ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಸುಲಿಗೆಗೆ ಇಳಿದ ಖಾಸಗಿ ಬಸ್ ಸಂಸ್ಥೆಗಳು!

Published : Apr 26, 2021, 04:59 PM IST
ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಸುಲಿಗೆಗೆ ಇಳಿದ ಖಾಸಗಿ ಬಸ್ ಸಂಸ್ಥೆಗಳು!

ಸಾರಾಂಶ

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಜನರ ಓಡಾಟ ಜೋರಾಗಿದೆ. ಅದರಲ್ಲೂ ಖಾಸಗಿ ಬಸ್ ಸಂಸ್ಥೆಗಳು ಸುಲಿಗೆಗೆ ಇಳಿದಿವೆ.

ಬೆಂಗಳೂರು, (ಏ.26): ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಇದೇ 27ರಿಂದ 14 ದಿನಗಳ ವರೆಗೆ ಕರ್ನಾಟಕ ಲಾಕ್‌ಡೌನ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಹಲವು ತವರ ಜನರ ಪರದಾಟ ಶುರುವಾಗಿದೆ.

ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ಜನರು ತವರಿನತ್ತ ತೆರಳು ಬಸ್‌ಗಾಗಿ ಕಾಯುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್‌ನಲ್ಲಿ ಫುಲ್ ರಷ್ ಆಗಿದೆ.

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಸುಲಿಗೆಗೆ ಇಳಿದ ಖಾಸಗಿ ಬಸ್ ಸಂಸ್ಥೆಗಳು
ಹೌದು...ಇಂತಹ ಸಂದರ್ಭಗಳು ಖಾಸಗಿ ಬಸ್ ಸಂಸ್ಥೆಗಳಿಗೆ ಹಬ್ಬವಿದ್ದಂತೆ. ಸಿಕ್ಕಿದ್ದೇ ಸೀರುಂಡೆ ಎನ್ನುವಂತೆ ಟಿಕೆಟ್‌ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ.

ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಇಂದು (ಸೋಮವಾರ) ಬಿಟ್ರೆ ನಾಳೆಯಿಂದ (ಏ.27) ಸಾರ್ವಜನಿಕ ಸಾರಿಗೆ ಇಲ್ಲ. ಇದರಿಂದ ಅನಿರ್ವಾಯವಾಗಿ ಜನರು ಊರಿಗೆ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ. ಇದೇ ಸಿಕ್ಕಿದ್ದೇ ಚಾನ್ಸ್ ಎಂದು ಖಾಸಗಿ ಬಸ್ ಸಂಸ್ಥೆಗಳು ಸುಲಿಗೆಗೆ ಇಳಿದಿವೆ.  500 ರೂ ಇದ್ದ ಟಿಕೆಟ್ ಬೆಲೆ 2000ಗೆ ಏರಿಕೆ ಮಾಡಿವೆ. ಇದನ್ನು ಹಗಲು ದರೋಡೆ ಎನ್ನದೇ ಮತ್ತೇನು ಎನ್ನಬೇಕು ಅಲ್ವೇ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ