ಬೆಂಗಳೂರು (ಜ.29): ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದು, ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದಿರುವ ಸಚಿವ ಎಚ್.ಕೆ.ಪಾಟೀಲ್ ಅವರ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಘಟನೆ ಬುಧವಾರ ಸದನದಲ್ಲಿ ನಡೆದಿದೆ. ಭಾಷಣ ನಿಲ್ಲಿಸಲು ಗವರ್ನರ್‌ಗೆ ದೇಶವಕೃಪಾ, ದೆಹಲಿಯಿಂದ ಒತ್ತಡ ಎಂದು ಎಚ್‌ಕೆ ಪಾಟೀಲ್ ಹಾಗೂ ಪ್ರಿಯಾಂಕ್ ಖರ್ಗೆ ಹೇಳಿದರೆ, ಅದಕ್ಕೆ ಪ್ರತಿಯಾಗಿ ಸರ್ಕಾರ ಈ ಆರೋಪ ಮಾಡುತ್ತಿದೆ ಎಂದಾದಲ್ಲಿ ಫೋನ್ ಕದ್ದಾಲಿಕೆ ಆಗಿದೆ ಎಂದರ್ಥ. ಈ ಬಗ್ಗೆ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್ ಬ್ಲಾಗ್

11:55 PM (IST) Jan 29
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ 'ಸ್ಕ್ಯಾಮ್ ಲಾರ್ಡ್' ಶೀರ್ಷಿಕೆಯಡಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಬಿಜೆಪಿ ವಿರುದ್ಧ ಕೆಪಿಸಿಸಿ ದೂರು ದಾಖಲಿಸಿದೆ. ಈ ಪೋಸ್ಟ್ ಸರ್ಕಾರದ ಗಣ್ಯರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂಬ ಆರೋಪ.
11:23 PM (IST) Jan 29
ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಜಿಮ್‌ಖಾನ ಆರಂಭ, ಇಲ್ಲಿ ಆಫ್ ರೋಡ್, ಡ್ರಿಫ್ಟ್, ಜಂಪಿಂಗ್, ಕಂಟ್ರೋಲ್ ಸೇರಿದಂತೆ ಎಲ್ಲಾ ಸ್ಕಿಲ್ ಕಲಿಯಲು ಸಾಧ್ಯವಿದೆ. ಏನಿದು ರಾಯಲ್ ಎನ್‌ಫೀಲ್ಡ್ ಜಿಮ್‌ಖಾನ?
11:07 PM (IST) Jan 29
ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನರೇಗಾ ಯೋಜನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
09:55 PM (IST) Jan 29
ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಕಳೆದ ಎರಡು ದಶಕಗಳಲ್ಲಿ 1,200ಕ್ಕೂ ಹೆಚ್ಚು ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯು ಅತಿ ಹೆಚ್ಚು ಅಪಾಯದಲ್ಲಿದ್ದು, ಅವೈಜ್ಞಾನಿಕ ಅಭಿವೃದ್ಧಿ ಮತ್ತು ಮಳೆಯಿಂದಾಗಿ ಭವಿಷ್ಯದಲ್ಲಿ ಶೇ. 60.7ರಷ್ಟು ಭೂಕುಸಿತದ ಸಂಭಾವ್ಯ ಅಪಾಯವಿದೆ.
09:52 PM (IST) Jan 29
ಸೆಲೆಬ್ರಿಟಿ ಕ್ರಿಕೇಟ್ ಲೀಗ್ ಪಂದ್ಯದಲ್ಲಿ ಬಳಸಿದ ಅವಾಚ್ಯ ಶಬ್ದದ ಬಗ್ಗೆ ಎದ್ದಿದ್ದ ಚರ್ಚೆಗೆ ನಟ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರೇ ಗುರು ಎಂದು ಹೇಳಿದ ಅವರು, ಕ್ರಿಕೆಟ್ ಮೈದಾನದ ವಾತಾವರಣ ಹಾಗೂ ಕೌಟುಂಬಿಕ ಕಾರ್ಯಕ್ರಮದ ಬಗ್ಗೆ ಹೇಳಿದ್ದೇನು?
09:37 PM (IST) Jan 29
ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯವನ್ನು ಒಗ್ಗೂಡಿಸಲು 'ಬ್ಯಾರಿಸ್ ಸೆಂಟ್ರಲ್ ಕಮಿಟಿ'ಯು 'ಬ್ಯಾರಿ ಕೂಟ 2026' ಅನ್ನು ಆಯೋಜಿಸುತ್ತಿದೆ. ಫೆಬ್ರವರಿ 1, 2026 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಆಂಬ್ಯುಲೆನ್ಸ್ ಲೋಕಾರ್ಪಣೆ.
09:16 PM (IST) Jan 29
ಮೈಸೂರಿನ ಹೆಬ್ಬಾಳು ಪ್ರದೇಶದಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಶಂಕೆಯ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುಜರಾತ್ ಡ್ರಗ್ಸ್ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.
09:10 PM (IST) Jan 29
ರಿಶೆಲ್ ಡಿಸೋಜಾ ದುರಂತ ಸಾವು ಕೇಸ್, ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ರಿಶೆಲ್ ಸಾವಿಗೆ ಕಾರಣವಾಗಿದ್ದ ಆರೋಪಿ ಚಿರಾಗ್ ಕೋಠಾರಕರ್‌ನನ್ನು ಪೊಲೀಸರು 20 ದಿನಗಳ ಹುಡುಕಾಟದ ಬಳಿಕ ಅರೆಸ್ಟ್ ಮಾಡಿದ್ದಾರೆ.
09:05 PM (IST) Jan 29
ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಸುಮಾರು 25 ಲಕ್ಷ ಅಕ್ರಮ ಬಾಂಗ್ಲಾ ನಿವಾಸಿಗಳಿದ್ದು, ಅವರಿಂದ ಭದ್ರತೆಗೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ವಿಶೇಷ ತಂಡ ರಚಿಸುವ ಭರವಸೆ ನೀಡಿದೆ.
08:23 PM (IST) Jan 29
ಅರಣ್ಯ ಇಲಾಖೆಯ ಸಹಾಯಕ ಆಯುಕ್ತ ತೇಜಸ್ ಕುಮಾರ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಚಿತ್ರದುರ್ಗದ ರೆಸಾರ್ಟ್ ಸೇರಿದಂತೆ ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು 26.55 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, 8 ಐಷಾರಾಮಿ ಮನೆಗಳು ಮತ್ತು 16 ಎಕರೆ ಕೃಷಿ ಜಮೀನಿನ ದಾಖಲೆ ಪತ್ತೆ
08:13 PM (IST) Jan 29
08:13 PM (IST) Jan 29
08:07 PM (IST) Jan 29
45 ಸಿನಿಮಾ ತೆರೆಕಂಡು, ಓಟಿಟಿಗೂ ಎಂಟ್ರಿ ಕೊಟ್ಟಿದೆ. ಆದ್ರೆ ಈಗ ಅಜಿತ್ ಪವಾರ್ ಅಪಘಾತದಲ್ಲಿ ತೀರಿದ ಬಳಿಕ, 45 ಸಿನಿಮಾ ಬಗ್ಗೆ ಚರ್ಚೆಯಾಗ್ತಾ ಇದೆ. ಅದು ಕಾಕತಾಳಿಯವೇ ಅಥವಾ ನಿಜವೇ? ಪವಾರ್ ಅಪಘಾತಕ್ಕೂ 45 ಸಂಖ್ಯೆಗೂ ನಂಟಿದೆ. ಥೇಟ್ ಸಿನಿಮಾದ ದೃಶ್ಯದಂತೆ ಕಾಣ್ತಾ ಇದೆ ಈ ಸನ್ನಿವೇಶ..!
07:47 PM (IST) Jan 29
ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕಾರ್ಮಿಕ ನಾಯಕ ಅನಂತ್ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬದುಕಿದ್ದಾಗ ಕಾರ್ಮಿಕರ ಹಕ್ಕಿಗಾಗಿ ಹೋರಾಡಿದ್ದ ಅವರು, ಸಾವಿನ ನಂತರವೂ ಶರೀರವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
07:22 PM (IST) Jan 29
ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡಿದ್ದಾರೆಂಬ ಕಾರಣಕ್ಕೆ ಸಚಿವ ಕೆ.ಜೆ. ಜಾರ್ಜ್ ಅಸಮಾಧಾನಗೊಂಡು ರಾಜೀನಾಮೆಗೆ ಮುಂದಾಗಿದ್ದರು ಎಂದು ವರದಿಯಾಗಿದೆ.
07:21 PM (IST) Jan 29
Gram Panchayat Elections 2026 ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ. 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ಹೊರಡಿಸಿದೆ
07:02 PM (IST) Jan 29
ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು, ಚೀಟಿ ವ್ಯವಹಾರದ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಣ ಸಮೇತ ಆರೋಪಿ ಇನ್ಸ್‌ಪೆಕ್ಟರ್‌ನನ್ನು ಬಂಧಿಸಿದ್ದಾರೆ.
06:55 PM (IST) Jan 29
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ, ಕಬ್ಬಿನ ರವದಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರ್ಘಟನೆಯಲ್ಲಿ ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ?
06:46 PM (IST) Jan 29
ವಿಧಾನಸಭೆಯಲ್ಲಿ ಬಳ್ಳಾರಿ ಹಿಂಸಾಚಾರದ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ, ಅಲ್ಲಿನ ಗನ್ ಮತ್ತು ಬಾಂಬ್ ಸಂಸ್ಕೃತಿಗೆ ಅಂತ್ಯ ಹಾಡಲು ಆಗ್ರಹಿಸಿದರು. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿ ಎಂದರು. ಜೊತೆಗೆ, ಡಿಸಿಎಂ ವಿರುದ್ಧ ಹರಿಹಾಯ್ದು, ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿದರು.
06:35 PM (IST) Jan 29
4 ತಿಂಗಳ ಗರ್ಭಿಣಿಯಾಗಿದ್ದ ಸ್ವಾಟ್ ಕಮಾಂಡೋ ಆಗಿದ್ದ 24 ವರ್ಷದ ಮಹಿಳೆಯನ್ನು ಆಕೆಯ ಪತಿ ಡಂಬಲ್ಸ್‌ನಿಂದ ತಲೆಗೆ ಹೊಡೆದು ಕೊಂದಂತಹ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
06:17 PM (IST) Jan 29
ಕೋಲಾರದ ಮೆಟ್ಟುಬಂಡೆ ಬಳಿ ನಡೆದ ಯಲ್ಲೇಶ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರೋಪಿ ಬಿಂದು ಕುಮಾರ್, ತನ್ನ ತಂಗಿಗೆ ಯಲ್ಲೇಶ್ ಕಿರುಕುಳ ನೀಡುತ್ತಿದ್ದ ಕಾರಣ, ತಾನೇ ಈ ಕೊಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮೂಲಕ ತಪ್ಪೊಪ್ಪಿಕೊಂಡಿದ್ದಾನೆ.
05:57 PM (IST) Jan 29
05:33 PM (IST) Jan 29
ಕರ್ನಾಟಕ ಸರ್ಕಾರವು ದಿವ್ಯಾಂಗರ ಸಬಲೀಕರಣಕ್ಕಾಗಿ ಮುಂದಿನ ಮೂರು ತಿಂಗಳೊಳಗೆ ಬೆಂಗಳೂರಿನಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಿದೆ. ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಘೋಷಿಸಿದರು.
05:30 PM (IST) Jan 29
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಶಾಲಾ ಶಿಕ್ಷಣ ಇಲಾಖೆಯು ಋತುಚಕ್ರ ರಜೆ ಸೌಲಭ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಈ ಆದೇಶದ ಅನ್ವಯ, 18 ರಿಂದ 52 ವರ್ಷ ವಯಸ್ಸಿನ ಶಿಕ್ಷಕಿಯರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು ಪಡೆಯಬಹುದಾಗಿದೆ.
05:22 PM (IST) Jan 29
ಮಾರತ್ತಹಳ್ಳಿಯಲ್ಲಿ ಶೇ.99 ರಷ್ಟು ಆಂಧ್ರದವರೇ ಇದ್ದೇವೆ, ಇದು 'ಮಿನಿ ಆಂಧ್ರ' ಎಂದು ಯುವತಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ವಲಸೆ ನಿಯಂತ್ರಣ ಕಾಯ್ದೆ ಜಾರಿಗೆ ತರುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.
05:09 PM (IST) Jan 29
04:46 PM (IST) Jan 29
ಕೆಲವು ಸಿನಿಮಾಗಳ ಹಿಂದಿನ ಕಥೆಗಳು ತುಂಬಾ ವಿಚಿತ್ರವಾಗಿರುತ್ತವೆ. ಸಣ್ಣ ಸಿನಿಮಾಗಳಾದರೂ ದೊಡ್ಡ ಹೀರೋಗಳಿಗೂ ಬೆವರಿಳಿಸುವ ಸಾಧ್ಯತೆ ಇರುತ್ತದೆ. ಮೆಗಾಸ್ಟಾರ್ ಚಿರಂಜೀವಿ ನಟಿಸಿದ ಬ್ಲಾಕ್‌ಬಸ್ಟರ್ ಚಿತ್ರದ ಕಥೆ, ಒಂದು ಕಾಲದಲ್ಲಿ ಎನ್‌ಟಿಆರ್‌ಗೆ ಚಳ್ಳೆಹಣ್ಣು ತಿನ್ನಿಸಿತ್ತು ಎಂಬುದು ನಿಮಗೆ ಗೊತ್ತಾ?
04:40 PM (IST) Jan 29
ರಾಜ್ಯ ಸರ್ಕಾರವು ಸ್ವದೇಶಿ ಪ್ರೇಮ ಉತ್ತೇಜಿಸಲು, ಪ್ರತಿ ತಿಂಗಳ ಮೊದಲ ಶನಿವಾರದಂದು ಸರ್ಕಾರಿ ನೌಕರರಿಗೆ ಖಾದಿ ಉಡುಪು ಧರಿಸುವುದು ಕಡ್ಡಾಯ. ಈ ಯೋಜನೆಯಡಿ ನೌಕರರಿಗೆ ಖಾದಿ ಖರೀದಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ಸೇನಾ ಮಾದರಿಯಲ್ಲಿ 'ಸರ್ಕಾರಿ ನೌಕರರ ಕ್ಯಾಂಟೀನ್' ಸ್ಥಾಪಿಸುವ ಚಿಂತನೆಯೂ ಇದೆ.
04:20 PM (IST) Jan 29
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ತಮ್ಮದೆಂದು ಹೇಳಲಾಗುತ್ತಿರುವ ವೈರಲ್ ಆಡಿಯೋವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಇದು ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ಎಐ ತಂತ್ರಜ್ಞಾನ ಬಳಸಿ ಕೃತಕವಾಗಿ ಸೃಷ್ಟಿಸಿದ ಆಡಿಯೋ ಎಂದು ಆರೋಪಿಸಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
04:07 PM (IST) Jan 29
ರಾಜ್ಯ ಪೊಲೀಸ್ ಇಲಾಖೆಯು ತನ್ನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಅವರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಸಮಯ ಕಳೆಯಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡಲು ಮಹತ್ವದ ಆದೇಶ ಹೊರಡಿಸಿದೆ.
04:06 PM (IST) Jan 29
ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳು ಸಾಮೂಹಿಕವಾಗಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
03:30 PM (IST) Jan 29
ಗದಗ ಜಿಲ್ಲೆಯ ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಅಪರೂಪದ ಮೂರು ಹೆಡೆಯ ನಾಗರ ಹಾವಿನ ಶಿಲ್ಪ ಪತ್ತೆಯಾಗಿದೆ. ಹಸಿರು ಬಳಪದ ಕಲ್ಲಿನಲ್ಲಿ ಕೆತ್ತಲಾದ ಈ ಶಿಲ್ಪದಲ್ಲಿ 'ನಾಗಮಣಿ'ಯಂತಹ ರಚನೆಯಿದೆ.
02:42 PM (IST) Jan 29
Bengaluru Cafe Charges ₹1,000 Per Hour for Long Meetings ಸ್ಟಾರ್ಟ್‌ಅಪ್ ಕಲ್ಚರ್, ರಿಮೋಟ್ ವರ್ಕಿಂಗ್ ಹಾಗೂ ದೀರ್ಘ ಕಾಲದ ಕಾಫಿ ಮೀಟಿಂಗ್‌ಗಳಿಗೆ ಉದ್ಯಾನನಗರಿ ಬೆಂಗಳೂರು ಹೆಸರುವಾಸಿಯಾಗಿದೆ.
02:37 PM (IST) Jan 29
ಮುಡಾ 50:50 ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು 'ಸತ್ಯಮೇವ ಜಯತೆ' ಎಂದು ವಿಜಯೋತ್ಸವ ಆಚರಿಸಿದರು.
02:28 PM (IST) Jan 29
ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಹಾಸನದ ದಂಪತಿ ಕೌಟುಂಬಿಕ ಕಲಹದಿಂದಾಗಿ ದುರಂತ ಅಂತ್ಯ ಕಂಡಿದ್ದಾರೆ. ಪತಿ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೆ, ಇದನ್ನು ಕಂಡು ಮನನೊಂದ ಪತ್ನಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
01:51 PM (IST) Jan 29
ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಅವರಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
01:50 PM (IST) Jan 29
ಹೋಬಳಿಯ ಕಲ್ಲೇ ಸೋಮನಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಲೋಕಾರ್ಪಣೆಗೊಳಿಸಿದರು. ಹಣ, ಅಧಿಕಾರದಿಂದ ಸಿಗದ ಮನಸ್ಸಿನ ನೆಮ್ಮದಿಯು ಕೇವಲ ದೇವಾಲಯಗಳಿಗೆ ಭೇಟಿ ನೀಡುವುದರಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.
01:27 PM (IST) Jan 29
ದಾವಣಗೆರೆಯಲ್ಲಿ ನವವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಓಡಿಹೋದ ಕಾರಣ, ಮನನೊಂದ ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಸೋದರಮಾವ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಆತ್ಮ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮಹಿಳೆ ಮತ್ತು ಆಕೆ ಪ್ರಿಯಕರನನ್ನು ಬಂಧಿಸಿದ್ದಾರೆ.
12:16 PM (IST) Jan 29
ವಿಜಯನಗರ ಜಿಲ್ಲೆಯಲ್ಲಿ ಗಗನಕ್ಕೇರುತ್ತಿರುವ ಚಿನ್ನದ ದರ ಇಳಿಕೆಯಾಗಬೇಕೆಂದು ಭಕ್ತನೊಬ್ಬ ಚಿಮ್ನಳ್ಳಿ ದುರ್ಗಮ್ಮ ದೇವಿಗೆ ವಿಶಿಷ್ಟ ಹರಕೆ ಸಲ್ಲಿಸಿದ್ದಾನೆ. "ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ" ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವಿಗೆ ಅರ್ಪಿಸುವ ಮೂಲಕ ಪ್ರಾರ್ಥಿಸಿದ್ದಾನೆ.
12:11 PM (IST) Jan 29
ಬಳ್ಳಾರಿ ಬ್ಯಾನರ್ ಗಲಾಟೆ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಡಿವೈಎಸ್ಪಿ ನಂದಾರೆಡ್ಡಿ, ರಾಜಕೀಯ ಪ್ರಭಾವದಿಂದ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ಅಧಿಕಾರ ಸ್ವೀಕರಿಸಲು ಬಂದ ನೂತನ ಐಪಿಎಸ್ ಅಧಿಕಾರಿ, ಸರ್ಕಾರದ ಮೌಖಿಕ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಳ್ಳದೆ ವಾಪಸ್ಸಾಗಿದ್ದಾರೆ ಎನ್ನಲಾಗುತ್ತಿದೆ.