ಲೋಕಸಭಾ ಚುನಾವಣೆ 2024: ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರಿಗೆ ನಿಷೇಧ

By Ravi Janekal  |  First Published May 6, 2024, 9:54 PM IST

ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಮಂಗಳವಾರ(ಮೇ.7) ಮತದಾನ ನಡೆಯಲಿರುವ ಹಿನ್ನೆಲೆ ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮ ದೇವಿ ದರ್ಶನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


ಬೆಳಗಾವಿ (ಮೇ.6): ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಮಂಗಳವಾರ(ಮೇ.7) ಮತದಾನ ನಡೆಯಲಿರುವ ಹಿನ್ನೆಲೆ ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮ ದೇವಿ ದರ್ಶನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನ. ಪ್ರತಿ ಮಂಗಳವಾರ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಗುಡ್ಡಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ನಾಳೆ ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ನಡೆಯುವ ಹಿನ್ನೆಲೆ ಮತದಾನ ಬಿಟ್ಟು ಭಕ್ತರು ದೇವಸ್ಥಾನಕ್ಕೆ ಬರ್ತಾರೆ ಅಂತಾ ಭೇಟಿಗೆ ನಿಷೇಧ ಹೇರಿದೆ. ದೇವಸ್ಥಾನದ ಮುಂಭಾಗ ಬ್ಯಾರಿಕೇಡ್ ಹಾಕಿರುವ ಪೊಲೀಸರು. ದೇವಸ್ಥಾನದ ಒಳಗಡೆ ಯಾರೂ ಬರದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Latest Videos

undefined

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಮೈತ್ರಿ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಕೆ ಶಿವಕುಮಾರ

ಯಲ್ಲಮ್ಮ ದೇವಿಗೆ ಎಂದಿನಂತೆ ಪೂಜಾ ಕಾರ್ಯಗಳು ನಡೆಯಲಿವೆ. ನಾಳೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಪ್ರತಿಯೊಬ್ಬರು ಮತ ಚಲಾಯಿಸಿ ದೇವಸ್ಥಾನಕ್ಕೆ ಯಾರೂ ಬರಬೇಡಿ ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್‌ಬಿ ಮಹೇಶ್ ಮನವಿ ಮಾಡಿದ್ದಾರೆ.

click me!