ಸಮಾಜದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಸಿಎಂ ಸಿದ್ದರಾಮಯ್ಯನವರು ಗಟ್ಟಿಯಾಗಿ ನಿಂತಿದ್ದಾರೆ. ಅಭಿವೃದ್ಧಿ ಸಹಿಸದ ಕೆಲವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ ಎಂದು ಜೆಡಿಎಸ್-ಕಾಂಗ್ರೆಸ್ ವಿರುದ್ಧ ಸಚಿವ ಎನ್‌ಎಸ್ ಬೋಸರಾಜ ವಾಗ್ದಾಳಿ ನಡೆಸಿದರು.
ರಾಯಚೂರು (ಅ.5): ಸಮಾಜದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಸಿಎಂ ಸಿದ್ದರಾಮಯ್ಯನವರು ಗಟ್ಟಿಯಾಗಿ ನಿಂತಿದ್ದಾರೆ. ಅಭಿವೃದ್ಧಿ ಸಹಿಸದ ಕೆಲವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ ಎಂದು ಜೆಡಿಎಸ್-ಕಾಂಗ್ರೆಸ್ ವಿರುದ್ಧ ಸಚಿವ ಎನ್‌ಎಸ್ ಬೋಸರಾಜ ವಾಗ್ದಾಳಿ ನಡೆಸಿದರು.
ಇಂದು ಮಾನ್ವಿಯಲ್ಲಿ ನಡೆದ ಕಾಂಗ್ರೆಸ್ ಸ್ವಾಭಿಮಾನ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಶಾಸಕ, ಸಚಿವರಿಗೆ ಸಹಕಾರ ನೀಡಿದ್ದಾರೆ. ರಾಜ್ಯಮಟ್ಟದಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸಹಕಾರ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಹಣ ಕೊಟ್ಟಿದ್ದಾರೆ. 15 ಬಾರಿ ರಾಜ್ಯದ ಬಜೆಟ್ ಕೊಟ್ಟವರು ಸಿದ್ದರಾಮಯ್ಯನವರು ಎಂದು ಭಾಷಣದುದ್ದಕ್ಕೂ ಸಿಎಂ ಸಿದ್ದರಾಮಯ್ಯ ಬಗ್ಗೆ ಹಾಡಿಹೊಗಳಿದರು.
undefined
ರಾಯಚೂರು: ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ
ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಎಂಟು ತಿಂಗಳಲ್ಲೇ 56 ಸಾವಿರ ಕೋಟಿ ರೂ. ಖರ್ಚು ಮಾಡಿ ಪಂಚ ಗ್ಯಾರೆಂಟಿ ನೀಡಿದರು. ಇದರಿಂದಾಗಿ 1,590 ಕೋಟಿ ರೂಪಾಯಿ ಗ್ಯಾರೆಂಟಿಯಿಂದ ರಾಜ್ಯದ ಜನರಿಗೆ ತಲುಪಿದೆ. ಜನರಿಗೆ ಕೊಟ್ಟ ಮಾತು ಸಿಎಂ ಸಿದ್ದರಾಮಯ್ಯ ಉಳಿಸಿಕೊಂಡು ಹೋಗುತ್ತಿದ್ದಾರೆ. ಹಾಸ್ಟೆಲ್, ರಸ್ತೆ, ಆಸ್ಪತ್ರೆ, ನೀರಾವರಿಗೆ ಕೋಟಿ ಕೋಟಿ ಹಣ ನೀಡಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಸಿದ್ದರಾಮಯ್ಯನವರ ನಾಯಕತ್ವಕ್ಕೆ ನಾವು ಶಕ್ತಿ ಕೊಡಬೇಕು. ಆದರೆ ಕೆಲವು ಈ ಸರ್ಕಾರಕ್ಕೆ ಮಸಿ ಬಡಿಯುವ ಕೆಲಸ ಮಾಡುತ್ತಿದ್ದಾರೆ. ನಾವು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ಇರುತ್ತೇವೆ ಎಂದರು.
ಉಡಾಫೆ ಮಾತು ಬಿಟ್ಟು ಜನ ಕೊಟ್ಟಿರೋ ಅಧಿಕಾರ ಸರಿಯಾಗಿ ನಿಭಾಯಿಸಲಿ: ಹೆಚ್‌ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ
ಸದಾ ಕಾಲ ಬಡವರ ಬಗ್ಗೆ ಚಿಂತನೆ ನಡೆಸುವ ಸಿದ್ದರಾಮಯ್ಯರ ಜೀವನ ಎಲ್ಲರಿಗೂ ತಿಳಿದಿರೋ ವಿಚಾರವಾಗಿದೆ. ತಮ್ಮ 40 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಅನೇಕ ಹೋರಾಟ ನಡೆಸಿದ್ದಾರೆ. ನಿಸ್ವಾರ್ಥ ಸೇವೆ, ನಿಷ್ಕಳಂಕ ಆಡಳಿತ ನೀಡಿದ್ದಾರೆ. ಸಿದ್ದರಾಮಯ್ಯರಿಗೆ ಬೆಂಬಲವಾಗಿ ಈ ಭಾಗದ ಜನರು ಗಟ್ಟಿಯಾಗಿ ನಿಲ್ತಾರೆ ಅನ್ನೋದಕ್ಕೆ ಕಾರ್ಯಕ್ರಮಕ್ಕೆ ಬಂದಿರುವ ನೀವೇ ಸಾಕ್ಷಿ. ಈ ಭಾಗದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯರ ಪ್ರಯತ್ನದ ಭಾಗವಾಗಿ ಇಲ್ಲಿ ಅಭಿವೃದ್ಧಿಯಾಗಿದೆ. ಜನರಿಗೆ ಆಶ್ವಾಸನೆ ನೀಡಿದಂತೆ ಗ್ಯಾರಂಟಿಗಳನ್ನ ಅನುಷ್ಠಾನಗೊಳಿಸಿದ್ದಾರೆ. ಕೇಂದ್ರ ಸರಕಾರ ಎಷ್ಟೇ ಕಷ್ಟ ಕೊಟ್ಟರೂ ಅಭಿವೃದ್ಧಿಯತ್ತ ನಡೆದಂತ ವ್ಯಕ್ತಿ ಸಿದ್ದರಾಮಯ್ಯನವರು. ಇಂದು 460 ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ ಎಂದರು.