ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ನೇರ ಅಥವಾ ಪರೋಕ್ಷವಾಗಿಯಾಗಲಿ ತಮ್ಮ ಪಾತ್ರವಿದೆ ಎಂಬುದು ಸಾಭೀತಾದರೆ ತಾವು ರಾಜಕೀಯ ನಿವೃತ್ತಿ ಪಡೆಯಲು ಸಿದ್ದ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಕೆಪಿಎಸ್‌ಸಿ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂದು ಹೇಳುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ಆರೋಪಕ್ಕೆ ಪೂರಕವಾದ ದಾಖಲೆ ಬಹಿರಂಗಪಡಿಸಲಿ, ತಮ್ಮ ಪಾತ್ರ ಸಾಭೀತಾದರೆ ನಮ್ಮ ಕುಟುಂಬವೂ ರಾಜಕೀಯವಾಗಿ ಹಿಂದೆ ಸರಿಯುವ ಪರಿಸ್ಥಿತಿ ಬರಬಹುದು. ಆದರೆ ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ವಿರುದ್ಧದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದರು.

06:36 AM (IST) Sep 01
18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಡಾ. ಕೆ. ಶಿವರಾಮ ಕಾರಂತ ಬಡಾವಣೆಗಾಗಿ ಭೂಮಿ ನೀಡಿದ ರೈತರು ಮತ್ತು ಭೂಮಾಲೀಕರಿಗೆ ಪರಿಹಾರ ವಿತರಣೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದೇಶದಲ್ಲೇ ಅತಿ ಹೆಚ್ಚು ಎನ್ನಲಾದ ಶೇ.40ರಷ್ಟು ಅಭಿವೃದ್ಧಿಪಡಿಸಿದ ಭೂಮಿ ಸೇರಿದಂತೆ ಹಲವು ಪರಿಹಾರ ಆಯ್ಕೆಗಳನ್ನು ಘೋಷಿಸಿದ್ದಾರೆ.
06:26 AM (IST) Sep 01
05:37 AM (IST) Sep 01