ಕರ್ನಾಟಕದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ವಿಸ್ತರಣೆ: ಸಿಎಂ ಅಧಿಕೃತ ಘೋಷಣೆ

By Suvarna News  |  First Published May 21, 2021, 7:18 PM IST

* ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಕಟ
* 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಸಿಎಂ ಯಡಿಯೂರಪ್ಪ ಘೋಷಣೆ
 


ಬೆಂಗಳೂರು, (ಮೇ.21): ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

 ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೇ.24ರ ಬಳಿಕ 14 ದಿನ ಅಂದ್ರೆ ಜೂನ್ 7ರ ವರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Latest Videos

undefined

ಲಾಕ್‌ಡೌನ್ ವೇಳೆ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ಇದಕ್ಕ ಸ್ಪಂದಿಸಬೇಕು. 9.45ರ ವೇಳೆಗಾಗಲೇ ಜನರು ಮನೆ ಸೇರಿಕೊಳ್ಳಬೇಕೆಂದು ಸಿಎಂ ಮನವಿ ಮಾಡಿದರು.

ರಾಜ್ಯದಲ್ಲಿ ಕೋವಿಡ್ ಮಧ್ಯೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ: ಇದು ಸಾಂಕ್ರಾಮಿಕ ರೋಗವಲ್ಲ

ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೋನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್‌ಡೌನ್  ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಲಾಕ್‌ಡೌನ್ ಮುಂದುವರಿಸಲಿದ್ದು, ರಾಜ್ಯದ ಜನ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ತಜ್ಞರ ಅಭಿಪ್ರಾಯ ಪರಿಗಣಿಸಿ ಕಠಿಣ ನಿರ್ಬಂಧವನ್ನು ಮೇ 24 ರಿಂದ ಜೂನ್ 7 ರವರೆಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

'ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ': ಮುಖ್ಯಮಂತ್ರಿ

— CM of Karnataka (@CMofKarnataka)

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಕಠಿಣ ನಿರ್ಬಂಧಗಳನ್ನು ಮುಂದುವರೆಸಲಾಗಿದೆ. ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮನವಿ ಮಾಡಿದರು.

click me!