ಯಲಬುರ್ಗಾ: ಬೀಗರು ತಂದಿದ್ದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಜನ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಮದುವೆ ಬಳಿಕ ನೂತನ ವಧುವನ್ನು ವರನ ಮನೆ ತುಂಬಿಸಿಕೊಳ್ಳುವ ದಿನ ಬೀಗರ ಕಡೆಯಿಂದ ತಂದಿದ್ದ ಬುತ್ತಿ ಉಪಹಾರ ಸೇವಿಸಿ ಸಂಬಂಧಿಕರು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯರು ಗುನ್ನಾಳ ಮತ್ತು ಹಿರೇವಂಕಲಕುಂಟಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಎಲ್ಲರಲ್ಲಿ ಆತಂಕ ಶುರುವಾಗಿತ್ತು.

02:09 PM (IST) Feb 22
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ.
11:57 AM (IST) Feb 22
ವಸಂತ್ ನಾಯ್ಕ್ ಕೊ*ಲೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಖ್ಯಾತ ಜ್ಯೋತಿಷಿ ಕಮಲಾಕರ ಭಟ್ಟನ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದು ಆತನಿಗೆ ಜಾಮೀನು ಸಿಗುವ ಸಾಧ್ಯತೆಯನ್ನು ಕ್ಷೀಣಿಸಿದೆ.
11:13 AM (IST) Feb 22
ಬಳ್ಳಾರಿಯಲ್ಲಿ ಮಂಗಳಮುಖಿ ಸುಹಾಸಿನಿ ಮತ್ತು ಆಕೆಯ ಪ್ರಿಯಕರ ಶೇಖರ್ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಣಕಾಸು ಮತ್ತು ಮದುವೆ ವಿಚಾರವಾಗಿ ನಡೆದ ಜಗಳದ ನಂತರ ಶೇಖರ್, ಸುಹಾಸಿನಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
10:20 AM (IST) Feb 22
ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕನೊಬ್ಬ ವ್ಯಕ್ತಿಗೆ ಚಾಕು ಇರಿದಿದ್ದಾನೆ. ಮತ್ತೊಂದೆಡೆ, ಮುಂಡಗೋಡ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಶವ ಪತ್ತೆಯಾಗಿದ್ದು, ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
09:45 AM (IST) Feb 22
ಮಳೆಗಾಲದ ವೇಳೆಗೆ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ₹2,671 ಕೋಟಿ ವೆಚ್ಚದ ಕಾಮಗಾರಿಗಳನ್ನು ಘೋಷಿಸಿದ್ದಾರೆ. ವಿಶ್ವಬ್ಯಾಂಕ್ ಸಾಲದೊಂದಿಗೆ ರಾಜಕಾಲುವೆ ನಿರ್ಮಾಣ, ಇ-ಖಾತಾ ವಿತರಣೆ, ಮತ್ತು ಬೆಂಗಳೂರು ಬಿಸಿನೆಸ್ ಕಾರಿಡಾರ್‌ನಂತಹ ಪ್ರಮುಖ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.
09:13 AM (IST) Feb 22
ನಗರದ ರಸ್ತೆಗಳ ಇಕ್ಕೆಲದಲ್ಲಿ ಎಗ್ ರೈಸ್ ಮಾರಾಟ ಮಾಡುತ್ತಿದ್ದ ಬೀದಿಬದಿ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಮುಂದುವರಿಸಿದರೆ ಅಂಗಡಿಗಳನ್ನು ಮುಚ್ಚಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
09:04 AM (IST) Feb 22
08:36 AM (IST) Feb 22
ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ, ಎಂಟು ವರ್ಷದ ಬಾಲಕಿ ತನ್ನ ಸಹೋದರರೊಂದಿಗೆ ಲೂಡೊ ಆಡುವಾಗ ಆಟಿಕೆಯ ಕಾಯಿಯನ್ನು ನುಂಗಿದ್ದಾಳೆ. ಇದರಿಂದ ಉಸಿರುಗಟ್ಟಿ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
08:22 AM (IST) Feb 22
08:10 AM (IST) Feb 22
ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಕಡಿಮೆಯಾಗುತ್ತಿದೆ. ಆದರೆ, ಹವಾಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ.
07:49 AM (IST) Feb 22
ನಟಿ ಕಾವ್ಯಾ ಗೌಡ ಅವರ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮ್ಮ ಮೇಲಿನ ಆರೋಪಗಳಿಗೆ ಪ್ರತ್ಯುತ್ತರವಾಗಿ ಮನೆಯ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋಗಳಲ್ಲಿ ಪತಿಯ ಅಣ್ಣನ ಪತ್ನಿ ಪ್ರೇಮಾ ಮತ್ತು ಅವರ ಸಹೋದರಿ ಹಲ್ಲೆಗೆ ಯತ್ನಿಸುತ್ತಿರುವುದು ಸೆರೆಯಾಗಿದೆ.