
ಬೆಂಗಳೂರು (ಫೆ.03): ರಾಜ್ಯ ಸರ್ಕಾರದಿಂದ ವಾರ್ಷಿಕವಾಗಿ ಕೊಡಮಾಡುವ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಸುವರ್ಣ ನ್ಯೂಸ್ ವಾಹಿನಿಯ ನಾಲ್ವರು ಹಾಗೂ ಕನ್ನಡ ಪ್ರಭ ಪತ್ರಿಕೆಯ ಒಬ್ಬರು ಸೇರಿದಂತೆ ಏಷ್ಯಾನೆಟ್ ಸಂಸ್ಥೆಯ ಐವರು ಸೋಮವಾರ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು. 2023-24ನೇ ಸಾಲಿನಲ್ಲಿ ರಾಜ್ಯದ ವಿವಿಧ ಸುದ್ದಿವಾಹಿನಿ ಮತ್ತು ಪತ್ರಿಕೆಯ 60 ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಲ್ಲ ಅರ್ಹ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕಳೆದ ಜನವರಿ ತಿಂಗಳೇ ಪ್ರಕಟಿಸಲಾಗಿದ್ದು, ಇಂದು ಪ್ರಶಸ್ತಿ ಸ್ವೀಕರಿಸಿದರು.
ಇದನ್ನೂ ಓದಿ: ಏಷ್ಯಾನೆಟ್ ಸುವರ್ಣ ನ್ಯೂಸ್‌ನ ನಾಲ್ವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಏಷ್ಯಾನೆಟ್ ಸುವರ್ಣ ನ್ಯೂಸ್ ರಾಜಕೀಯ ವಿಭಾಗದ ಮುಖ್ಯಸ್ಥ ಆನಂದ ಪರಮೇಶ್ವರ ಬೈದನಮನೆ, ನಿರೂಪಣಾ ವಿಭಾಗದ ಮುಖ್ಯಸ್ಥೆ ಭಾವನಾ ನಾಗಯ್ಯ, ಡಿಜಿಟಲ್ ವಿಭಾಗದ ಮುಖ್ಯಸ್ಥೆ ನಿರುಪಮಾ ಕೆ.ಎಸ್., ಹಿರಿಯ ವರದಿಗಾರ ನಂದೀಶ್ ಮಲ್ಲೇನಹಳ್ಳಿ, ಕನ್ನಡ ಪ್ರಭ ಹುಬ್ಬಳ್ಳಿ ವಿಭಾಗದ ಹಿರಿಯ ವರದಿಗಾರ ಶಿವಾನಂದ ಗೊಂಬಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.
ಆನಂದ ಬೈದನಮನೆ, ಪ್ರಶಸ್ತಿ ಸ್ವೀಕಾರ
ನಿರುಪಮಾ ಕೆ.ಎಸ್. ಪ್ರಶಸ್ತಿ ಸ್ವೀಕಾರದ ಕ್ಷಣ
ಭಾವನಾ ನಾಗಯ್ಯ, ಪ್ರಶಸ್ತಿ ಸ್ವೀಕಾರ
ನಂದೀಶ್ ಮಲ್ಲೇನಹಳ್ಳಿ, ಪ್ರಶಸ್ತಿ ಸ್ವೀಕಾರ
ಪ್ರಶಸ್ತಿ ಸ್ವೀಕರಿಸಿ ನಗೆ ಬೀರಿದ ಶಿವಾನಂದ ಗೊಂಬಿ,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ