ಬೆಂಗಳೂರು (ಆ.14): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನೀಡಿರುವ ಜಾಮೀನು ಮುಂದುವರೆಸಬೇಕೋ ಅಥವಾ ರದ್ದುಪಡಿಸಬೇಕೋ ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಲಿದೆ. ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು.ಅದರೊಂದಿಗೆ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್ ಬ್ಲಾಗ್
10:53 PM (IST) Aug 14
10:01 PM (IST) Aug 14
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
09:54 PM (IST) Aug 14
ತಿದ್ದುಪಡಿ ವಿಧೇಯಕದ ಮೂಲಕ ಆಸ್ತಿ ನೋಂದಣಿ ಸರಳೀಕರಣ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ತಾಂತ್ರಿಕತೆ ಬಳಸಿಕೊಂಡು ಅಧಿಕಾರಿಗಳ ಮಧ್ಯಪ್ರವೇಶವನ್ನು ಸಕ್ರಿಯವಾಗಿ ಕಡಿಮೆ ಮಾಡಲಾಗಿದೆ.
09:28 PM (IST) Aug 14
ಧರ್ಮಸ್ಥಳದಲ್ಲಿ ನೂರಾರು ಶವಗಳ ಆರೋಪದ ತನಿಖೆಯಲ್ಲಿ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ. ಮಹಿಳಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು ಕೆಲವೊಂದು ಮಾಹಿತಿಯನ್ನು ಕೇಳಿದೆ.
09:10 PM (IST) Aug 14
ನಿಷೇಧವಿದ್ದರೂ ಆಫ್ರಿಕನ್ ಕ್ಯಾಟ್‌ಫಿಶ್ ಸಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಮಂಕಾಳ ಎಸ್.ವೈದ್ಯ ತಿಳಿಸಿದರು.
08:10 PM (IST) Aug 14
ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ನಂತರ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಐಷಾರಾಮಿ ಜೀವನದ ಫೋಟೋ ವೈರಲ್ ಆದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ರನ್ನು ಶಿಫ್ಟ್ ಮಾಡಲಾಗುತ್ತಿದೆ.
08:04 PM (IST) Aug 14
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಡಿಸಿದ ವಿಧೇಯಕದ ಮೇಲೆ ಸುದೀರ್ಘ ಚರ್ಚೆ ಹಾಗೂ ಸಲಹೆಗಳ ಬಳಿಕ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
07:53 PM (IST) Aug 14
ರಸಗೊಬ್ಬರ ಸಮಸ್ಯೆಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ.
07:43 PM (IST) Aug 14
ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮಾಸಿಕ 1500 ರು. ಗೌರವಧನ ಹೆಚ್ಚಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
07:29 PM (IST) Aug 14
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರಿಗಾಗಿ ತಾವು ಮಾಡಿರುವ ಕೆಲಸಗಳು ಜನರಿಗೆ ತಿಳಿದಿದೆ. ಈ ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಗೆ ಬರುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
06:49 PM (IST) Aug 14
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಆಘಾತ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ. ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್, ಸಾಕ್ಷ್ಯ ನಾಶದ ಪ್ರಯತ್ನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಈ ತೀರ್ಪು ನೀಡಲಾಗಿದೆ.
06:47 PM (IST) Aug 14
ಈ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ದರ್ಶನ್ ಬಂಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
06:47 PM (IST) Aug 14
ಜಯದೇವ ಹೃದ್ರೋಗ ಸಂಸ್ಥೆ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಉಪ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
06:14 PM (IST) Aug 14
ಮಗ ಜೈಲುಪಾಲು ಆಗ್ತಿರೊ ವಿಷಯ ತಿಳಿದು ಹೆತ್ತಕರಳು ಕಣ್ಣೀರು ಹಾಕುತ್ತಿದ್ರೆ ಡಿ-ಗ್ಯಾಂಗ್ ಆರೋಪಿ ಅನುಕುಮಾರ್, ಆಗೋದೆಲ್ಲ ಆಗಲಿ ಹಾಯಾಗಿರು, ಏನೇ ಎದುರಾಗಲಿ ಖುಷಿಯಾಗಿರು' ಎಂಬ ಸ್ಟೇಟಸ್ ಹಾಕಿಕೊಂಡಿದ್ದಾನೆ.
06:09 PM (IST) Aug 14
ದೂರದರ್ಶನ ಕೇಂದ್ರದ ಅಭಿವೃದ್ಧಿ ಕೇಂದ್ರದ ಕೈಯಲ್ಲಿದೆ. ದೂರದರ್ಶನ ಕೇಂದ್ರ ಮುಚ್ಚುವ ಅಧಿಕೃತ ಮಾಹಿತಿ ಕೇಂದ್ರದಿಂದ ಲಭ್ಯವಾದಲ್ಲಿ ತಕ್ಷಣ ಪತ್ರ ಬರೆದು, ಇದು ಮುಚ್ಚದಂತೆ ಆಗ್ರಹಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
06:05 PM (IST) Aug 14
ಧರ್ಮಸ್ಥಳದಲ್ಲಿ ನಡೆದ ಶವಗಳ ಹೂಳುವಿಕೆ ಪ್ರಕರಣದ ತನಿಖೆಗೆ ಸರ್ಕಾರ ಯಾವುದೇ ಕಾಲಮಿತಿ ಹಾಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ವರದಿ ಬಂದ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ ಅವರು, ಎಸ್ಐಟಿಗೆ ಸಾಕ್ಷಿದಾರರ ಗಂಭೀರತೆ ಅರಿವಿದೆ ಎಂದರು. ಸತ್ಯ ಹೊರಬರಬೇಕೆಂದು ಹೇಳಿದರು
05:44 PM (IST) Aug 14
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನು ಇತರರಿಗೆ ಸಿಕ್ಕ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುತ್ತಲೇ ಎಲ್ಲರ ಅರೆಸ್ಟ್ ಆಗಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ವಿಡಿಯೋ ವೈರಲ್ ಆಗಿದೆ.
05:38 PM (IST) Aug 14
05:05 PM (IST) Aug 14
04:58 PM (IST) Aug 14
ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳ ಬೇರು 1962ರಲ್ಲಿ ಆರಂಭಗೊಂಡಿತು. ಆಗ ಭಾರತದ ಸರ್ವಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ವಿಕ್ರಮ್ ಸಾರಾಭಾಯಿ ಅವರ ನೇತೃತ್ವದಲ್ಲಿ ಇಂಡಿಯನ್ ನ್ಯಾಷನಲ್ ಕಮಿಟಿ ಫಾರ್ ಸ್ಪೇಸ್ ರಿಸರ್ಚ್ ಸ್ಥಾಪನೆಗೊಂಡಿತು.
04:37 PM (IST) Aug 14
13 ವರ್ಷಗಳ ಹಿಂದೆ ಧರ್ಮಸ್ಥಳಕ್ಕೆ ಕರೆದೊಯ್ಯಲಾದ ಸಹೋದರಿ ಹಿಂತಿರುಗದ ಕಾರಣ ಅಣ್ಣನು ಎಸ್ಐಟಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಕರೆದೊಯ್ದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕುಟುಂಬದ ನೋವು ಮತ್ತು ನ್ಯಾಯಕ್ಕಾಗಿ ಹೋರಾಟದ ಕಥೆ.
04:09 PM (IST) Aug 14
04:06 PM (IST) Aug 14
03:50 PM (IST) Aug 14
03:41 PM (IST) Aug 14
ಚಿಕ್ಕಮಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಪತಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.
03:04 PM (IST) Aug 14
ಅನನ್ಯಾ ಭಟ್ ನಾಪತ್ತೆ ಪ್ರಕರಣದಲ್ಲಿ ಸುದ್ದಿಯಾದ ಸುಜಾತಾ ಭಟ್ ಅವರ ಜೀವನದ ಹಲವು ಅಂಶಗಳು ನಿಗೂಢವಾಗಿವೆ. ತನಿಖೆಯಿಂದ ಹೊರಬಂದ ಮಾಹಿತಿಗಳು ಅನನ್ಯಾ ಅಸ್ತಿತ್ವದ ಬಗ್ಗೆಯೇ ಅನುಮಾನ ಮೂಡಿಸಿವೆ.
02:34 PM (IST) Aug 14
01:54 PM (IST) Aug 14
01:34 PM (IST) Aug 14
01:02 PM (IST) Aug 14
12:13 PM (IST) Aug 14
ಕೊಪ್ಪಳದ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗವು ರಾಜ್ಯಪಾಲರಿಗೆ ಮನವಿ ನೀಡಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಶ್ರೀರಾಮುಲು ಆಗ್ರಹಿಸಿದ್ದಾರೆ.
12:09 PM (IST) Aug 14
ನಟ ದರ್ಶನ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದನ್ನು ಸ್ವಾಗತಿಸಿದ್ದಾರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದುದರಿಂದ ಜಾಮೀನು ರದ್ದತಿಯು ತನಿಖೆಗೆ ಪೂರಕ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
10:59 AM (IST) Aug 14
10:58 AM (IST) Aug 14
ಧರ್ಮಸ್ಥಳದಲ್ಲಿ ನಡೆದಿರುವ ಶವ ಹೂತು ಹಾಕಿರುವ ಆರೋಪ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರ ನಿಯೋಗವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಪ್ರಕರಣದ ಸದ್ಯದ ಪರಿಸ್ಥಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆಯೂ ಚರ್ಚಿಸಲಾಗಿದೆ.
10:44 AM (IST) Aug 14
10:16 AM (IST) Aug 14
ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಕಳೆದ ಆರು ತಿಂಗಳಿನಿಂದ ಒನ್‌ಡೇ ಮ್ಯಾಚ್ ಆಡದೇ ಇದ್ದರೂ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.2 ಸ್ಥಾನಕ್ಕೇರಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
10:14 AM (IST) Aug 14
ಬೆಂಗಳೂರಿನ ರಸ್ತೆಗಳಲ್ಲಿ ಸಾವಿರಾರು ಗುಂಡಿಗಳಿದ್ದು, ಬಿಬಿಎಂಪಿ ಲೆಕ್ಕದ ಪ್ರಕಾರ 6,230 ಗುಂಡಿಗಳನ್ನು ಮುಚ್ಚಲಾಗಿದೆ ಮತ್ತು 4,324 ಗುಂಡಿಗಳು ಬಾಕಿ ಇವೆ. ಆದರೆ, ಈ ಲೆಕ್ಕ ಸುಳ್ಳು ಎಂಬ ಆರೋಪ ಕೇಳಿಬಂದಿದೆ.
09:36 AM (IST) Aug 14
09:10 AM (IST) Aug 14
08:26 AM (IST) Aug 14
ಸ್ವಾತಂತ್ರ್ಯ ದಿನಾಚರಣೆ ಮತ್ತು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸತತ ಮೂರು ದಿನಗಳ ರಜೆ ಘೋಷಣೆಯಾಗಿದ್ದು, ಖಾಸಗಿ ಬಸ್ ಮಾಲಿಕರು ಟಿಕೆಟ್ ದರವನ್ನು ದುಪ್ಪಟ್ಟುಗೊಳಿಸಿ ಪ್ರಯಾಣಿಕರಿಗೆ ಆಘಾತ ನೀಡಿದ್ದಾರೆ.