ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ನೀರಾವರಿ, ಮೂಲಸೌಕರ್ಯ ಯೋಜನೆಗೂ ಹಣ ನೀಡಿಲ್ಲ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವಾಗ್ದಾಳಿ ನಡೆಸಿದರು.
ಚಿತ್ರದುರ್ಗ (ಜು.27): ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ನೀರಾವರಿ, ಮೂಲಸೌಕರ್ಯ ಯೋಜನೆಗೂ ಹಣ ನೀಡಿಲ್ಲ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವಾಗ್ದಾಳಿ ನಡೆಸಿದರು.
ಇಂದು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕೇಂದ್ರದ ಇಂತಹ ಮಲತಾಯಿ ಧೋರಣೆಗೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸುಳ್ಳು ಪ್ರಚಾರ ಮಾಡಿಕೊಂಡು ಬಂದಿದೆ. ಹತ್ತು ವರ್ಷಹಳಿಂದ ಬಿಜೆಪಿಯಿಂದ ಸುಳ್ಳು ಹೇಳಿಯೇ ಅಧಿಕಾರ ನಡೆಸಿದೆ. ಜನರನ್ನು ಮರುಳು ಮಾಡಿ ಮೂರನೇ ಬಾರಿಗೆ ಅಧಿಕಾರಕ್ಕೂ ಬಂದಿದೆ. ಮಾಡಲು ಕೆಲಸ ಇಲ್ಲದ್ದಕ್ಕೆ ಬಿಜೆಪಿಯಿಂದ ಮೈಸೂರು ಪಾದಾಯತ್ರೆ ಮಾಡುತ್ತಿದ್ದಾರೆ ಮುಡಾ ಹಗರಣ(MUDA Scam), ವಾಲ್ಮೀಕಿ ಹಗರಣ(Valmiki corporation scam) ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಹೀಗಿರುವಾಗ ಯಾವ ಕಾರಣಕ್ಕೆ ಬಿಜೆಪಿ(Karnataka BJP)ಯವರು ಪ್ರತಿಭಟನೆ ಮಾಡಬೇಕು? ಎಂದು ಪ್ರಶ್ನಿಸಿದರು.
ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ: ಮಾಜಿ ಸಂಸದ ಉಗ್ರಪ್ಪ ವಾಗ್ದಾಳಿ
ಇನ್ನು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಪಟ್ಟುಹಿಡಿದಿದ್ದಾರೆ. ಕೆಲ ರಾಜ್ಯಗಳಲ್ಲೂ ಪ್ರಧಾನಿ ಮೋದಿ ರಾಜೀನಾಮೆ ನೀಡುವಂತೆ ಕೇಳಲಾಗಿದೆ. ಸಾವಿರಾರು ಜನ ರೈತರು ಸಾವಿಗೀಡಾಗಿದ್ದಾರೆ ಹಾಗಾದರೆ ಪ್ರಧಾನಿ ರಾಜೀನಾಮೆ ಕೊಟ್ಟಿದ್ದಾರಾ? ಎಂದು ತಿರುಗೇಟು ನೀಡಿದರು. ಇದೇ ವೇಳೆ ರಾಮನಗರ ಹೆಸರು ಬದಲಾವಣೆ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ.2028ಕ್ಕೆ ಮತ್ತೆ ರಾಮನಗರ ಎಂದೇ ಮರುನಾಮಕರಣ ಮಾಡುತ್ತೇವೆ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೊದಲು ಅವರು ಅಧಿಕಾರಕ್ಕೆ ಬರಲಿ ಎಂದರು.
ಶಾಲೆಗೆ ಬರುವಾಗ ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!
ಗೃಹಲಕ್ಷ್ಮೀ ಯೋಜನೆ ಸೇರಿ ಯಾವ ಯೋಜನೆಯೂ ನಿಂತಿಲ್ಲ. ಹಣ ಡೆಬಿಟ್ ಆಗಬೇಕು, ಕೆಲವೊಮ್ಮೆ ಹೆಚ್ಚು ಕಡಿಮೆ ಆಗುತ್ತದೆ ಎಂದರು. ಇದೇ ವೇಳೆ ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಾರೆ ಎಂದರು.