ಬೆಂಗಳೂರು: ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಜ.2ರಂದು ಮನೆಗಳನ್ನು ವಿತರಿಸಲಾಗುತ್ತದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಅರ್ಹರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜ.1ರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಕಾರ್ಯ ಜ.2ಕ್ಕೆ ಮುಂದೂಡಲಾಗಿದೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
11:30 AM (IST) Jan 01
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಮಂಜುನಾಥ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೇಣು ಮತ್ತು ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ.
11:28 AM (IST) Jan 01
10:21 AM (IST) Jan 01
ಬುಧವಾರದ ಸಂಚಿಕೆಯಲ್ಲಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧ್ರುವಂತ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಗಿಲ್ಲಿ ನಟನ ಕಾಮಿಡಿಗೆ ತಿರುಗೇಟು ನೀಡಲು ಹೋದಾಗ, ಅವರು 'ಮುದುಕಿ', 'ಅಜ್ಜಿ', 'ವಿಗ್' ಎಂಬಂತಹ ಪದಗಳನ್ನು ಬಳಸಿ ವೈಯಕ್ತಿಕ ನಿಂದನೆ ನಡೆಸಿದರು.
09:16 AM (IST) Jan 01
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಗ್ರಾಮೀಣ ಪ್ರದೇಶ ನಿಟ್ಟೆಯನ್ನು ಅಂತರಾಷ್ಟ್ರೀಯ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಅವರು, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೋದರರಾಗಿದ್ದರು.
08:21 AM (IST) Jan 01
08:11 AM (IST) Jan 01
ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನ್ಯಾಯದ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.
08:04 AM (IST) Jan 01
07:31 AM (IST) Jan 01
ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಹೊಸ ವರ್ಷವನ್ನು ಪಾರ್ಟಿ, ಪಟಾಕಿ ಹಾಗೂ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನಸಾಗರವೇ ಸೇರಿದ್ದು, ಹೋಟೆಲ್, ಪಬ್‌ಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
07:24 AM (IST) Jan 01
ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಜಕೀಯ ಸ್ವರೂಪ ಪಡೆದಿದೆ. ಈ ಪ್ರದೇಶವು ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ.
06:48 AM (IST) Jan 01
ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್‌ಗಳ ವಿರುದ್ಧ ನೀಡಿದ ದೂರು ನಿರ್ಲಕ್ಷಿಸಲಾಗಿದೆ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
06:42 AM (IST) Jan 01
ಬೆಂಗಳೂರಿನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಸುಮಾರು 8 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್ ಎಲೆಗಳನ್ನು’ ವಶಪಡಿಸಿಕೊಂಡಿದ್ದಾರೆ. ಇಥಿಯೋಪಿಯಾದಿಂದ ಭಾರತದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲ
06:25 AM (IST) Jan 01
ಕೋವಿಡ್ ಅವಧಿಯ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ತನಿಖೆ ನಡೆಸಿದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಮತ್ತು ಬೆಂಗಳೂರು ಜಿಲ್ಲೆಗಳ ತನಿಖಾ ಕಡತಗಳನ್ನು ಹಸ್ತಾಂತರಿಸಲಾಗಿದೆ.