8% ಮಳೆ ಕೊರತೆಯೊಂದಿಗೆ ಈ ಸಲದ ಮುಂಗಾರು ಅಂತ್ಯ

By Sujatha NR  |  First Published Oct 2, 2021, 8:08 AM IST
  •  ರಾಜ್ಯದಲ್ಲಿ ನೈಋುತ್ಯ ಮುಂಗಾರು ಅಧಿಕೃತವಾಗಿ ಗುರುವಾರ ಅಂತ್ಯಗೊಂಡಿದೆ
  • ವಾಡಿಕೆಗಿಂತ ಶೇ.8ರಷ್ಟುಮಳೆ ಕೊರತೆ ಆಗಿದ್ದರೂ ಹವಾಮಾನ ಇಲಾಖೆಯ ಲೆಕ್ಕಾಚಾರದ ಪ್ರಕಾರ ರಾಜ್ಯದಲ್ಲಿ ವಾಡಿಕೆಯಷ್ಟುವರ್ಷಧಾರೆ 

 ಬೆಂಗಳೂರು (ಅ.02):  ರಾಜ್ಯದಲ್ಲಿ ನೈಋುತ್ಯ ಮುಂಗಾರು (Monsoon) ಅಧಿಕೃತವಾಗಿ ಗುರುವಾರ ಅಂತ್ಯಗೊಂಡಿದೆ. ವಾಡಿಕೆಗಿಂತ ಶೇ.8ರಷ್ಟುಮಳೆ ಕೊರತೆ ಆಗಿದ್ದರೂ ಹವಾಮಾನ ಇಲಾಖೆಯ (weather Department) ಲೆಕ್ಕಾಚಾರದ ಪ್ರಕಾರ ರಾಜ್ಯದಲ್ಲಿ ವಾಡಿಕೆಯಷ್ಟು ವರ್ಷಧಾರೆ ಆಗಿದೆ.

ರಾಜ್ಯದಲ್ಲಿ 852 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದು, ಈ ವರ್ಷ 787 ಮಿ.ಮೀ. ಮಳೆಯಾಗಿದೆ. ಜೂನ್‌ ಮತ್ತು ಜುಲೈನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಆಗಸ್ಟ್‌ನಲ್ಲಿ ಮುಂಗಾರು ಮಂಕಾಗಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಮಳೆಯ ಕೊರತೆ ಕಡಿಮೆ ಆಗಿದೆ.

Tap to resize

Latest Videos

undefined

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಈ ಬಾರಿ ತಕ್ಕಮಟ್ಟಿಗೆ ಉತ್ತಮ ಮಳೆಯಾಗಿದೆ. ಕೋಲಾರದಲ್ಲಿ (Kolar) 61 ವರ್ಷದಲ್ಲೇ ಗರಿಷ್ಠ 621 ಮಿ.ಮೀ. ಮಳೆ ಸುರಿದಿದೆ. ಕಲಬುರಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ.

ರಾಜ್ಯದ 5 ಜಿಲ್ಲೇಲಿ ಭಾರೀ ಮಳೆ: ಸಿಡಿಲು ಬಡಿದು ಮಹಿಳೆ ಸಾವು

ರಾಜ್ಯದ ಕರಾವಳಿಯಲ್ಲಿ ಶೇ.18 ಮತ್ತು ಮಲೆನಾಡು ಭಾಗದಲ್ಲಿ ಶೇ.13ರಷ್ಟುಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಶೇ.27ರಷ್ಟುಮಳೆಯ ಕೊರತೆ ಉಂಟಾಗಿದೆ. ಉಳಿದಂತೆ ಕೊಡಗು, ಮೈಸೂರಿನಲ್ಲಿ ಮಳೆಯ ಕೊರತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ, ಹಾವೇರಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ಗುರಿ ಮೀರಿ ಬಿತ್ತನೆ:

ರಾಜ್ಯದಲ್ಲಿ 77 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಖಾರೀಫ್‌ ಬೆಳೆ ಬೆಳೆಯುವ ಗುರಿ ಇಟ್ಟುಕೊಳ್ಳಲಾಗಿತ್ತು. ಸೆಪ್ಟೆಂಬರ್‌ 24ರ ಮಾಹಿತಿಯಂತೆ 77.65 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ ಮಾಡಲಾಗಿದೆ.

ಭಾರಿ ಮಳೆಯ ಮುನ್ಸೂಚನೆ

ಶನಿವಾರ ರಾಜ್ಯ ಕರಾವಳಿ ಮತ್ತು ಬೆಂಗಳೂರು ನಗರ ಹೊರತುಪಡಿಸಿ ಉಳಿದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ. ಭಾನುವಾರ ಸಹ ಈ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆ

ಉತ್ತರ ಕರ್ನಾಟಕದ(North Karnataka) ಕೆಲ ಭಾಗ ಮತ್ತು ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಉತ್ತಮ ಮಳೆ ಸುರಿದಿದ್ದು, ಗದಗ ಜಿಲ್ಲೆ ರೋಣ ತಾಲೂಕಿನಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬಳು ಮೃತಳಾಗಿದ್ದಾಳೆ. ರೋಣ ತಾಲೂಕಿನ ನೈನಾಪುರ ಗ್ರಾಮದಲ್ಲಿ ಕೃಷಿ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದ ರೇಖಾ ಭೀಮಪ್ಪ ನಂದಿಕೇಶ್ವರ (20) ಸಿಡಿಲು ಬಡಿದು ಮೃತಪಟ್ಟವರು.

ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಶುಕ್ರವಾರ ಮತ್ತೆ ಪ್ರಬಲವಾಗಿದೆ. ಕಲಬುರಗಿ, ಸೇಡಂ, ಜೇವರ್ಗಿ, ಚಿತ್ತಾಪುರ, ಅಫಜಲಪೂರಗಳಲ್ಲಿ ನಿರಂತರ ಒಂದೂವರೆ ಗಂಟೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ(Rain). ಇದರಿಂದ ನಗರ ಪ್ರದೇಶಗಳಲ್ಲಿರುವ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಧಾರವಾಡ, ಕಲಘಟಗಿ, ಹಾವೇರಿ ಜಿಲ್ಲೆಯ ಹಾವೇರಿ, ಹಾನಗಲ್‌, ಹಿರೇಕೆರೂರು, ಶಿಗ್ಗಾಂವಿ, ಸವಣೂರು, ಗದಗ ಜಿಲ್ಲೆಯ ಗದಗ, ರೋಣ, ಗಜೇಂದ್ಗಡ, ಶಿರಹಟ್ಟಿ, ಲಕ್ಷ್ಮೇಶ್ವರದಲ್ಲೂ ಗುಡುಗು ಸಹಿತ ಮಳೆ ಸುರಿದಿದೆ. ಕೊಡಗಿನ ಕೇಂದ್ರ ಮಡಿಕೇರಿ ಸೇರಿದಂತೆ ಸೋಮವಾರಪೇಟೆ, ಸುಂಟಿಕೊಪ್ಪ, ಕುಶಾಲನಗರ, ಚೆಟ್ಟಳ್ಳಿ, ಮಾದಾಪುರ, ಕಗ್ಗೋಡ್ಲು, ಮರಗೋಡು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಸುರಿಯಿತು.

 

click me!