ಮುಡಾ ಭ್ರಷ್ಟಾಚಾರ ತಡೆಯಲು ಕೆಂಪಣ್ಣ ಆಯೋಗ ರಚನೆ; ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ಸುಳಿವು ನೀಡಿದ ಡಾ ಯತೀಂದ್ರ

Published : Oct 15, 2024, 05:56 PM IST
ಮುಡಾ ಭ್ರಷ್ಟಾಚಾರ ತಡೆಯಲು ಕೆಂಪಣ್ಣ ಆಯೋಗ ರಚನೆ; ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ಸುಳಿವು ನೀಡಿದ ಡಾ ಯತೀಂದ್ರ

ಸಾರಾಂಶ

ಮುಡಾದಲ್ಲಿ ಅವ್ಯವಹಾರ, ಕಾನೂನುಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿದೆ? ಹೀಗಾಗಿ ಯಾವುದೇ ಕ್ಷಣದಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೆಂಗಳೂರು (ಅ.15): ಮುಡಾದಲ್ಲಿ ಅವ್ಯವಹಾರ, ಕಾನೂನುಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿದೆ? ಹೀಗಾಗಿ ಯಾವುದೇ ಕ್ಷಣದಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಸರ್ಕಾರ. ಹೀಗಾಗಿ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೆ ಮರೀಗೌಡಗೆ ಸೂಚನೆ ನೀಡಿತಾ ಸರ್ಕಾರ?

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್:  ರೈತ ಚಳವಳಿ, ಕನ್ನಡ ಪರ ಹೋರಾಟಗಾರರ ಕೇಸ್‌ಗೆ ಹೋಲಿಕೆ ಮಾಡಿದ ಸಾರಿಗೆ ಸಚಿವ!

ಬದಲಾವಣೆ ಸುಳಿವು ನೀಡಿದ ಯತೀಂದ್ರ:

ಮುಡಾ ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ನೀಡುವ ವಿಚಾರ ಸಂಬಂಧ ಮೈಸೂರಿನಲ್ಲಿ ಏಷ್ಯಾನೆಟ್ ಪ್ರತಿನಿಧಿಯೊಂದಿಗೆ ಮಾತನಾಡಿದ  ವಿಧಾನಪರಿಷತ್ ಸದಸ್ಯ ಡಾ ಯತಿಂದ್ರ ಸಿದ್ದರಾಮಯ್ಯ ಅವರು, ಮುಡಾದಲ್ಲಿ ಅವ್ಯವಹಾರ, ಅವ್ಯವಸ್ಥೆ ತಾಂಡಾವವಾಡುತ್ತಿದೆ ಅದೆಲ್ಲವನ್ನೂ ಸ್ವಚ್ಛಗೊಳಿಸಬೇಕಿದೆ. ಹೀಗಾಗಿ ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದಾರೆ. ಅದಕ್ಕಾಗಿಯೇ ಕೆಂಪಣ್ಣ ಆಯೋಗ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಡಾದಲ್ಲಿ ಅವ್ಯವಹಾರವಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ದವಾಗಿದೆ. ಮುಡಾ ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ಕೊಡುವ ವಿಚಾರ ನನಗೆ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿಗಳು ಮುಡಾ ಸ್ವಚ್ಛಗೋಳಿಸುವ ಬಗ್ಗೆ ಚಿಂತನೆ ಮಾಡಿದ್ದಾರೆ. ಅಲ್ಲಿನ ಭ್ರಷ್ಟಾಚಾರ ತಡೆಗಟ್ಟುವ ಅವಶ್ಯಕತೆ ಇದೆ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌