
ದಾವಣಗೆರೆ (ಫೆ.9): ಈ ದೇಶದಲ್ಲಿ ಮುಂದೆ ಅಧಿಕಾರಕ್ಕೆ ಬಂದೇ ಬರುತ್ತೆ. ಸೂಕ್ತ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿಯವರು ದೇಶದ ಪ್ರಧಾನಿಗಳಾಗುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಭವಿಷ್ಯ ನುಡಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಸಚಿವರು, ಬಿಜೆಪಿಯವರು ಈ ದೇಶಕ್ಕೆ ಏನು ಕೊಡುಗೆ ನೀಡಿದ್ದಾರೆ. ಹಳೇ ರೋಡ್ ಗೆ ಟಾರ್ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ ಅಷ್ಟೆ. ಬಿಜೆಪಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅಧಿಕಾರಕ್ಕೆ ಬಂದಂದಿನಿಂದ ಬರೀ ಜಾತಿ ಧರ್ಮದ ಬಗ್ಗೆ ಮಾತನಾಡುವ ಹೊರತಾಗಿ ದೇಶದ ಜನರಿಗೆ ಯಾವ ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ನಾವು ರಾಜನೀತಿಯನ್ನು ಬದಲಿಸಿದ್ದೇವೆ | BJP Wins Delhi । PM Modi speech | Suvarna News
ದೇಶಕ್ಕಾಗಿ ಬಿಜೆಪಿಯವರು ಏನೂ ಮಾಡಿಲ್ಲ ಅನ್ನೋದು ಜನರಿಗೆ ಗೊತ್ತಿದೆ. ದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆಡಳಿತ ವಿರೋಧಿ ಅಲೆಯಿದೆ. ಅದ್ಯಾಗೂ ಚುನಾವಣೆಯಲ್ಲಿ ಬಿಜೆಪಿ ಕುತಂತ್ರದಿಂದ ಗೆಲ್ಲುತ್ತಿದೆ. ನಮಗೆ ಈಗಲೂ ಇವಿಎಂ ಮಷಿನ್ ಮೇಲೆ ಅನುಮಾನವಿದೆ. ದೇಶದ ಜನಕ್ಕೆ ಅನುಮಾನ ಬರಬಾರದು ಎಂದು ಅಲ್ಲಲ್ಲಿ ಗೆಲ್ಲಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಅದುಬಿಟ್ಟರೆ ಉಳಿದ ಕಡೆ ಇವಿಎಂ ಮಷಿನ್ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ