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

click me!