ಬೆಂಗಳೂರು (ಜ.16): ಅಸ್ಸಾಂ ಚುನಾವಣೆ ಸಂಬಂಧ ಶುಕ್ರವಾರ ದೆಹಲಿಗೆ ತೆರಳುತ್ತಿದ್ದು, ಅಲ್ಲಿಎಲ್ಲನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವ ಕುಮಾರ್, ರಾಹುಲ್ గాంಧಿ ಅವರು ನಮ್ಮ ನಾಯಕರು. ಅವರ ಭೇಟಿಯಲ್ಲಿ ಹೊಸತೇನಿಲ್ಲ. ಅವರ ಭೇಟಿಯಾಗಿ ಕೆಲ ವಿಚಾರ ಚರ್ಚೆಮಾಡಿದ್ದೇನೆ.ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಇನ್ನು ಅಸ್ಸಾಂ ಚುನಾವಣೆ ಸಂಬಂಧ ಸಭೆಯಿದ್ದು, ಅದಕ್ಕಾಗಿ ಶುಕ್ರವಾರ ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿಗೆ ಹೋದಾಗ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್ ಬ್ಲಾಗ್

11:09 AM (IST) Jan 16
10:48 AM (IST) Jan 16
Bigg Boss Kannada Season 12: ಬಿಗ್ ಬಾಸ್ ಮನೆಯಲ್ಲಿರುವ ಅಶ್ವಿನಿ ಗೌಡ ಅವರ ಈ ಆಸೆ ಈಡೇರೋದಿಲ್ಲ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
10:35 AM (IST) Jan 16
BBK 12: Kavya Shaiva's Sweet Warning to Gilli Natraj Goes Viral ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸನಿಹದಲ್ಲಿರುವಾಗ, ದೊಡ್ಮನೆಯಲ್ಲಿ ಭಾವುಕ ಕ್ಷಣಗಳು ಮರುಕಳಿಸಿವೆ. ಕಾವ್ಯಾ ಶೈವ ಮತ್ತು ಗಿಲ್ಲಿ ನಟರಾಜ್ ನಡುವಿನ ಕಿತ್ತಾಟ, ಮುನಿಸು ಈಗ 'ಕ್ಷಮೆ'ಯ ರೂಪ ಪಡೆದಿದೆ.
10:08 AM (IST) Jan 16
Bigg Boss Kannada Season 12: ಗಿಲ್ಲಿ ನಟ ಅವರು ಬಿಗ್ ಬಾಸ್ ಶೋ ಗೆಲ್ಲಲಿ ಎಂದು ಅನೇಕರು ಹೇಳುತ್ತಿದ್ದಾರೆ. ಇಷ್ಟೆಲ್ಲ ಅಭಿಮಾನ, ಪ್ರೀತಿ ಸಿಕ್ಕಿರುವುದು ಯಾಕೆ? ಕಾರಣ ರಿವೀಲ್ ಮಾಡಿದ HR. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
09:26 AM (IST) Jan 16
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಫಿನಾಲೆಗೆ ದಿನಗಣನೆ ಶುರುವಾಗಿದೆ. ಹೀಗಿರುವಾಗ ಗಿಲ್ಲಿ ನಟ ಅವರು ಗುಡ್‌ನ್ಯೂಸ್ ನೀಡಿದ್ದಾರೆ.
09:07 AM (IST) Jan 16
ಗದಗದ ಲಕ್ಕುಂಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಚಿನ್ನದ ನಿಧಿಯ ಹಿನ್ನೆಲೆಯಲ್ಲಿ, ಪುರಾತತ್ವ ಇಲಾಖೆಯು ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನ ಕಾರ್ಯವನ್ನು ಆರಂಭಿಸಿದೆ. ಸರ್ಕಾರವು ಇಡೀ ಗ್ರಾಮವನ್ನೇ ಸ್ಥಳಾಂತರಿಸುವ ಗಂಭೀರ ಚಿಂತನೆ ನಡೆಸುತ್ತಿದೆ.
08:34 AM (IST) Jan 16
ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ನದಿಗಳಲ್ಲಿ ಪುಣ್ಯಸ್ನಾನ ಮಾಡಿ, ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ, ರೈತರು ರಾಸುಗಳಿಗೆ ಕಿಚ್ಚು ಹಾಯಿಸಿ ಸಂಭ್ರಮಿಸಿದರು.
08:33 AM (IST) Jan 16
ಕಾರಿನ ಸೈಲೆನ್ಸರ್ ಮಾರ್ಪಾಡು ಮಾಡಿ ಬೆಂಕಿ ಉಗುಳುವಂತೆ ಮಾಡಿದ್ದ ಕಾರಿನ ಮಾಲೀಕನಿಗೆ ಆರ್.ಟಿ.ಒ ಅಧಿಕಾರಿಗಳು ಹಾಗೂ ಹೆಣ್ಣೂರು ಸಂಚಾರ ಪೊಲೀಸರು ಬರೋಬ್ಬರಿ 1.11 ಲಕ್ಷ ರು. ದಂಡ ವಿಧಿಸಿದ್ದಾರೆ.
08:22 AM (IST) Jan 16
ಶಿಡ್ಲಘಟ್ಟ ಪೌರಾಯುಕ್ತರಿಗೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಅವರಿಗೆ, ಪಕ್ಷಕ್ಕೆ ಮುಜುಗರ ತಂದ ನಡವಳಿಕೆಗಾಗಿ ಕೆಪಿಸಿಸಿ ಶಿಸ್ತು ಸಮಿತಿಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
07:38 AM (IST) Jan 16
ಅಸ್ಸಾಂ ಚುನಾವಣೆ ಸಂಬಂಧ ಶುಕ್ರವಾರ ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಎಲ್ಲ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ನಮ್ಮ ನಾಯಕರು. ಅವರ ಭೇಟಿಯಲ್ಲಿ ಹೊಸತೇನಿಲ್ಲ ಎಂದು ತಿಳಿಸಿದರು.