ಹಾಸನ: ರಾಜಕೀಯ ಏಳುಬೀಳುಗಳ ನಡುವೆ ಮಂಕಾಗಿರುವ ಜೆಡಿಎಸ್ ಪುಟಿದೇಳಲು ರಣತಂತ್ರ ರೂಪಿಸುತ್ತಿದ್ದು, ಇದಕ್ಕಾಗಿ ತನ್ನ ತವರು ನೆಲದಿಂದಲೇ ಪ್ರಯತ್ನ ಶುರು ಮಾಡಿದೆ. ಇದರ ಮೊದಲ ಹಂತವಾಗಿ ಹಾಸನದಲ್ಲಿ ಶನಿವಾರ ಜೆಡಿಎಸ್ ಜನತಾ ಸಮಾವೇಶ ಹಮ್ಮಿಕೊಂಡಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎಂಎಲ್‌ಸಿ ಸೂರಜ್ ರೇವಣ್ಣ ಭಾಗವಹಿಸಲಿದ್ದಾರೆ
09:23 AM (IST) Jan 24
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ತಲಾ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬದಲು ತಲಾ ₹50 ಸಾವಿರ ನಗದು ಪುರಸ್ಕಾರ ನೀಡಲು ಸರ್ಕಾರ ನಿರ್ಧರಿಸಿದೆ
09:08 AM (IST) Jan 24
2016ರಲ್ಲಿ ನಡೆದ ದುರಂತದಿಂದಾಗಿ ಸ್ಥಗಿತಗೊಂಡಿದ್ದ ಈ ಪ್ರವಾಸಿ ಆಕರ್ಷಣೆಯು, ಇದೀಗ ಪೆಡೆಲ್ ಬೋಟ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ದೋಣಿಗಳೊಂದಿಗೆ ಮತ್ತು ಕಡ್ಡಾಯ ಲೈಫ್ ಜಾಕೆಟ್ ಸುರಕ್ಷತಾ ಕ್ರಮಗಳೊಂದಿಗೆ ಮರುಕಳಿಸುತ್ತಿದೆ.
08:59 AM (IST) Jan 24
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ಬಳಸಲು ಅನುಮತಿ ನೀಡಿದೆ. ಓಲಾ, ಉಬರ್‌ನಂತಹ ಅಗ್ರಿಗೇಟರ್ ಸಂಸ್ಥೆಗಳ ಮೇಲ್ಮನವಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.
08:33 AM (IST) Jan 24
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿಯ ಹಲವು ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಇವುಗಳಲ್ಲಿ ಹೆಚ್ಚು ಪ್ರೊಟೀನ್‌ಯುಕ್ತ ಹಾಲು (ಎನ್-ಪ್ರೊಮಿಲ್ಕ್), ಮೀಡಿಯಂ ಫ್ಯಾಟ್ ಪನೀರ್, ಹೈ ಅರೋಮಾ ತುಪ್ಪ ಮತ್ತು ಪ್ರೊಬಯೋಟಿಕ್ ಮೊಸರು ಸೇರಿವೆ.
08:19 AM (IST) Jan 24
08:06 AM (IST) Jan 24
08:04 AM (IST) Jan 24
ನೇಮಕಾತಿ ವಿಳಂಬದಿಂದ ವಯೋಮಿತಿ ಮೀರುವ ಆತಂಕದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಪ್ರವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ಸಿವಿಲ್ ಹುದ್ದೆಗಳ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಕಾಲ ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಇದು ಲಕ್ಷಾಂತರ ಆಕಾಂಕ್ಷಿಗಳಿಗೆ ವರದಾನವಾಗಿದೆ.
07:29 AM (IST) Jan 24
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿನ ಲಿಂಗಾನುಪಾತದ ಅಸಮತೋಲನವನ್ನು ಸರಿಪಡಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದರು.
06:51 AM (IST) Jan 24
06:49 AM (IST) Jan 24
ರಾಜ್ಯಪಾಲರಿಗೆ ಧಿಕ್ಕಾರ ಕೂಗಿ ಅವಮಾನಿಸಿದ ನಾಲ್ವರು ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಲು ಆಗ್ರಹಿಸಿದ್ದಾರೆ. ಅಲ್ಲದೆ, ಅಬಕಾರಿ ಇಲಾಖೆಯಲ್ಲಿನ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
06:35 AM (IST) Jan 24
ಬೆಂಗಳೂರು: ಹಿಂದುಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಅವರನ್ನು ಜಾಮೀನಿನ ಮೇಲೆ ರಿಲೀಸ್ ಮಾಡಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
06:34 AM (IST) Jan 24
06:13 AM (IST) Jan 24
ಹಿಪ್ಪರಗಿ ಜಲಾಶಯದ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದ್ದು, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಅಭಾವದ ಭೀತಿ ಎದುರಾಗಿದೆ. ಜಲಾಶಯ ಬರಿದಾಗುವ ಆತಂಕವಿದ್ದು, ಎಲ್ಲಾ 22 ಗೇಟ್‌ಗಳನ್ನು ಹೊಸದಾಗಿ ಅಳವಡಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.
06:12 AM (IST) Jan 24
ಬೆಂಗಳೂರಿನಲ್ಲಿ ಉತ್ಪಾದನೆ ಕುಸಿತ ಮತ್ತು ತಮಿಳುನಾಡಿನಲ್ಲಿನ ಪ್ರತಿಭಟನೆಯಿಂದಾಗಿ ಕೋಳಿ ಮಾಂಸದ ದರ ಕೆಜಿಗೆ ₹350 ತಲುಪಿದೆ. ಇದರೊಂದಿಗೆ ಕುರಿ, ಮೇಕೆ ಮಾಂಸದ ದರವೂ ಕೆಜಿಗೆ ₹900ಕ್ಕೆ ಏರಿಕೆಯಾಗಿದ್ದು, ಮಾಂಸ ಪ್ರಿಯರು ಹಾಗೂ ಹೋಟೆಲ್ ಗ್ರಾಹಕರಿಗೆ ಬಿಸಿ ತಟ್ಟಿದೆ.
06:02 AM (IST) Jan 24
ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಪೂರ್ಣವಾಗಿ ಓದದ ಕಾರಣ, ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ರಾಜ್ಯಪಾಲರು ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಆರೋಪಿಸಿದರೆ, ಕಾಂಗ್ರೆಸ್‌ನ ರಾಜಕೀಯ ನಾಟಕ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
05:57 AM (IST) Jan 24
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಿಸಲಾದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುವ ಈ ಬೃಹತ್ ಸಮಾರಂಭ, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.
05:48 AM (IST) Jan 24
ರಾಜ್ಯಪಾಲರ ಭಾಷಣದ ಚರ್ಚೆ ವೇಳೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸಚಿವ ಬೈರತಿ ಸುರೇಶ್ ಕುರಿತು ನೀಡಿದ 'ಏಳು ತಿಂಗಳ' ಹೇಳಿಕೆಯು ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಸ್ಪೀಕರ್ ಆಕ್ಷೇಪಾರ್ಹ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಿದರು.
05:35 AM (IST) Jan 24
05:26 AM (IST) Jan 24
ರಾಜ್ಯಪಾಲರನ್ನು ಅಡ್ಡಗಟ್ಟಿದ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಮತ್ತು ಎಸ್. ರವಿ ಅವರನ್ನು ಅಮಾನತುಗೊಳಿಸಬೇಕೆಂದು ಬಿಜೆಪಿ ಪಟ್ಟುಹಿಡಿದರೆ, ರಾಷ್ಟ್ರಗೀತೆಗೆ ರಾಜ್ಯಪಾಲರು ಅಗೌರವ ತೋರಿದ್ದಾರೆಂದು ಕಾಂಗ್ರೆಸ್ ಚರ್ಚೆಗೆ ಒತ್ತಾಯಿಸಿತು. .
05:17 AM (IST) Jan 24
ಲಕ್ಕುಂಡಿಯಲ್ಲಿ ಪುರಾತತ್ವ ಇಲಾಖೆ ನಡೆಸುತ್ತಿರುವ ಉತ್ಖನನದಲ್ಲಿ ಪ್ರಾಚೀನ ವಸ್ತುಗಳು ಪತ್ತೆಯಾಗುತ್ತಿವೆ. ಈ ನಿಧಿ ಶೋಧದ ಸುದ್ದಿಯಿಂದಾಗಿ ಗ್ರಾಮದ ಜಮೀನಿನ ಬೆಲೆ ಗಗನಕ್ಕೇರಿದ್ದು, ಹೂಡಿಕೆದಾರರು ಆಸಕ್ತಿ ತೋರುತ್ತಿದ್ದಾರೆ. ಪತ್ತೆಯಾದ ವಸ್ತುಗಳು ಕಲ್ಯಾಣ ಚಾಲುಕ್ಯರ ಕಾಲದ್ದೇ ಎಂಬ ಕುತೂಹಲ ಹೆಚ್ಚಾಗಿದೆ.