ಬೆಂಗಳೂರು (ಜು.12): ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಯಾವುದೇ ಪ್ರತ್ಯುತ್ತರ ನೀಡಿಲ್ಲ. ಈ ನಡುವೆ ಡಿಕೆಶಿ ಸಂಯಮದ ನುಡಿ ನುಡಿದಿದ್ದಾರೆ. ಪಕ್ಷ ಇದ್ದರಷ್ಟೇ ನಾನು, ಇಲ್ಲದಿದ್ರೆ ನಾನಿಲ್ಲ. ಯಾವ ವಿಚಾರಕ್ಕೂ ನಾನು ಪ್ರತಿಕ್ರಿಯೆ ನೀಡಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ. ಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್ ಬ್ಲಾಗ್
11:00 PM (IST) Jul 12
ರೈತರು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯ ವಿಮೆ ತುಂಬುವಾಗ ಏಜೆಂಟರು ಮಧ್ಯಸ್ಥಿಕೆ ವಹಿಸಿ ತಮಗೆ ಪರ್ಸೆಂಟೇಜ್ ನೀಡಬೇಕು ಎಂದು ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಣ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
10:12 PM (IST) Jul 12
ಜಿಲ್ಲೆಯ ಗೋಕರ್ಣದ ಕಾಡಿನ ಮಧ್ಯ ಗುಡ್ಡದ ಗುಹೆಯಲ್ಲಿ ಸಣ್ಣ ಸಣ್ಣ ಮಕ್ಕಳೊಂದಿಗೆ ವಾಸಿಸುತ್ತಿದ್ದ 40 ವರ್ಷದ ರಷ್ಯಾದ ಮಹಿಳೆಯನ್ನು ಗಸ್ತು ತಿರುಗುತ್ತಿದ್ದ ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ.
09:55 PM (IST) Jul 12
ಏಳು ವರ್ಷಗಳ ಹಿಂದೆ ನುಗ್ಗಿದ ಪ್ರವಾಹ ಇದೀಗ ನೂರಾರು ಜನರು ನಿತ್ಯ ಜೀವ ಕೈಯಲ್ಲಿ ಹಿಡಿದು ಓಡಾಡುವಂತೆ ಆಗಿದೆ. ಜನರ ಸಂಕಷ್ಟ ಪರಿಹರಿಸುವ ಸೇತುವೆ ಜೀವಕ್ಕೆ ಕುತ್ತು ತಂದಿರುವುದಾದರೂ ಏಕೆ ಅಂತೀರಾ ಅದನ್ನು ನೀವೇ ಓದಿ.
09:04 PM (IST) Jul 12
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸತ್ತ ಸರ್ಕಾರವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
08:42 PM (IST) Jul 12
08:03 PM (IST) Jul 12
ಟೋಬಿ ನಟಿ ಚೈತ್ರಾ ಆಚಾರ್ ಸಿನಿರಂಗದ ಜತೆ ಸಾಮಾಜಿಕ ಜಾಲತಾಣದಲ್ಲೂ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಆಗಾಗ ಹೊಸ ಹೊಸ ಫೋಟೋಸ್‌ಗಳನ್ನು ಹಂಚಿಕೊಂಡು ಸಿಕ್ಕಾಪಟ್ಟೆ ಸುದ್ದಿಯಾಗುತ್ತಾರೆ.
07:03 PM (IST) Jul 12
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.
06:52 PM (IST) Jul 12
ಭಾಗ್ಯಲಕ್ಷ್ಮಿ ತನ್ವಿ ಉರ್ಫ್ ಅಮೃತಾ ಗೌಡ ಫೋಟೋಶೂಟ್ ಮಾಡಿಸಿಕೊಂಡಿದ್ದು, ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
06:25 PM (IST) Jul 12
ನಟ ದರ್ಶನ್ ನಟನೆಯ ಡೆವಿಲ್ ಚಿತ್ರದ ಬಾಕಿ ಇರುವ ಒಂದೇ ಒಂದು ಹಾಡಿನ ಶೂಟಿಂಗ್‌ಗಾಗಿ ಥೈಲ್ಯಾಂಡ್ ದೇಶಕ್ಕೆ ಹಾರಲಿದ್ದಾರೆ.
06:10 PM (IST) Jul 12
ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಮಿಕ ನೀತಿಗಳನ್ನು ಸಂಯೋಜಿಸಿ 'ನಾಲ್ಕು ಕೋಡ್'ಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
05:54 PM (IST) Jul 12
05:44 PM (IST) Jul 12
ಭಾಗ್ಯಲಕ್ಷ್ಮಿ ಸೀರಿಯಲ್ನಲ್ಲಿ ಸದ್ಯ ಪೂಜಾ ಮತ್ತು ಕಿಶನ್ ಮದುವೆಯ ಸಂಭ್ರಮ ನಡೆಯುತ್ತಿದೆ. ಅದರ ನಡುವೆಯೇ ಭಾಗ್ಯ ನೇರಪ್ರಸಾರದಲ್ಲಿ ಬಂದು ಹೇಳಿದ್ದೇನು? ಇದೇನಿದು ಆದಿ-ಭಾಗ್ಯ ಮದುವೆ ಕಾನ್ಸೆಪ್ಟ್?
05:37 PM (IST) Jul 12
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
05:30 PM (IST) Jul 12
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ. ಹಾಸನ ಕ್ಷೇತ್ರದ ಮೇಲಿನ ತಮ್ಮ ಭಾವನಾತ್ಮಕ ಸಂಬಂಧವನ್ನು ವಿವರಿಸಿದ್ದಾರೆ.
05:11 PM (IST) Jul 12
ಸೀತಾರಾಮ ಸೀರಿಯಲ್ನಲ್ಲಿ ಸಿಹಿಯಾಗಿ, ಸುಬ್ಬಿಯಾಗಿ ಹವಾ ಸೃಷ್ಟಿಸಿದ್ದ ಪುಟಾಣಿ ರಿತುಸಿಂಗ್ ಈಗ ಏನು ಮಾಡುತ್ತಿದ್ದಾಳೆ? ಬೇರೆ ಸೀರಿಯಲ್ನಲ್ಲಿ ಬರ್ತಿದ್ದಾಳಾ?
04:19 PM (IST) Jul 12
ನಾ ನಿನ್ನ ಬಿಡಲಾರೆ ಶರತ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮಗಳು ಹಿತಾಳ ಬಾಯಲ್ಲಿ ಅಪ್ಪಾ ಎಂದು ಕರೆಸಿಕೊಳ್ಳಲು ಕಾಯ್ತಿರೋ ನಟನ ಸ್ಟೋರಿ ಇಲ್ಲಿದೆ...
03:14 PM (IST) Jul 12
ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಅವರು ಸಿದ್ದರಾಮಯ್ಯ ಮತ್ತು ದೇವೇಗೌಡರ ಬಳಿ ರಾಜಕೀಯ ಕಲಿಯುವ ಬಯಕೆ ವ್ಯಕ್ತಪಡಿಸಿದ್ದಾರೆ.
02:53 PM (IST) Jul 12
ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧಿತರಾದ ಮೂವರ ವಿಚಾರಣೆ ತೀವ್ರಗೊಂಡಿದೆ. ಬಂಧಿತ ಮನೋವೈದ್ಯ ನಾಗರಾಜ್, ಹಣಕ್ಕಾಗಿ ಉಗ್ರರಿಗೆ ಮತ್ತು ಇತರೆ ಆರೋಪಿಗಳಿಗೆ ಮೊಬೈಲ್ ಪೂರೈಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
02:17 PM (IST) Jul 12
02:14 PM (IST) Jul 12
01:46 PM (IST) Jul 12
ನಾನ್ಸ್ಟಿಕ್ ಪ್ಯಾನ್ನಲ್ಲಿ ಅತ್ಯಂತ ಸುಲಭದಲ್ಲಿ ದೋಸೆ, ಚಪಾತಿ ಮಾಡಬಹುದು. ಅಡುಗೆ ಮನೆಯಲ್ಲಿ ಈ ಪಾತ್ರೆಗಳನ್ನು ಇಟ್ಟರೆ ಅದಕ್ಕೊಂದು ಅಂದವೇ ಬರುತ್ತದೆ. ಆದರೆ ಇದು ನಿಮ್ಮ ಮನೆಯಲ್ಲಿರೋ ಮಹಾಮಾರಿ ಎನ್ನುವುದು ಅರಿವಿದೆಯೆ? ಡಾ.ಖಾದರ್ ಅವರ ಮಾತು ಕೇಳಿ...
01:03 PM (IST) Jul 12
ಬೊಕ್ಕ ತಲೆಯಲ್ಲಿ ಕೂದಲು ಚಿಗುರುವಂತೆ ಮಾಡುವುದು ಇಷ್ಟು ಸುಲಭನಾ? ಅಕ್ಕಿ ತೊಳೆದ ನೀರು ಮತ್ತು ಕಾಮಕಸ್ತೂರಿ ಬೀಜದ (Chia Seeds) ಜೆಲ್ ತಯಾರಿಸಿ ಕೂದಲು ಬರಿಸುವುದು ಹೇಗೆ ನೋಡಿ. ಇಲ್ಲಿದೆ ಹಂತ ಹಂತದ ಮಾಹಿತಿ...
12:34 PM (IST) Jul 12
ಮೇಘನಾ ರಾಜ್ ಜೊತೆ ವಿಜಯ ರಾಘವೇಂದ್ರ ಅವರ ಮದುವೆಯ ಸುದ್ದಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಕೊನೆಗೂ ನಟ ಮೌನ ಮುರಿದಿದ್ದಾರೆ. ಅವರು ಹೇಳಿದ್ದೇನು?
12:24 PM (IST) Jul 12
11:21 AM (IST) Jul 12
11:21 AM (IST) Jul 12
10:46 AM (IST) Jul 12
ಬೆಂಗಳೂರಿನಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 50.26 ಕೋಟಿ ಮೌಲ್ಯದ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.\
10:25 AM (IST) Jul 12
09:58 AM (IST) Jul 12
08:35 AM (IST) Jul 12
ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ತನ್ನ ರಸ್ತೆ ಟೋಲ್ ಶುಲ್ಕವನ್ನು ಹೆಚ್ಚಿಸಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 1 ರಿಂದ ಜಾರಿಗೆ ಬರುವಂತೆ 8 ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ.ಗೆ ದುಬಾರಿ ವೆಚ್ಚವಾಗಲಿದೆ
08:17 AM (IST) Jul 12
ಮಾನವ ದೇಹದ ಪ್ರಮುಖ ಅಂಗ ಹೃದಯದ ಆರೋಗ್ಯ ಕಾಪಾಡಿಕೊಳ್ಳುವುದು ಸುದೀರ್ಘ ಜೀವನಕ್ಕೆ ಅತ್ಯಗತ್ಯ. ಮಾನಸಿಕ ಒತ್ತಡ, ಜಡ ಜೀವನಶೈಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು.
07:56 AM (IST) Jul 12
07:38 AM (IST) Jul 12
ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರ್ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್ಮೆಂಟ್ ನೆಟ್‌ವರ್ಕ್ಸ್ ಹಾಗೂ ಪೊಲೀಸ್ ಮತ್ತು ಗುಪ್ತಚರ ಇಲಾಖೆಗಳನ್ನು ಹೊಣೆ
07:36 AM (IST) Jul 12
ಪಕ್ಷ ನನಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಹುದ್ದೆ, ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಉಳಿದ ಯಾವ ವಿಚಾರಗಳಿಗೂ ನಾನು ಪ್ರತಿಕ್ರಿಯಿಸಲ್ಲ. ನನ್ನ ಗಮನವೇನಿದ್ದರೂ ಪಕ್ಷ ಮತ್ತು ಸರ್ಕಾರದ ಹಿತಾಸಕ್ತಿ ಕಾಪಾಡುವುದರ ಕಡೆಗಿದೆ.
07:35 AM (IST) Jul 12
ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಸಿಎಂ ಸ್ಥಾನದ ಗೊಂದಲದಿಂದ ರಾಜ್ಯದ ಆಡಳಿತ ಕುಸಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಜೈಲಿನಲ್ಲಿ ಭಯೋತ್ಪಾದಕರಿಗೆ ಸಿಗುತ್ತಿರುವ ಸೌಲಭ್ಯಗಳು ಮತ್ತು ದೇಶದ್ರೋಹ ಚಟುವಟಿಕೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.
07:35 AM (IST) Jul 12
ರಾಘವೇಶ್ವರ ಭಾರತೀ ಸ್ವಾಮೀಜಿಗಳು ಶ್ರೀಮಠದ ಪರಿವಾರದ ಸೇವೆಯನ್ನು ಶ್ಲಾಘಿಸಿ, ಸೈನಿಕರಂತೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಪರಿವಾರದವರಿಗೆ ವಾರ್ಷಿಕ ₹೩ ರಿಂದ ₹೬ ಲಕ್ಷದವರೆಗೆ ಅನುಗ್ರಹ ನೀಡುವುದಾಗಿ ಘೋಷಿಸಿದ್ದಾರೆ. ಪರಿವಾರದವರ ತ್ಯಾಗ ಮತ್ತು ಸಮರ್ಪಣೆಯನ್ನು ಸಮಾಜ ಗುರುತಿಸಬೇಕು ಎಂದು ಕರೆ ನೀಡಿದರು.
07:35 AM (IST) Jul 12
ಶಾಸಕ ಕೊತ್ತೂರು ಮಂಜುನಾಥ್ ಅವರು ಡಿಕೆಶಿ ಅವರಿಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಪಟ್ಟ ಸಿಗುವುದು ಖಚಿತ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೂ ಒಂದೇ ಎಂದು ಹೇಳಿದ ಅವರು, ಪಕ್ಷದ ತೀರ್ಮಾನವೇ ಅಂತಿಮ ಎಂದರು.
07:34 AM (IST) Jul 12
ಹೊಸಪೇಟೆಯಲ್ಲಿ ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ವಿರುದ್ಧ ಚಿತ್ತವಾಡ್ಗಿ ಜಾಮೀಯಾ ಮಸೀದಿ ಅಡಳಿತ ಮಂಡಳಿ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
07:33 AM (IST) Jul 12
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
07:33 AM (IST) Jul 12
‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.