
ಬೆಂಗಳೂರು (ಜ.21): ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡಪರ ಸಮಘಟನೆಗಳು ಇಂದು ಮತ್ತು ಶುಕ್ರವಾರ (ಜ.21,22): ರಾಜ್ಯದ ಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು ಇಂದುಕರ್ನಾಟಕ ಗಡಿ ಅತ್ತಿಬೆಲೆ, ಶುಕ್ರವಾರ ಬೆಳಗಾವಿ ಗಡಿ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ.
ತಮಿಳು ಬ್ಯಾನರ್ ಕಿತ್ತುಹಾಕಿದ ವಾಟಾಳ್ ಮೇಲೆ ಕೇಸ್, ಕೇಸ್ ..
ಈ ಬಗ್ಗೆ ಮಾತನಾಡಿರುವ ವಾಟಾಳ್ ನಾಗರಾಜ್ ಮಹಾಜನ್ ವರದಿ ಪ್ರಕಾರ ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು. ಆದರು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮನಸೋ ಇಚ್ಛೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಚಾಮರಾಜನಗರ: ನಡುರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ ..
ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ ರಾ ಗೊವಿಮದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅನೇಕರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ