
ಬೆಂಗಳೂರು (ಜು.08): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಇಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜನೆ ಮಾಡಿದೆ. ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ನರೇಂದರ್ ನೇತೃತ್ವದಲ್ಲಿ ಲೋಕ್ ಅದಾಲತ್ ನಡೆಯಲಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳೂ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ. ರಾಜ್ಯಾದ್ಯಂತ ಒಳ್ಳೆಯ ರೆಸ್ಪಾನ್ಸ್ ಸಿಗ್ತಿದೆ. ವ್ಯಾಜ್ಯದಾರರು ಮುಂದೆ ಬಂದು ಕೇಸ್ ಇತ್ಯರ್ಥಕ್ಕೆ ನ್ಯಾಯಮೂರ್ತಿಗಳ ಮನವಿ ಮಾಡಿದ್ದು, ಇಂದು ಸುಮಾರು 25 ಲಕ್ಷ ಪ್ರಕರಣಗಳ ಇತ್ಯರ್ಥ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಹೈಕೋರ್ಟ್ ಮಾತ್ರವಲ್ಲ ರಾಜ್ಯದ ಎಲ್ಲಾ ಕೋರ್ಟ್‌ಗಳಲ್ಲಿಯೂ ಇಂದು ಲೋಕ್ ಅದಾಲತ್ ನಡೆಯುತ್ತಿದೆ ಎಂದು ನ್ಯಾಯಮೂರ್ತಿ ಜಿ. ನರೇಂದರ್ ಮಾಹಿತಿ ನೀಡಿದರು.
ಇನ್ನು ಅಪಘಾತ ಪ್ರಕರಣವೊಂದಕ್ಕೆ ಸಂಬಂಧ ಪಟ್ಟಂತೆ 1.15ಕೋಟಿ ಪರಿಹಾರ ಘೋಷಣೆ ಮಾಡಿದ್ದು, ಕೆಳ ನ್ಯಾಯಾಲಯ 97 ಲಕ್ಷ ಪರಿಹಾರದ ತೀರ್ಪು ನೀಡಿತ್ತು. ಈ ಬಗ್ಗೆ ಹೈಕೋರ್ಟ್‌ಗೆ ವಿಮಾ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಇದೇ ಪ್ರಕರಣದಲ್ಲಿ 1.15 ಕೋಟಿ ಪರಿಹಾರ ನೀಡಲು ವಿಮಾ ಕಂಪನಿ ಒಪ್ಪಿಗೆ ನೀಡಿದ್ದು, ಇದೇ ರೀತಿಯ ಇಂದು ರಾಜ್ಯಾದ್ಯಂತ ಲಕ್ಷಾಂತರ ಪ್ರಕರಣಗಳು ಇತ್ಯರ್ಥದ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ನ್ಯಾಯಮೂರ್ತಿ ನ್ಯಾ.ಸೋಮಶೇಖರ್ ಮಾಹಿತಿ ನೀಡಿದರು
ಇದು ದಾಖಲೆ ಸ್ಥಾಪಿಸಿಕೊಳ್ಳಲು ಮಂಡಿಸಿದ ಬಜೆಟ್: ಎಚ್.ಡಿ.ಕುಮಾರಸ್ವಾಮಿ ಟೀಕೆ
ಶಿವಮೊಗ್ಗದಲ್ಲಿಂದು ಮೆಗಾ ಲೋಕ್ ಅದಾಲತ್: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್ ಸೇರಿದಂತೆ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣಗಳನ್ನು ಜುಲೈ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು 50,000 ಪ್ರಕರಣಗಳಲ್ಲಿ 12,500 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಅರ್ಹವಾದವುಗಳು ಎಂದು ಗುರುತಿಸಲಾಗಿದೆ. ಅವುಗಳಲ್ಲಿ ಹೆಚ್ಚಿನ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಉದ್ದೇಶಿಸಲಾಗಿದೆ ಎಂದರು. ಕಳೆದ ಬಾರಿಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ದಾಖಲಾಗದಿರುವ 70,000 ಹಾಗೂ ನ್ಯಾಯಾಲಯದಲ್ಲಿ ನೋಂದಣಿಯಾಗಿದ್ದ ಸುಮಾರು 8,000 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು.
14 ಬಜೆಟ್‌ಗಳ ಪೈಕಿ ಮೊದಲ ಬಾರಿಗೆ ಕೊರತೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯ
ವಿಶೇಷವಾಗಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕರಣಗಳು, ವಿದ್ಯುತ್, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೇ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಸಿ, ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಗೊಳಿಸಲಾಗುವುದು. ಇದರಿಂದಾಗಿ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಶೀಘ್ರ ನ್ಯಾಯದಾನ ಆಗಲಿದೆ. ಆದ್ದರಿಂದ ಸಾರ್ವಜನಿಕರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಹಾಗೂ ನ್ಯಾಯಾಲಯಗಳ ಎಲ್ಲ ನ್ಯಾಯವಾದಿಗಳು ಅದಾಲತ್‌ಗೆ ಸಹಕರಿಸುವಂತೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ