ಬಿಜೆಪಿ ಸರ್ಕಾರದ ವಿರುದ್ಡ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು

By Kannadaprabha News  |  First Published Nov 19, 2024, 11:32 AM IST

ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹರಿಹಾಯ್ದಿದ್ದಾರೆ.


ಬೆಂಗಳೂರು : ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹರಿಹಾಯ್ದಿದ್ದಾರೆ.

ಭಾನುವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

Latest Videos

undefined

ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ ಶೇ.40 ಕಮಿಷನ್ ಆರೋಪಗಳು ಶುದ್ಧ ಸುಳ್ಳೆಂದು ಲೋಕಾಯುಕ್ತ ತನಿಖಾಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ಬಹಿರಂಗವಾಗಿದೆ. ಶೇ.40 ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಅಂಬಿಕಾಪತಿ ಗುತ್ತಿಗೆ ಕೆಲಸಗಳನ್ನು ಮಾಡುವುದನ್ನು ಬಿಟ್ಟೇ ಆರು ವರ್ಷವಾಗಿತ್ತು. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಕಟ್ಟಿದ ಸುಳ್ಳಿನ ಮಹಲು ಸಂಪೂರ್ಣ ಕುಸಿದುಬಿದ್ದಿದೆ ಎಂದರು.

22 ವರ್ಷದ ಲಿವ್‌ ಇನ್‌ ಬಳಿಕ ಪ್ರಿಯಕರನ ವಿರುದ್ಡ ರೇಪ್‌ ಕೇಸ್‌; ಮಹಿಳೆ ಕೇಸ್‌ ರದ್ದುಪಡಿಸಿದ ಹೈಕೋರ್ಟ್‌

ಸಿಎಂ ವಿರುದ್ಧ ವಾಗ್ದಾಳಿ:

ಸಿದ್ದರಾಮಯ್ಯ ತಮ್ಮ 40 ವರ್ಷದ ಜೀವನ ತೆರೆದ ಪುಸ್ತಕ ಅಂದವರು. ಇವತ್ತು ಅವರ ತೆರೆದ ಪುಸ್ತಕ ಪುಟಗಳನ್ನು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ. ಸಿದ್ದರಾಮಯ್ಯ ತಾವೇ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಯಿಂದ ವಿಚಾರಣೆ ಎದುರಿಸುತ್ತಿರುವುದು ಕನ್ನಡಿಗರ ದುರ್ದೈವ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ನಡೆದಿರುವ 700 ಕೋಟಿ ಭ್ರಷ್ಟಾಚಾರದ ಬಗ್ಗೆ ಮಹಾರಾಷ್ಟ್ರದ ಚುನಾವಣಾ ಪ್ರಚಾರದ ವೇಳೆ ಪ್ರದಾನ ಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ. ಅದು ಪ್ರಧಾನಿ ಮೋದಿ ಅವರು ಮಾಡಿರುವ ಆರೋಪವಲ್ಲ. ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ. ಮದ್ಯ ಮಾರಾಟಗಾರರ ಸಂಘ ಬರೆದಿರುವ ಪತ್ರವನ್ನು ಒಮ್ಮೆ ಮುಖ್ಯಮಂತ್ರಿಗಳು ತರಿಸಿಕೊಂಡು ಓದಬೇಕು ಎಂದು ತಿಳಿಸಿದರು

ಟೆಂಡರ್ ವಿಳಂಬ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250 ರೀತಿ ಔಷಧ ಬಂದ್!

ಲೈಸೆನ್ಸ್ ನವೀಕರಣಕ್ಕೆ ರೇಟು ಎಷ್ಟು, ತಿಂಗಳ ಹಣದ ಹೆಸರಿನಲ್ಲಿ ಪ್ರತಿ ಮದ್ಯದ ಅಂಗಡಿಯಿಂದ ಎಷ್ಟು ವಸೂಲಿ ಆಗುತ್ತಿದೆ, ಅಬಕಾರಿ ಇಲಾಖೆಯ ಟ್ರಾನ್ಸಫರ್ ದಂಧೆಯಲ್ಲಿ ಯಾವ ಮಟ್ಟದ ಅಧಿಕಾರಿಗೆ ಎಷ್ಟು ಲಂಚ ಎಂಬುದನ್ನು ಆ ಪತ್ರದಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ. ಅದನ್ನು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದಲ್ಲಿ ಹೇಳಿದ್ದಾರೆಯೇ ಹೊರತು ಅವರು ಯಾವುದೇ ಸುಳ್ಳು ಆರೋಪ ಮಾಡಿಲ್ಲ. ಸಾಕ್ಷಿ ಬೇಕಾದರೆ ಸಿದ್ದರಾಮಯ್ಯ ಮದ್ಯ ಮಾರಾಟಗಾರರ ಸಂಘದ ಆರೋಪದ ತನಿಖೆ ಮಾಡಲು ಮತ್ತೊಂದು ಎಸ್ಐಟಿ ರಚಿಸಲಿ. ಮದ್ಯ ಮಾರಾಟಗಾರರು ಮಾಡುತ್ತಿರುವ ಆರೋಪ ಸುಳ್ಳಾದರೆ ಅವರ ಲೈಸೆನ್ಸ್ ರದ್ದು ಮಾಡಿ ಅಂಗಡಿಗಳಿಗೆ ಬೀಗ ಹಾಕಿಸಿ ಎಂದು ವಾಗ್ದಾಳಿ ನಡೆಸಿದರು

click me!