LIVE NOW
Published : Dec 22, 2025, 06:48 AM ISTUpdated : Dec 22, 2025, 10:32 AM IST

Karnataka News Live: ವಿವಾದಿತ ಬೆಂಗಳೂರು ಟನಲ್ ರಸ್ತೆ ಟೆಂಡರ್ ಅದಾನಿ ಗ್ರೂಪ್ ಪಾಲು? ಕಾಂಗ್ರೆಸ್ ಸರ್ಕಾರಕ್ಕೆ ಧರ್ಮಸಂಕಟ!

ಸಾರಾಂಶ

ವಿಜಯಪುರ: ವಿಧಾನ ಪರಿಷತ್ ಸದಸ್ಯ, ಬಿಜೆಪಿಗ ಕೇಶವ ಪ್ರಸಾದ್‌ ಅವರಿದ್ದ ಕಾರನ್ನು ತಡೆದ ರಾಷ್ಟ್ರೀಯ ಹೆದ್ದಾರಿ ಟೋಲ್‌ ನಾಕಾ ಸಿಬ್ಬಂದಿ ನೀವು ನಿಜವಾದ ಎಂಎಲ್‌ಸಿ ಅನ್ನಲು ಸಾಕ್ಷಿ ಏನು? ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಎನ್‌ಎಚ್‌ 52ರ ವಿಜಯಪುರ ಹೊರವಲಯದ ಹಿಟ್ಟಿನಹಳ್ಳಿ ಬಳಿ ಭಾನುವಾರ ಪ್ರಸಾದ್‌ರಿದ್ದ ಕಾರನ್ನು ಟೋಲ್‌ ಸಿಬ್ಬಂದಿ ತಡೆದಿದ್ದರಿಂದ 1 ತಾಸು ಅವರು ಟೋಲ್‌ ಬಳಿಯೇ ಕಾಯುವಂತಾಯಿತು. ದಾಖಲೆ ತೋರಿಸಿದರೂ ಕಾರಿನ ಮೇಲಿನ ಎಂಎಲ್‌ಸಿ ಗುರುತಿನ ಚೀಟಿ ಕಿತ್ತು ಗಲಾಟೆ ಮಾಡಿ, ಚಾಲಕನ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಪ್ರಸಾದ್‌, ಕೊನೆಗೆ ಎಸ್‌ಪಿಗೆ ಕರೆ ಮಾಡಿದ ಬಳಿಕ ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್‌, ಡಿವೈಎಸ್ಪಿ ಸ್ಥಳಕ್ಕೆ ಬಂದು ವಾಹನ ಬಿಡಿಸಿ ಕಳಿಸಿದ್ದಾರೆ.

 

10:32 AM (IST) Dec 22

ವಿವಾದಿತ ಬೆಂಗಳೂರು ಟನಲ್ ರಸ್ತೆ ಟೆಂಡರ್ ಅದಾನಿ ಗ್ರೂಪ್ ಪಾಲು? ಕಾಂಗ್ರೆಸ್ ಸರ್ಕಾರಕ್ಕೆ ಧರ್ಮಸಂಕಟ!

ಬೆಂಗಳೂರಿನ ಟ್ರಾಫಿಕ್ ನಿವಾರಣೆಗೆ ಉದ್ದೇಶಿಸಲಾದ ಟನಲ್ ರಸ್ತೆ ಯೋಜನೆಗೆ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತಕ್ಕೆ ಬಿಡ್ ಸಲ್ಲಿಸಿದೆ. ಆದರೆ, ರಾಷ್ಟ್ರಮಟ್ಟದಲ್ಲಿ ಅದಾನಿ ವಿರೋಧಿಸುವ ಕಾಂಗ್ರೆಸ್ ಸರ್ಕಾರಕ್ಕೆ ಇದು ರಾಜಕೀಯವಾಗಿ ಇಕ್ಕಟ್ಟನ್ನು ಸೃಷ್ಟಿಸಿದೆ.

Read Full Story

10:06 AM (IST) Dec 22

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಜ್ರ, ಚಿನ್ನ, ತಾಮ್ರ ಸೇರಿದಂತೆ ಬೆಲೆಬಾಳುವ ಲೋಹಗಳ ನಿಕ್ಷೇಪ ಪತ್ತೆಗಾಗಿ 6.71 ಲಕ್ಷ ಹೆಕ್ಟೇರ್ ಪ್ರದೇಶವನ್ನು ಗುರುತಿಸಲಾಗಿದೆ. ಪ್ರಾಥಮಿಕ ಶೋಧದಲ್ಲಿ ಈ ಖನಿಜಗಳ ಇರುವಿಕೆ ಪತ್ತೆಯಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಶೋಧ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
Read Full Story

09:59 AM (IST) Dec 22

'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' ಕೇಶವ ಪ್ರಸಾದ್ ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!

ವಿಜಯಪುರದ ಎನ್‌ಎಚ್‌ 52ರ ಹಿಟ್ಟಿನಹಳ್ಳಿ ಬಳಿಯ ಟೋಲ್‌ನಲ್ಲಿ, ಎಂಎಲ್‌ಸಿ ಕೇಶವ ಪ್ರಸಾದ್ ಅವರ ಕಾರನ್ನು ತಡೆದ ಸಿಬ್ಬಂದಿ, ಅವರ ಗುರುತನ್ನು ಪ್ರಶ್ನಿಸಿ ಉದ್ಧಟತನ ತೋರಿದ್ದಾರೆ. ಗುರುತಿನ ಚೀಟಿ ಕಿತ್ತು, ಚಾಲಕನ ಮೊಬೈಲ್ ಕಸಿದುಕೊಂಡ ನಂತರ, ಪೊಲೀಸರ ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡಿತು.
Read Full Story

09:27 AM (IST) Dec 22

ಪಾಕಿಸ್ತಾನಕ್ಕೆ ನೌಕಾಪಡೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ - ಉಡುಪಿಯಲ್ಲಿ ಗುಜರಾತ್ ಮೂಲದ ಮತ್ತೊಬ್ಬ ಆರೋಪಿ ಬಂಧನ

ಭಾರತ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಲ್ಪೆ ಪೊಲೀಸರು ಗುಜರಾತ್ ಮೂಲದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ  ಸಿಮ್ ಕಾರ್ಡ್‌ ಒದಗಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. 

Read Full Story

08:59 AM (IST) Dec 22

Bigg Boss Kannada 12 - ಮುಂದಿನ ವೀಕೆಂಡ್ ಸಂಚಿಕೆಗೆ ಬರಲ್ಲ ಸುದೀಪ್? ಕಿಚ್ಚನ ಬದಲಿಗೆ ಬರೋರು ಯಾರು?

ಕಿಚ್ಚ ಸುದೀಪ್ ಮುಂಬರುವ ಬಿಗ್‌ಬಾಸ್ ಕನ್ನಡ ಸೀಸನ್ 12ರ ವೀಕೆಂಡ್ ಸಂಚಿಕೆಗೆ ಗೈರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಸುದೀಪ್ ಅನುಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಯಾರು ನಡೆಸಿಕೊಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದ್ದು, ಹಿಂದಿನ ಸೀಸನ್‌ಗಳಂತೆ ವಿಶೇಷ ಅತಿಥಿಯ ಆಗಮನದ ನಿರೀಕ್ಷೆಯಿದೆ.

Read Full Story

08:28 AM (IST) Dec 22

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ

ಹುಬ್ಬಳ್ಳಿ ಬಳಿಯ ಇನಾಂಪುರದಲ್ಲಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಮಗಳನ್ನು ತಂದೆಯೇ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಈ ಕೃತ್ಯ ಎಸಗಲಾಗಿದ್ದು, ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.
Read Full Story

08:19 AM (IST) Dec 22

ಹೂವಿನಹಡಗಲಿ - ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ

ಹೂವಿನಹಡಗಲಿ ಮೀಸಲು ಕ್ಷೇತ್ರದ ಶಾಸಕ ಕೃಷ್ಣನಾಯ್ಕ ಅವರು ಬೆಳಗಾವಿ ಅಧಿವೇಶನದಲ್ಲಿ ಕ್ಷೇತ್ರದ ಗಂಭೀರ ಸಮಸ್ಯೆಗಳನ್ನು ಅನಾವರಣಗೊಳಿಸಿದರು. ಸೋರುತ್ತಿರುವ ಸರ್ಕಾರಿ ಶಾಲೆಗಳು, ಅಪೂರ್ಣ ನೀರಾವರಿ ಯೋಜನೆಗಳು, ಹದಗೆಟ್ಟ ರಸ್ತೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು.

Read Full Story

08:05 AM (IST) Dec 22

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ ಹೆಸರಿನ ವಿಚಾರವಾಗಿ ಸ್ವಾರಸ್ಯಕರ ಚರ್ಚೆ ನಡೆಯಿತು. ಆ ಚರ್ಚೆ ಅಂತ್ಯದಲ್ಲಿ ಸ್ಪೀಕರ್ ಯು.ಟಿ.ಖಾದರ್‌ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರು ಸರಿಯಾಗಿ ಸಂಬೋಧಿಸದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನೂ ಕೊಡುವಂತಾಯಿತು.

Read Full Story

07:54 AM (IST) Dec 22

'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ವಿಭಜನೆಗೆ ಮನಸ್ಸು ಮಾಡಿದ್ದು, ಶೀಘ್ರದಲ್ಲೇ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.

Read Full Story

07:50 AM (IST) Dec 22

''ದ್ವೇಷ ಭಾಷಣ ಎಂದರೆ ಯಾವುದು ಅಂತ ಹೇಳಿ ''

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಮುಖವಾಡ ಹಾಕಿಕೊಂಡು ನಡೆಸುತ್ತಿರುವ ಸರ್ವಾಧಿಕಾರಿ ಆಡಳಿತಕ್ಕೆ ‘ದ್ವೇಷ ಭಾಷಣ ಪ್ರತಿಬಂಧಕ ಮಸೂದೆ’ ಸ್ಪಷ್ಟ ಸಾಕ್ಷಿ. ಈ ಮಸೂದೆ ಕೇವಲ ಒಂದು ಕಾನೂನಿನ ಕರಡಲ್ಲ; ಇದು ಕಾಂಗ್ರೆಸ್ ಪಕ್ಷದ ಹಳೆಯ, ಪ್ರಜಾಪ್ರಭುತ್ವ ವಿರೋಧಿ ‘ತುರ್ತು ಪರಿಸ್ಥಿತಿ ಮನಸ್ಥಿತಿ

Read Full Story

07:44 AM (IST) Dec 22

BBK 12 - ದಿನಸಿ ಕಳೆದುಕೊಂಡ ಸದಸ್ಯರು; ಅಂದು ಗಿಲ್ಲಿ, ಇಂದು ಅಶ್ವಿನಿ; ಕಿಡಿ ಹಚ್ಚಿದ್ರಾ ರಾಶಿಕಾ?

ಬಿಗ್‌ಬಾಸ್ ಮನೆಯಲ್ಲಿ ದಿನಸಿ ಟಾಸ್ಕ್ ವೇಳೆ ಅಶ್ವಿನಿ ಗೌಡ ಮಾಡಿದ ತಪ್ಪಿನಿಂದಾಗಿ ಅವರು ಮತ್ತು ಗಿಲ್ಲಿ ನಡುವೆ ತೀವ್ರ ಜಗಳ ಉಂಟಾಗಿದೆ. ರಾಶಿಕಾ ಹಳೆಯ ಘಟನೆಯನ್ನು ಪ್ರಸ್ತಾಪಿಸಿದ್ದು, ಮಾತಿಗೆ ಮಾತು ಬೆಳೆದು ಮನೆಯಲ್ಲಿ ವಾತಾವರಣ ಬಿಸಿಯಾಗಿದೆ.
Read Full Story

07:33 AM (IST) Dec 22

ಬಾಗಲಕೋಟೆ ಎನ್‌ಜಿಒ - ಬುದ್ಧಿಮಾಂದ್ಯನಿಗೆ ಹೊಡೆದ ನಾಲ್ವರು ಬಂಧನ

ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಎನ್‌ಜಿಒದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಕಾರದಪುಡಿ ಎರಚಿ, ಪೈಪ್‌ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ ಶಿಕ್ಷಕ ದಂಪತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ನಂತರ, ಶಾಲೆಯಲ್ಲಿದ್ದ ಮಕ್ಕಳನ್ನು ಅವರ ಪಾಲಕರೊಂದಿಗೆ ಕಳುಹಿಸಲಾಗಿದೆ.

Read Full Story

07:13 AM (IST) Dec 22

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಹಗರಣವಾಗಿಲ್ಲ ಮತ್ತು ಹಣ ಪಾವತಿಯಲ್ಲಿನ ವಿಳಂಬಕ್ಕೆ ಹಣಕಾಸು ಇಲಾಖೆಯ ತಾಂತ್ರಿಕ ತೊಂದರೆಯೇ ಕಾರಣ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
Read Full Story

07:03 AM (IST) Dec 22

ಚಾಮರಾಜನಗರ - ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು!

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ, ಜಿಎಸ್‌ಐ ಸಮೀಕ್ಷೆಯ ನಂತರ ಚಿನ್ನದ ನಿಕ್ಷೇಪ ಸಿಗುತ್ತದೆ ಎಂಬ ಆಸೆಯಿಂದ ಕಿಡಿಗೇಡಿಗಳು ಸುಮಾರು ಒಂದು ಎಕರೆ ಸರ್ಕಾರಿ ಗುಡ್ಡವನ್ನು ಅಗೆದಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸ್ಥಳೀಯರು ಪೊಲೀಸ್ ತನಿಖೆಗೆ ಒತ್ತಾಯಿಸಿದ್ದಾರೆ.
Read Full Story

More Trending News