Border dispute: ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!

Published : Dec 05, 2022, 11:35 AM IST
Border dispute: ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!

ಸಾರಾಂಶ

ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ.

ಬೆಂಗಳೂರು (ಡಿ.5) : ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ.

ಇನ್ನೊಂದೆಡೆ ಕರವೇ ರಾಜ್ಯಾದ್ಯಂತ ತನ್ನ ಕಾರ್ಯಕರ್ತರಿಗೆ ಬೆಳಗಾವಿಗೆ ಆಗಮಿಸುವಂತೆ ಕರೆಕೊಟ್ಟಿದ್ದು, ಬೆಂಗಳೂರಿನಿಂದಲೇ 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಚಿವರು ಆಗಮಿಸುವ ದಿನದಂತೆ ಬೆಳಗಾವಿ ನಗರ ಮತ್ತು ಗಡಿ ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ಕನ್ನಡ ಸಂಘಟನೆಗಳಿಂದ ಸೋಮವಾರ ಬೆಂಗಳೂರಿನಲ್ಲಿ ಮಹಾರಾಷ್ಟ್ರ ಸಚಿವರ ಆಗಮನ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Border Dispute: ಯಥಾಸ್ಥಿತಿ- ಇಲ್ಲವೇ ಮಹಾಜನ ವರದಿ ಜಾರಿಗೊಳಿಸಿ: ಹೆಚ್.ಕೆ. ಪಾಟೀಲ ಸಲಹೆ

ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುತ್ತಿರುವ ಹಿನ್ನೆಲೆ ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರ ಸಭೆ ನಡೆಸಿತು.

ಸಭೆ ಬಳಿಕ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ, ‘ಬೆಳಗಾವಿ ಹಲವು ಪ್ರದೇಶಗಳನ್ನು ಕಬಳಿಸುವ ಸಂಚನ್ನು ಮಹಾರಾಷ್ಟ್ರ ನಿರಂತರವಾಗಿ ನಡೆಸುತ್ತಿದೆ. ಇದಕ್ಕಾಗಿಯೇ ಡಿ.6ರಂದು ಬೆಳಗಾವಿಯಲ್ಲಿ ಮಹಾರಾಷ್ಟ್ರದ ಸಚಿವರು ಹಾಗೂ ಶಾಸಕರು ಸಭೆಗಳನ್ನು ನಡೆಸಲಿದ್ದಾರೆ. ಸಭೆಗೆ ಬಂದ ಸಂದರ್ಭದಲ್ಲಿ ಕರ್ನಾಟಕವನ್ನು ಅವರು ಹೀಯಾಳಿಸುತ್ತಾರೆ. ಅಲ್ಲದೇ ಕನ್ನಡಿಗರನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುತ್ತಾರೆ. ಮರಾಠಿಗರು-ಕನ್ನಡಿಗರ ನಡುವೆ ಎತ್ತಿಕಟ್ಟುತ್ತಾರೆ. ಹೀಗಾಗಿ, ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಗಡಿಯಲ್ಲಿ ಅವರನ್ನು ಬಂಧಿಸಬೇಕು ಅಥವಾ ವಾಪಸ್‌ ಕಳುಹಿಸಬೇಕು ಎಂದು ಬೆಳಗಾವಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ವರಿಷ್ಠರಿಗೆ ಒತ್ತಾಯಿಸಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದಿಂದ ಸಮರ್ಥ ವಾದ, ಸಿಎಂ ಬೊಮ್ಮಾಯಿ

ರಾಜ್ಯಾದ್ಯಂತ ಕರವೇ ಕಾರ್ಯಕರ್ತರಿಗೆ ಕರೆಕೊಟ್ಟಿದ್ದು, ಎಲ್ಲರೂ ಮಂಗಳವಾರ ಬೆಳಿಗ್ಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಬೆಳಗಾವಿಗೆ ತೆರಳುತ್ತೇವೆ. ಸೋಮವಾರ ಸಂಜೆ ಬೆಂಗಳೂರಿನಿಂದ 100 ವಾಹನಗಳಲ್ಲಿ ಬೆಳಗಾವಿ ಕಡೆ ನಾವು ಹೊರಡಲಿದ್ದೇವೆ. ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರ ಸಚಿವರಿಗೆ ಅವಕಾಶ ಮಾಡಿಕೊಟ್ಟರೂ, ಕರವೇ ಹೋರಾಟಗಾರರು ಮಾತ್ರ ಬೆಳಗಾವಿ ಪ್ರವೇಶಕ್ಕೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್