ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ 2 ವರ್ಷ ಪೂರೈಕೆ ಮಾಡಿರುವ ಸಂಭ್ರಮವನ್ನು ಮುಂದೂಡಲಾಗಿದ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಏರಿ ಮೇ 20ಕ್ಕೆ 2 ವರ್ಷವಾಗಲಿದೆ. ಇದರ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗವಾದ ಹೊಸಪೇಟೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಾಧನಾ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ.

08:27 PM (IST) May 10
ಬುದ್ಧ ಪೂರ್ಣಿಮೆ ಪ್ರಯುಕ್ತ ಸೋಮವಾರ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಮೇ 12 ರಂದು ಬುದ್ಧ ಪೂರ್ಣಿಮೆ ಆಚರಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರದಿಂದ ಎಂದಿನಂತೆ ಮಾಂಸ ಮಾರಾಟ ಮುಂದುವರಿಯಲಿದೆ.
01:01 PM (IST) May 10
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ರು. ಪ್ರೋತ್ಸಾಹಧನ ವಿತರಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಪೂರ್ತಿ ಓದಿ12:41 PM (IST) May 10
ಕೆಮಿಕಲ್ ಕಂಪನಿ ವಿರುದ್ಧ ಇಂತಹುದ್ದೊಂದು ದೂರು ನೀಡದಂತೆ ಸ್ಥಳೀಯ ಕೆಲವು ಪ್ರಭಾವಿಗಳು ಹಾಗೂ ಮಧ್ಯವರ್ತಿಗಳು ಕಳೆದೊಂದು ವಾರದಿಂದ ನಿರಂತರ ಪ್ರಯತ್ನಿಕ್ಕಿಳಿದಿತ್ತು ಎನ್ನಲಾಗುತ್ತಿದೆ.
ಪೂರ್ತಿ ಓದಿ12:16 PM (IST) May 10
ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮ ದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಪೂರ್ತಿ ಓದಿ11:47 AM (IST) May 10
ಪಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದರಿಂದ ದೇಶದೆಲ್ಲೆಡೆ ವಿಜಯೋತ್ಸವ ಆಚರಿಸುತ್ತಿದ್ದಾರೆ. ಆದರೆ, ಸಿಂದೂರ ಹೆಸರಿನಲ್ಲಿ ನಡೆಸಿದ ಈ ಕಾರ್ಯಾಚರಣೆ ಈಗ ಹೊಸದೊಂದು ಅಲೆಯನ್ನೇ ಸೃಷ್ಟಿಸಿದೆ.
10:16 AM (IST) May 10
ರಾಜ್ಯದಲ್ಲಿ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ (ಜಾತಿಗಣತಿ) ದತ್ತಾಂಶಕ್ಕೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, 11 ಸಚಿವರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
10:16 AM (IST) May 10
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.
10:15 AM (IST) May 10
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60ರಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಮಹತ್ವ ತೀರ್ಮಾನ ಕೈಗೊಂಡಿದೆ.
10:15 AM (IST) May 10
ಭಾರತ-ಪಾಕಿಸ್ತಾನ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸೇನೆಯ ಭಾಷೆಯಲ್ಲಿ ‘ಪೀಸ್ ಸ್ಟೇಷನ್’ ಎಂದೇ ಕರೆಯಲ್ಪಡುವ ಬೆಂಗಳೂರು ನಗರದಲ್ಲಿರುವ ಸೇನಾ ಘಟಕಗಳು ಮತ್ತು ಸೇನೆಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು, ವಿಭಾಗಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
10:02 AM (IST) May 10
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.
10:02 AM (IST) May 10
ಪ್ರಸಕ್ತ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇದೇ 15ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
10:02 AM (IST) May 10
ಕರ್ನಾಟಕ ಸೇರಿ 18 ರಾಜ್ಯಗಳ ವಿವಿಧ ನಗರಗಳಲ್ಲಿ ಶನಿವಾರ ನಿಗದಿಯಂತೆ ಕಾಮೆಡ್-ಕೆ ಯುಜಿಇಟಿ ಮತ್ತು ಯೂನಿಗೇಜ್ ಪರೀಕ್ಷೆ ನಡೆಯಲಿದೆ.