ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ವರ್ಗಾವಣೆ: ಜಗದೀಶ್‌ ಆಗಮನ

By Sathish Kumar KHFirst Published Jun 27, 2023, 8:29 PM IST
Highlights

ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಗದೀಶ್‌ ಎಂ.ಕೆ. ಅವರನ್ನು ನೂತನ ವ್ಯವಸ್ಥಾಪನ ನಿರ್ದೇಶಕರಾಗಿ ಸರ್ಕಾರ ನೇಮಕ ಮಾಡಿದೆ.

ಬೆಂಗಳೂರು (ಜೂ.27): ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಹಿರಿಯ ಕೆಎಎಸ್‌ ಅಧಿಕಾರಿ ಜಗದೀಶ್‌ ಎಂ.ಕೆ. ಅವರನ್ನು ನೂತನ ವ್ಯವಸ್ಥಾಪನ ನಿರ್ದೇಶಕರಾಗಿ ಸರ್ಕಾರ ನೇಮಕ ಮಾಡಿದೆ.

ಹೊಸ ಅಧ್ಯಕ್ಷರಿಂದ ಹಳೆಯ ಎಂಡಿ ವರ್ಗ:  ಕಳೆದ ವಾರ (ಜೂ.21)ರಂದು ಕರ್ನಾಟಕ ಹಾಲು ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಭೀಮಾನಾಯ್ಕ ಅವರು, ನಂದಿನಿ ಹಾಇನ ದರವನ್ನು ಹೆಚ್ಚಳ ಮಾಡುವ ಮುನ್ಸೂಚನೆ ನಿಡಿದ್ದರು. ಆದರೆ, ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯ ಬೆನ್ನಲ್ಲೇ ಹಾಲಿನ ದರ ಹೆಚ್ಚಳದ ಬಗ್ಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಇದರಿಂದ ನೂತನ ಅಧ್ಯಕ್ಷ ಭೀಮಾನಾಯ್ಕ ಅವರಿಗೆ ವರ್ಚಸ್ಸಿಗೆ ಧಕ್ಕೆಯೂ ಆಗಿದ್ದು, ಕೂಡಲೇ ನಂದಿನಿ ಹಾಲಿನ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಇದಕ್ಕೆಲ್ಲ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ಅವರ ಸಲಹೆಯೇ ಕಾರಣವೆಂದು ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

Latest Videos

ಕರ್ನಾಟಕದಲ್ಲಿ ಕೈಗಾರಿಕೆಗಳ ಆರಂಭಕ್ಕೆ 11 ಸಾವಿರ ಎಕರೆ ಭೂಮಿ ಲಭ್ಯ

ನೂತನ ಅಧ್ಯಕ್ಷ ಭೀಮಾನಾಯ್ಕ ನಡೆದುಬಂದ ಹಾದಿ: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್‌)ದ ನೂತನ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಮಾಜಿ ಶಾಸಕರು ಹಾಗೂ ರಾ.ಬ.ಕೊ.ವಿ. ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್‌. ಭೀಮಾನಾಯ್ಕ ಅವಿರೋಧ ಆಯ್ಕೆಯಾಗಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಹೊಸಪೇಟೆಯ ಕಲ್ಲಹಳ್ಳಿಯವರಾದ ಎಸ್‌. ಭೀಮಾನಾಯ್ಕರ ಕುಟುಂಬ ಮೂಲತಃ ಕೃಷಿಕ ಕುಟುಂಬವಾಗಿದೆ. ಹೈನುಗಾರಿಕೆ ಬಗ್ಗೆ ಆಸಕ್ತಿ ಹೊಂದಿದ್ದ ಭೀಮಾನಾಯ್ಕ ಅವರು ಕಳೆದ ಮೂರುವರೆ ವರ್ಷಗಳಿಂದ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದರು.

ಹಾಲಿನ ದರ ಏರಿಕೆ ಸದ್ಯಕ್ಕಿಲ್ಲ: ಬೆಂಗಳೂರು (ಜೂ.23): ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿಲ್ಲ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಮುಖ್ಯಮಂತ್ರಿಗಳ ಭೇಟಿ ಬಳಿಕ ತಿಳಿಸಿದ್ದಾರೆ. ಹೀಗಾಗಿ ಹಾಲಿನ ದರ ಸದ್ಯಕ್ಕೆ ಏರಿಕೆಯಾಗುವ ಆತಂಕವಿಲ್ಲ ಎನ್ನಲಾಗಿದೆ.

ಆರು ಮಂದಿ ಬಲಿಕೊಟ್ಟರೂ ಎಚ್ಚೆತ್ತುಕೊಳ್ಳದ ಸರ್ಕಾರ: ಮತ್ತೆ ಕಲುಷಿತ ನೀರು ಸೇವನೆಯಿಂದ 54 ಮಂದಿಗೆ ವಾಂತಿ, ಬೇಧಿ

ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು: ಕೆಎಂಎಫ್‌ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮನಾಯ್ಕ್‌ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಂಎಫ್‌ ಅಧ್ಯಕ್ಷ ಭೀಮ ನಾಯ್ಕ್‌ ಅವರು, ರಾಜ್ಯ ಸರ್ಕಾರ ಹಾಲು ಉತ್ಪಾದಕರ ರೈತರಿಗೆ ಪ್ರೋತ್ಸಾಹ ಧನವಾಗಿ ಪ್ರತಿ ಲೀಟರ್‌ಗೆ 5 ರು. ನೀಡುತ್ತಿದೆ. ಇನ್ನು 2 ರು.ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಇದೆ. ಪ್ರಸ್ತುತ ಎಲ್ಲ ಹಾಲು ಒಕ್ಕೂಟಗಳು ಪ್ರತಿ ಲೀಟರ್‌ಗೆ 5 ರು.ಬೆಲೆ ಹೆಚ್ಚಿಸುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು.

click me!