ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಚಾಮರಾಜಪೇಟೆ ಕ್ಷೇತ್ರದಲ್ಲಿ ಮುಂದಿನ ಉಪಮುಖ್ಯಮಂತ್ರಿ ಜಮೀರ್ ಅಹಮದ್ ಖಾನ್ ಎಂಬ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿವೆ. ಹೊಸ ವರ್ಷದ ಶುಭಾಶಯ ತಿಳಿಸುವ ಪೋಸ್ಟರ್‌ಗಳಲ್ಲಿ ಜಮೀರ್ ಅಹ್ಮದ್ ಅವರನ್ನು ಅಪ್ ಕಮಿಂಗ್ ಡಿಸಿಎಂ (ಮುಂದಿನ ಉಪಮುಖ್ಯಮಂತ್ರಿ) ಎಂದು ಬಿಂಬಿಸಲಾಗಿದೆ. ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಣೆಯೂ ಹೊತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಚರ್ಚೆ ಬೆನ್ನಲ್ಲೇ ಅಪ್‌ಕಮಿಂಗ್ ಡಿಸಿಎಂ ಪೋಸ್ಟರ್ ಹಲವು ರೀತಿಯ ಚರ್ಚೆಯನ್ನು ಹುಟ್ಟು ಹಾಕಿದೆ.
ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕಾದಾಟ ನಡೆಯುತ್ತಿದೆ ಎಂದು ಸುದ್ದಿಯಾಗುತ್ತಿರುವ ಬೆನ್ನಲ್ಲಿಯೇ ಸಚಿವ ಕೆ.ಎಚ್.ಮುನಿಯಪ್ಪ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ಜೈಕಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮಾಜಿ ಶಾಸಕ ಗಂಗಹನುಮಯ್ಯ ಮನೆಗೆ ಕೆ.ಎಚ್. ಮುನಿಯಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಕೆ.ಎಚ್ ಮುನಿಯಪ್ಪ ಸಾಹೇಬರಿಗೆ ಜೈ ಎಂದು ಅಭಿಮಾನಿಗಳು ಘೋಷಣೆ ಕೂಗಿದರು.
11:12 PM (IST) Dec 27
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ನರೇಗಾ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ ಮತ್ತು ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿ ಪಾರದರ್ಶಕತೆ ತರಲಾಗಿದೆ ಎಂದರು.
10:47 PM (IST) Dec 27
Dharwad Car Catches Fire: ಧಾರವಾಡ ನಗರದಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತಕ್ಷಣವೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
10:29 PM (IST) Dec 27
ಗುಂಡ್ಲುಪೇಟೆಯಲ್ಲಿ ಹನುಮ ಜಯಂತಿ ಮೆರವಣಿಗೆಯ ನಂತರ, ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿ ಬಳಸಿದ್ದಕ್ಕೆ ಪೊಲೀಸರು ಡಿಜೆ ವಾಹನವನ್ನು ವಶಕ್ಕೆ ಪಡೆದರು. ಆಕ್ರೋಶಗೊಂಡ ಹನುಮ ಭಕ್ತರಿಂದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ. ಒತ್ತಡಕ್ಕೆ ಮಣಿದ ಪೊಲೀಸರು, ಒಂದೂವರೆ ಗಂಟೆ ಬಳಿಕ ವಾಹನ ಬಿಡುಗಡೆ ಮಾಡಿದರು.
10:06 PM (IST) Dec 27
ಕಾರವಾರದ ಕರಾವಳಿ ಉತ್ಸವದ ಅಂಗವಾಗಿ ನಡೆದ ಆಕರ್ಷಕ ಶ್ವೇತ-ವರ್ಣರಂಜಿತ ಶ್ವಾನ ಪ್ರದರ್ಶನದ ಫೋಟೋ ಗ್ಯಾಲರಿ ವರದಿ ಇಲ್ಲಿದೆ.
09:06 PM (IST) Dec 27
ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕ ಸಣ್ಣ ಹೈದ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಇವರ ಮೇಲೆ ಹುಲಿ ಏಕಾಏಕಿ ದಾಳಿ ಮಾಡಿ ಕೊಂದಿದೆ. ಅರಣ್ಯ ಇಲಾಖೆ ಮೃತರ ಕುಟುಂಬಕ್ಕೆ ಪರಿಹಾರ ಮತ್ತು ಉದ್ಯೋಗದ ಭರವಸೆ.
09:02 PM (IST) Dec 27
ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಆದರೆ ಮಗಳ ಹತ್ಯೆಗೆ ಕಾರಣ ಇದಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
08:45 PM (IST) Dec 27
08:26 PM (IST) Dec 27
ಹೀರೋ ಮೋಟೋಕಾರ್ಪ್ ಹೊಸ ಸೂಪರ್ ಸ್ಪ್ಲೆಂಡರ್ XTEC ಬೈಕನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಬಜೆಟ್ ಸ್ನೇಹಿ ಬೆಲೆ, 68 kmpl ವರೆಗಿನ ಅತ್ಯುತ್ತಮ ಮೈಲೇಜ್ ಬ್ಲೂಟೂತ್ ಕನೆಕ್ಟಿವಿಟಿಯಂತಹ ಸ್ಮಾರ್ಟ್ ಫೀಚರ್ಸ್ ಹೊಂದಿದೆ. 124.7cc ಎಂಜಿನ್ ಹೊಂದಿರುವ ಇದು, ಹೋಂಡಾ ಶೈನ್, ಬಜಾಜ್ ಪ್ಲಾಟಿನಾ ಬೈಕ್‌ಗಳಿಗೆ ಪೈಪೋಟಿ
07:54 PM (IST) Dec 27
ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 21 ಕೋಟಿ ವೆಚ್ಚದ ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ,
07:29 PM (IST) Dec 27
Bigg Boss Raghu News: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ರಘು ಅವರು ವೈಲ್ಡ್‌ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ, ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ರಘು ಅವರು ಫಿನಾಲೆಗೆ ಹೋಗುತ್ತಾರಾ? ಇಲ್ಲವಾ ಎಂದು ಕಾದು ನೋಡಬೇಕಿದೆ.
07:18 PM (IST) Dec 27
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಿದ್ದಾರೆ. ಈ ನಿಯಮವು CL-5 ಲೈಸೆನ್ಸ್ ಹೊಂದಿರುವ ಖಾಸಗಿ ಪಾರ್ಟಿಗಳಿಗೂ ಅನ್ವಯವಾಗಲಿದೆ.
06:54 PM (IST) Dec 27
BBK 12: ಇನ್ನು 20 ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಬಾರಿ ಯಾರು ಬಿಗ್ ಬಾಸ್ ಶೋ ಗೆಲ್ಲುತ್ತಾರೆ ಎಂದು ಚರ್ಚೆ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿಗೆ ಮತ ಹಾಕ್ತೀವಿ ಎಂದು ಹೇಳುವವರ ಸಂಖ್ಯೆ ಜಾಸ್ತಿ ಇದೆ.
06:46 PM (IST) Dec 27
ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಕನ್ನಡಿಗ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಟಿ ಪೂಜಾ ಗಾಂಧಿ ಹಾಗೂ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಗೆ ಮುತ್ತಿಗೆ ಹಾಕಿದರು.
06:31 PM (IST) Dec 27
06:16 PM (IST) Dec 27
05:39 PM (IST) Dec 27
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ಆಟೋ ಚಲಾಯಿಸುತ್ತಿರುವ ಬಾಂಗ್ಲಾದೇಶಿಗರೆಂದು ಹೇಳಿಕೊಳ್ಳುವ ಮೂವರ ವಿಡಿಯೋ ವೈರಲ್ ಆಗಿದೆ. ಉತ್ತಮ ಆದಾಯಕ್ಕಾಗಿ ಬೆಂಗಳೂರಿಗೆ ಬರುವಂತೆ ತಮ್ಮ ಜನರನ್ನು ಆಹ್ವಾನಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮತ್ತು ಭದ್ರತೆಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
05:31 PM (IST) Dec 27
ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ, ಸರಿಯಾದ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಶಾಲಾ ವಿದ್ಯಾರ್ಥಿಗಳು ರಾತ್ರಿಯಿಡೀ ಬಸ್ ನಿಲ್ದಾಣದಲ್ಲಿ ಪರದಾಡಿದರು. ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕಿ ಕರೆಮ್ಮ ನಾಯಕ್, ಸ್ಥಳಕ್ಕೆ ಭೇಟಿ ನೀಡಿ ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
05:05 PM (IST) Dec 27
Santosh Lad attended the Maratha Mahamelav event: ಚಿಕ್ಕೋಡಿಯಲ್ಲಿ ನಡೆದ ಮರಾಠಾ ಮಹಾಮೇಳಾವ್‌ನಲ್ಲಿ ಭಾಗವಹಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಗಡಿಭಾಗದ ಜನರ ವಲಸೆ ತಡೆಯಲು ಇಂಡಸ್ಟ್ರಿಯಲ್ ಮತ್ತು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಿಸುವ ಭರವಸೆ ನೀಡಿದರು.
04:29 PM (IST) Dec 27
ಶಬರಿಮಲೆಗೆ ಪಾದಯಾತ್ರೆ ಹೊರಟಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ವನ್ಯಜೀವಿ ಸುರಕ್ಷತಾ ನಿಯಮಗಳ ಕಾರಣ ನೀಡಿ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದರಿಂದ, ಭಕ್ತರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ.
04:10 PM (IST) Dec 27
Bigg Boss Kannada Season 12 Episode Update: ತಂಡವನ್ನು ಮುನ್ನಡೆಸಬೇಕಾದ ನಾಯಕನೇ ಸೋಮಾರಿಯಾದರೆ, ಆ ಸೈನ್ಯ ಸುಮ್ಮನಿರುತ್ತದೆಯೇ? ಈಗ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ 'ಕೆಲಸ'ದ ಯುದ್ಧ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
03:48 PM (IST) Dec 27
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ದೂರು ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಅನಾವಶ್ಯಕ ವಿವಾದಗಳಲ್ಲಿ ತಮಗೆ ಆಸಕ್ತಿ ಇಲ್ಲ, ಸಮಸ್ಯೆಗಳಿದ್ದರೆ ನೇರವಾಗಿ ಮಾತನಾಡುವಂತೆ ಮತ್ತು ಚಿತ್ರರಂಗದಲ್ಲಿ ಸೌಹಾರ್ದತೆ ಕಾಪಾಡುವಂತೆ ಕರೆ ನೀಡಿದ್ದಾರೆ.
03:11 PM (IST) Dec 27
'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ನಿರ್ದೇಶಕ ಹೇಮಂತ್ ಎಂ. ರಾವ್ ತಮ್ಮ ಹೊಸ ಸಿನಿಮಾ '666 ಆಪರೇಷನ್ ಡ್ರೀಮ್ ಥಿಯೇಟರ್' ಘೋಷಿಸಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಧನಂಜಯ ನಟಿಸಲಿರುವ ಈ ಚಿತ್ರದ ಮೂಲಕ ನಟಿ ಪ್ರಿಯಾಂಕಾ ಮೋಹನ್ ಕನ್ನಡಕ್ಕೆ ಮರಳುತ್ತಿದ್ದಾರೆ.
02:47 PM (IST) Dec 27
ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತಹೀನತೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ O+ ಬದಲು A+ ರಕ್ತ ನೀಡಿ ವೈದ್ಯಕೀಯ ನಿರ್ಲಕ್ಷ್ಯ ಎಸಗಲಾಗಿದೆ. ಈ ಎಡವಟ್ಟಿನಿಂದ ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
02:42 PM (IST) Dec 27
02:32 PM (IST) Dec 27
01:17 PM (IST) Dec 27
ನಟ ಕಿಚ್ಚ ಸುದೀಪ್ ತಮ್ಮ ಮಗಳ ಕುರಿತ ಅಸಭ್ಯ ಕಾಮೆಂಟ್‌ಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗಳು ತನಗಿಂತಲೂ ಸ್ಟ್ರಾಂಗ್ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಸಿನಿಮಾ ಪೈರಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ತಮ್ಮ 'ಮಾರ್ಕ್' ಚಿತ್ರದ ಯಶಸ್ಸಿನ ಕುರಿತು ಮಾತನಾಡಿದ್ದಾರೆ.
01:10 PM (IST) Dec 27
Vaikuntha Ekadashi 2025: Special Arrangements at TTD Temple Bengaluru ಡಿಸೆಂಬರ್ 30 ರಂದು ವೈಕುಂಠ ಏಕಾದಶಿ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
12:53 PM (IST) Dec 27
12:50 PM (IST) Dec 27
12:27 PM (IST) Dec 27
ಈ ವರ್ಷ ಸಣ್ಣ ಬಜೆಟ್ ಸಿನಿಮಾಗಳ ಮೂಲಕ ಯಶಸ್ಸು ಮತ್ತು ಕ್ರೇಜ್ ಗಳಿಸಿದ ಐವರು ನಟಿಯರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ. ಈ ಪಟ್ಟಿಯಲ್ಲಿ ಕೋರ್ಟ್, ರಾಜು ವೆಡ್ಸ್ ರಾಂಬಾಯಿ ಚಿತ್ರಗಳ ನಟಿಯರೂ ಇದ್ದಾರೆ.
12:19 PM (IST) Dec 27
12:00 PM (IST) Dec 27
11:37 AM (IST) Dec 27
ನಟ ಧ್ರುವ ಸರ್ಜಾ ಅಭಿನಯದ ಚಿತ್ರ 'ಕೆಡಿ'. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ಇತ್ತೀಚೆಗೆ ಚಿತ್ರತಂಡ ಅಧಿಕೃತ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿತು.
11:33 AM (IST) Dec 27
ಉದ್ಯಮ ಸ್ಥಾಪನೆಗೆಂದು ಕೆಐಎಡಿಬಿಯಿಂದ ಪಡೆದಿದ್ದ 53.5 ಎಕರೆ ಭೂಮಿಯನ್ನು ಇನ್ಫೋಸಿಸ್, ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ ಮಾರಾಟ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ₹250 ಕೋಟಿ ಮೌಲ್ಯದ ಒಪ್ಪಂದವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
11:24 AM (IST) Dec 27
ಬೆಂಗಳೂರಿನ ಗಾನವಿ ನಿಧನದ ನಂತರ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯಿಸಿದ್ದಾರೆ. ಅಳಿಯನ ಸಾವಿಗೆ ತಪ್ಪಿತಸ್ಥ ಭಾವನೆಯೇ ಕಾರಣ ಎಂದಿರುವ ಅವರು, ಸೂರಜ್ ತಾಯಿಯ ಧನದಾಹವೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿದ್ದಾರೆ.
10:47 AM (IST) Dec 27
‘ಕಾಂತಾರ 1’ ಹಿಂದಿಕ್ಕಿ 2025ರ ಅತೀ ಹೆಚ್ಚು ಗಳಿಕೆಯ ಸಿನಿಮಾ ಎಂಬ ದಾಖಲೆ ಬರೆದಿದೆ. 21ನೇ ದಿನ ಭಾರತದಲ್ಲಿ ಧುರಂಧರ್ 668.80 ಕೋಟಿ ಗಳಿಕೆ ಮಾಡಿದರೆ ವಿಶ್ವಾದ್ಯಂತದ ಗಳಿಕೆ 1006.7 ಕೋಟಿ ರು. ಆಗಿದೆ.
10:40 AM (IST) Dec 27
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಾವ್ಯ ಶೈವ ಅವರ ಮನೆಯವರು ಹೊರಗಡೆ ವಿಚಾರವನ್ನು ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಬೇಗ ಮನೆಯಿಂದ ಹೊರಗಡೆ ಕಳಿಸಲಾಗಿತ್ತು, ಆದರೆ ಹಳೇ ಸೀಸನ್‌ನಲ್ಲಿ ಮಾಡಿದ್ದೇನು?
10:32 AM (IST) Dec 27
ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
10:20 AM (IST) Dec 27
ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
09:54 AM (IST) Dec 27
ಯಾರ್ಡ್ ನಿರ್ವಹಣಾ ಕಾಮಗಾರಿಯಿಂದಾಗಿ ಶಿವಮೊಗ್ಗ-ಬೆಂಗಳೂರು ಮತ್ತು ಶಿವಮೊಗ್ಗ-ಚಿಕ್ಕಮಗಳೂರು ಮಾರ್ಗದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸಲಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.