ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಯಶೋಧಮ್ಮ ಅವರು ಮತಗಟ್ಟೆಯಲ್ಲೇ ಬಿದ್ದು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ (ಏ.26): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆಂದು ತೆರಳಿದ್ದ ಚುನಾವಣಾ ಸಿಬ್ಬಂದಿ ಯಶೋಧಮ್ಮ ಎನ್ನುವವರು ಕಾರ್ಯ ನಿರ್ವಹಿಸುತ್ತಲೇ ಲೋ ಬಿಪಿಯಿಂದಾಗಿ ತಲೆ ಸುತ್ತು ಬಂದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಅಷ್ಟರೊಳಗೆ ಚುನಾವಣಾ ಸಿಬ್ಬಂದಿಯ ಜೀವ ಹೊರಟೇ ಹೋಗಿತ್ತು.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಹೊಟ್ಟೆಪ್ಪನಹಳ್ಳಿ ಮತಗಟ್ಟೆ ಸಿಬ್ಬಂದಿ ಯಶೋಧಮ್ಮ(55) ಎಂದು ಗುರುತಿಸಲಾಗಿದೆ. ಎಲ್ಲ ಚುನಾವಣಾ ಸಿಬ್ಬಂದಿಯಂತೆ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತರಾಗಿದ್ದಾರೆ. ಮೃತ ಯಶೋಧಮ್ಮ ಚಳ್ಳಕೆರೆ ಪಟ್ಟಣದ ವಿಠಲ ನಗರದ ನಿವಾಸಿಯಾಗಿದ್ದರು. ಚುನಾವಣಾ ಕಾರ್ಯಕ್ಕೆ ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ.
undefined
ಕರ್ನಾಟಕ Election 2024 Live: 11ಕ್ಕೆ ದ.ಕ.ದಲ್ಲಿ ಹೆಚ್ಚು ಶೇ.31, ಬೆಂಗಳೂರು ಸೆ.ಕಡಿಮೆ ವೋಟಿಂಗ್...
ಚುನಾವಣಾ ಸಿಬ್ಬಂದಿ ಮೃತಪಟ್ಟ ಬೆನ್ನಲ್ಲಿಯೇ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರು ಚಳ್ಳಕೆರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.