ಬೆಳಗಾವಿ: ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್‌ಬುಕ್ ಖಾತೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

09:46 PM (IST) Jun 01
ಮಳೆಗಾಲ ಆರಂಭಿಸುತ್ತಿದ್ದಂತೆ ಮತ್ತೆ ತಮ್ಮ ಕಳ್ಳಾಟ ಆರಂಭಿಸಿರುವ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳು, ಕೆಮಿಕಲ್ ತ್ಯಾಜ್ಯ ನೀರನ್ನು ಚರಂಡಿ ಮಾರ್ಗದ ಮೂಲಕ ಹಳ್ಳಕ್ಕೆ ಬಿಡುತ್ತಿದ್ದು, ಇದು ಜೀವಸಂಕುಲಕ್ಕೆ..
09:22 PM (IST) Jun 01
ಪಕ್ಕದ ಆಂಧ್ರಪ್ರದೇಶದ ರಾಜ್ಯದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ನಡೆದಿದೆ. ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿ ವಡ್ಲ ಸತೀಶ್..
08:55 PM (IST) Jun 01
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಅವರ ಆಪ್ತ ಮೊಹಮ್ಮದ್ ಸಿರಾಜ್ ನಡುವಿನ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ, ಸಿರಾಜ್ ದಾವಣಗೆರೆಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಆಡಿಯೋ ನಕಲಿಯಾಗಿದ್ದು, ತಮ್ಮ ತೇಜೋವಧೆ ಮಾಡಲು ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ.
08:51 PM (IST) Jun 01
ದೊಡ್ಡದಾಗಿ ಬೆಳೆದಿರುವ ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಚಿಂತನೆಯಾಗಬೇಕಿದೆ. ಸದ್ಯ ತಮ್ಮ ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ವೀರಶೈವ ಮತ್ತು ಲಿಂಗಾಯತ ಒಂದೇ ಸಮಾಜ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
08:17 PM (IST) Jun 01
07:33 PM (IST) Jun 01
06:53 PM (IST) Jun 01
06:07 PM (IST) Jun 01
ಕನ್ನಡಪ್ರಭ-ಏಷ್ಯಾನೆಟ್ ಸೂವರ್ಣ ನ್ಯೂಸ್ ವಾಹಿನಿಯಿಂದ ಹಿರೇಬೆಕಲ್ ಮೋರೆರ್ ಬೆಟ್ಟದ ಶಿಲಾ ಸಮಾಧಿಗಳು ಬೆಳಕಿಗೆ ಬಂದಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ ಪ್ರಶಂಸಿದರು.
06:06 PM (IST) Jun 01
05:38 PM (IST) Jun 01
05:14 PM (IST) Jun 01
ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ವಿವಾದ ಹೈಕಮಾಂಡ್ ತಲುಪುವ ಹಂತದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯಂತೆ ದೆಹಲಿ ಪ್ರವಾಸ ರದ್ದುಗೊಳಿಸಿರುವ ಜಮೀರ್, ಬೆಂಗಳೂರಿನಲ್ಲಿ ಮುಸ್ಲಿಂ ನಾಯಕರೊಂದಿಗೆ ರಹಸ್ಯ ಸಭೆ ನಡೆಸುತ್ತಿದ್ದಾರೆ.
04:23 PM (IST) Jun 01
03:11 PM (IST) Jun 01
ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋವೊಂದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇದು ಎಐ ತಂತ್ರಜ್ಞಾನದಿಂದ ಸೃಷ್ಟಿಯಾದ ನಕಲಿ ಆಡಿಯೋ ಎಂದು ಜಮೀರ್ ಸ್ಪಷ್ಟನೆ ನೀಡಿದರೆ, ದಾವಣಗೆರೆ ಶಾಸಕ ಸಮರ್ಥ ಶಾಮನೂರು ಹೈಕಮಾಂಡ್ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
01:31 PM (IST) Jun 01
ಕರ್ನಾಟಕದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಜೂನ್ 18 ರಂದು ಮತದಾನ ನಡೆಯಲಿದೆ. ಚುನಾವಣಾ ವೇಳಾಪಟ್ಟಿ ಇಲ್ಲಿದೆ ನೋಡಿ.
01:00 PM (IST) Jun 01
12:41 PM (IST) Jun 01
11:56 AM (IST) Jun 01
11:11 AM (IST) Jun 01
Forbes 30 Under 30 Asia 2026: ಫೋರ್ಬ್ಸ್ ಏಷ್ಯಾ 2025ರ ‘30 ಅಂಡರ್ 30’ ಪಟ್ಟಿಯ Social Impact ವಿಭಾಗದಲ್ಲಿ ಬೆಂಗಳೂರು ಮೂಲದ 17 ವರ್ಷದ ವಿದ್ಯಾರ್ಥಿನಿ ದಿವ್ಯಾ ಉತ್ಕರ್ಷ ಸ್ಥಾನ ಪಡೆದಿದ್ದಾರೆ. ಹೀಗೆ ದಿವ್ಯಾ ಅವರು ಅತ್ಯಂತ ಕಿರಿಯ ಸಾಧಕಿ ಎಂಬ ಪಟ್ಟ ಪಡೆದಿದ್ದಾರೆ.
09:32 AM (IST) Jun 01
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್, ತಾವಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮುಖ್ಯಮಂತ್ರಿಯಾಗುತ್ತಿರುವುದಾಗಿ ಹೇಳಿದ್ದಾರೆ. ತಮಗೆ ಆ ಹೂವಿನಿಂದ ಅಲರ್ಜಿ ಇರುವುದರಿಂದ ಹಾರ ಹಾಕದಂತೆ ಮನವಿ ಮಾಡಿದ್ದು, ಅವರ ನಿವಾಸಕ್ಕೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.
08:51 AM (IST) Jun 01
08:50 AM (IST) Jun 01
ಮಾಲೂರಿನಲ್ಲಿ ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ, ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಸುಮಾರು 8 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಂಗ್ರಹಿಸಿದ್ದಾನೆ. ವಂಚನೆಗೊಳಗಾದ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
08:28 AM (IST) Jun 01
ಬೆಂಗಳೂರಿನಿಂದ ಮಂಗಳೂರಿಗೆ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವು ಜೂನ್ 3 ರಿಂದ ಆರಂಭವಾಗಲಿದೆ. ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವಿನ ವಿದ್ಯುದೀಕರಣ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಸೇವೆ ಸಾಧ್ಯವಾಗಿದ್ದು, ಮುಂದಿನ 15-20 ದಿನಗಳಲ್ಲಿ ಪೂರ್ಣ ಪ್ರಮಾಣದ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.
07:36 AM (IST) Jun 01
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮೊದಲ ಹಂತದ ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷರ ನೇಮಕ ಮತ್ತು ಡಿಸಿಎಂ ಹುದ್ದೆಗಳ ಕುರಿತು ಅಂತಿಮ ಚರ್ಚೆ ನಡೆಸಿ ಪಟ್ಟಿಯನ್ನು ಅಖೈರುಗೊಳಿಸಲಿದ್ದಾರೆ.
07:22 AM (IST) Jun 01
ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್‌ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.
06:48 AM (IST) Jun 01
06:38 AM (IST) Jun 01
ರೈತರೊಬ್ಬರ ಜಮೀನಿನಲ್ಲಿ 101 ವರ್ಷ ಹಳೆಯ, ಅಪರೂಪದ ಔಷಧಿ ಗುಣಗಳನ್ನು ಹೊಂದಿರುವ ಮಡ್ಡಿ ಮರ (ಇಂಡಿಯನ್ ಮಲ್ಬೆರಿ) ಪತ್ತೆಯಾಗಿದೆ. ಆಯುರ್ವೇದದಲ್ಲಿ ಮಹತ್ವ ಪಡೆದಿರುವ ಈ ಮರವು ಕೀಲು ನೋವು, ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು, ಇದರ ಬೇರಿನಿಂದ ನೈಸರ್ಗಿಕ ಬಣ್ಣವನ್ನೂ ತಯಾರಿಸಲಾಗುತ್ತದೆ. ಈ ಮರವು ಜೀವವೈವಿಧ್ಯ ಸಂರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
06:25 AM (IST) Jun 01
ತಿಪ್ಪನಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕನಕರೆಡ್ಡಿ ಮಾದಿನಾಳ ಅವರು ಸತತ 33 ವರ್ಷಗಳ ಕಾಲ ಸೇವೆ ಸಲ್ಲಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ತಮ್ಮ ಅವಧಿಯಲ್ಲಿ ಸ್ಮಾರ್ಟ್‌ಕ್ಲಾಸ್, ಕಂಪ್ಯೂಟರ್ ಶಿಕ್ಷಣದಂತಹ ಸೌಲಭ್ಯಗಳನ್ನು ಒದಗಿಸಿ, ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.
06:06 AM (IST) Jun 01
05:46 AM (IST) Jun 01
05:36 AM (IST) Jun 01
ಆರ್‌ಸಿಬಿ-ಜಿ.ಟಿ ಐಪಿಎಲ್ ಫೈನಲ್ ಪಂದ್ಯದ ವೇಳೆ, ಕಳೆದ ವರ್ಷದ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಈ ನಿಯಮಗಳ ನಡುವೆಯೂ ಆರ್‌ಸಿಬಿ ಗೆಲ್ಲುತ್ತಿದ್ದಂತೆ ರಾಜ್ಯಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.