ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಪದಗ್ರಹಣದ ಬಳಿಕ ‘ಕುಮಾರ ಕೃಪ’ದ ಕಲ್ಲಿನ ಕಟ್ಟಡವನ್ನು ಗೃಹ ಕಚೇರಿ ಆಗಿ ಬಳಸುವರೇ ಎಂಬ ಪ್ರಶ್ನೆ ಉದ್ಬವವಾಗಿದೆ. 125 ವರ್ಷಗಳ ಹಿಂದೆ ಮೈಸೂರಿನ ದಿವಾನರಾಗಿದ್ದ ಕೆ.ಶೇಷಾದ್ರಿ ಅಯ್ಯರ್ ಅವರ ನಿವಾಸವಾಗಿದ್ದ ಕುಮಾರಕೃಪ ಅತಿಥಿ ಗೃಹ ಈಗ ರಾಜ್ಯ ಸರ್ಕಾರದ ಆಸ್ತಿ. ಮಹಾತ್ಮಗಾಂಧೀಜಿ, ರಾಜೀವ್‌ಗಾಂಧಿ ಹಾಗೂ ಇಂದಿರಾಗಾಂಧಿ ಅವರು ಸಹ ತಂಗಿದ್ದರು ಎನ್ನಲಾದ ಈ ಕಟ್ಟಡವನ್ನು ಡಿ.ಕೆ.ಶಿವಕುಮಾರ್ ಅವರು ಗೃಹ ಕಚೇರಿ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಏಕೆಂದರೆ, ಈ ಕಟ್ಟಡದ ಇನ್ ಹಾಗೂ ಔಟ್ ಗೇಟುಗಳ ಬದಲಾವಣೆ ಹಾಗೂ ದುರಸ್ತಿ ಕಾರ್ಯಕ್ಕೆ ಸೂಚನೆ ಬಂದಿದೆ, ಕಟ್ಟಡದಲ್ಲೂ ಸಣ್ಣ ಪುಟ್ಟ ಬದಲಾವಣೆಗಳ ಮೂಲಕ ವಾಸ್ತು ಪರಿಹಾರಕ್ಕೆ ಲೋಕೋಪಯೋಗಿ ಇಲಾಖೆಗೆ ಸೂಚನೆ ಹೋಗಿದೆ ಎನ್ನಲಾಗುತ್ತಿದೆ.
10:29 PM (IST) May 30
ರಾಜಭವನದಿಂದ ಡಿಕೆ ಶಿವಕುಮಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇದೇ ವೇಳೆ ಕುಟುಂಬಸ್ಥರ ಜೊತೆ ವಿಶೇಷ ಹೋಮದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
09:23 PM (IST) May 30
ಭಾರಿ ಗಾಳಿ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಅಗ್ನಿಶಾಮಕ ದಳ, ರಕ್ಷಣಾ ತಂಡ, ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
08:52 PM (IST) May 30
ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ಡಿಕೆಶಿ ಸಂಘಟನಾ ಚತುರತೆ ಶ್ಲಾಘಿಸಿ, ರಾಜ್ಯದ ಅಭಿವೃದ್ಧಿ ಜವಾಬ್ದಾರಿ ನೆನಪಿಸಿದ್ದಾರೆ.
07:58 PM (IST) May 30
ಅಹಮ್ಮದಾಬಾದ್ ವಿಮಾನಗಳಲ್ಲಿ ಇದೀಗ ಆರ್‌ಸಿಬಿ ಅಭಿಮಾನಿಗಳೇ ತುಂಬಿದ್ದಾರೆ. ಎಲ್ಲರು ಫೈನಲ್ ನೋಡಲು ಹೋಗ್ತಿದ್ದೀರಾ ಎಂದು ಪೈಲೆಟ್ ಕೇಳಿದಾಗ ಎಲ್ಲರೂ ಆರ್‌ಸಿಬಿ ಎಂದು ಕೂಗಿದ್ದಾರೆ. ಕೊನೆಯಲ್ಲಿ ಪೈಲೆಟ್ ಹೇಳಿದ ಮಾತಿಗೆ ಇಡೀ ವಿಮಾನವೇ ಜೈಕಾರ ಹಾಕಿದೆ.
07:22 PM (IST) May 30
07:09 PM (IST) May 30
ಬಿಗ್ ಬಾಸ್ ಖ್ಯಾತಿಯ ನಟಿ ಮತ್ತು ನಿರೂಪಕಿ ಜಾಹ್ನವಿ, ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಂಬರುವ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವ ಅವರು, ಭೂಪಸಂದ್ರ ವಾರ್ಡ್‌ನ ಸಮಸ್ಯೆ ಬಗ್ಗೆ ಗಮನ ಸೆಳೆಯುತ್ತಿದ್ದಾರೆ.
06:57 PM (IST) May 30
ಡಿಕೆ ಶಿವಕುಮಾರ್ ಮುಂದಿನ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಪಟಾಕಿ, ಬೈಕ್ ರ್ಯಾಲಿ , ಡಿಕೆ ಡಿಕೆ ಘೋಷಣೆಗಳ ಮೂಲಕ ಸೆಲೆಬ್ರೇಷನ್ ಶುರುವಾಗಿದೆ.
06:33 PM (IST) May 30
ಸಿದ್ದರಾಮಯ್ಯ ರಾಜೀನಾಮೆಯ ನಂತರ, ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿಎಲ್‌ಪಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಡಿಕೆಶಿ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
05:42 PM (IST) May 30
ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ, ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
05:26 PM (IST) May 30
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ನೇರವಾಗಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸುವ ಮಾತುಗಳು ಕೇಳಿಬಂದಿತ್ತು. ಆದರೆ ಸಿದ್ದರಾಮಯ್ಯ ನೇರವಾಗಿ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ. ಇತ್ತ ಸಿಎಂ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10 ಶಾಸಕರ ಪಟ್ಟಿ ಹೈಕಮಾಂಡ್ ಕೈಸೇರಿದೆ.
04:50 PM (IST) May 30
ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಘೋಷಣೆಯಾಗುತ್ತಿದ್ದಂತೆ, ಅವರ ಕುಟುಂಬದ ಸಂಬಂಧವಿರುವ ಕಾಫಿ ಡೇ ಎಂಟರ್‌ಪ್ರೈಸಸ್ (ಸಿಸಿಡಿ) ಷೇರುಗಳ ಬೆಲೆಯಲ್ಲಿ ಶೇ 20ರಷ್ಟು ಭಾರಿ ಏರಿಕೆ ಕಂಡುಬಂದಿದೆ.
04:22 PM (IST) May 30
03:26 PM (IST) May 30
01:56 PM (IST) May 30
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಖಚಿತವಾಗಿದೆ. ಈ ಬದಲಾವಣೆಯು ಸರ್ಕಾರ ಮತ್ತು ಕೆಪಿಸಿಸಿ ಹಂತದಲ್ಲಿ ಸಚಿವ ಸಂಪುಟ, ಸಭಾಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ..
01:30 PM (IST) May 30
ಡಿಕೆ ಶಿವಕುಮಾರ್(DK Shivakumar) ಸಿಎಂ ಆಗಲಿ ಎಂದು ರಾಮನಗರದ ಈಶ್ವರಪ್ಪ ಮೂರು ವರ್ಷಗಳಿಂದ ತಲೆಕೂದಲು, ಗಡ್ಡ ತೆಗೆಯದೆ ಹರಕೆ ಹೊತ್ತಿದ್ದರು. ಕುಂಭಮೇಳದಲ್ಲಿ ಮಾಡಿದ ಸಂಕಲ್ಪ ಈಗ ನೆರವೇರಿದ್ದು, ಮಂತ್ರಾಲಯದಲ್ಲಿ ಹರಕೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
01:24 PM (IST) May 30
ಡಿಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಅವರೊಂದಿಗೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಸಂಭಾವ್ಯ ಸಚಿವರ ಪಟ್ಟಿ ಮತ್ತು ಉಪಮುಖ್ಯಮಂತ್ರಿ ಸ್ಥಾನಗಳ ಕುರಿತು ಚರ್ಚೆಗಳು ನಡೆಯುತ್ತಿವೆ.
12:30 PM (IST) May 30
ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ಹಲವು ಶಾಸಕರು ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಸಮರ್ಥ ಆಡಳಿತ ಹಿಂದುಳಿದ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಈ ಬೇಡಿಕೆ ಮುಂದಿಡಲಾಗಿದೆ.
12:00 PM (IST) May 30
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಪದಗ್ರಹಣ ಸಮಾರಂಭಕ್ಕೆ ಅವರ ತವರು ಜಿಲ್ಲೆಯಾದ ರಾಮನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಶಾಸಕ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ, ಜಿಲ್ಲೆಯಿಂದ ಸುಮಾರು 60 ಸಾವಿರ ಜನರನ್ನು ಸಮಾರಂಭಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.
10:55 AM (IST) May 30
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಎರಡು ಹಂತಗಳಲ್ಲಿ ಸಚಿವ ಸಂಪುಟ ರಚನೆಯಾಗಲಿದ್ದು, ಮೊದಲ ಹಂತದಲ್ಲಿ ಹಿರಿಯರಿಗೂ, ಎರಡನೇ ಹಂತದಲ್ಲಿ ಯುವಕರಿಗೂ ಆದ್ಯತೆ ನೀಡಲು ನಿರ್ಧರಿಸಲಾಗಿದೆ.
10:50 AM (IST) May 30
10:39 AM (IST) May 30
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಹೊಸ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣವಾದರೂ, ಮಳೆಯಿಂದಾಗಿ ತೀವ್ರ ಜಲಾವೃತ ಮತ್ತು ಸಂಚಾರ ದಟ್ಟಣೆ ಮುಂದುವರೆದಿದೆ. ರಾಜಕಾಲುವೆಗಳಲ್ಲಿನ ಹೂಳು, ಕಸ ಮತ್ತು ಅಪೂರ್ಣ ಕಾಮಗಾರಿಗಳು ಈ ಸಮಸ್ಯೆಗೆ ಕಾರಣವಾಗಿದೆ.
10:27 AM (IST) May 30
10:11 AM (IST) May 30
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
09:04 AM (IST) May 30
08:41 AM (IST) May 30
08:21 AM (IST) May 30
ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಜೂನ್ 1 ರಿಂದ ಆರಂಭವಾಗಿದೆ. ಗದಗ, ಬಾದಾಮಿ, ಬಾಗಲಕೋಟೆ ಮೂಲಕ ಸಂಚರಿಸುವ ಈ ರೈಲಿನ ಸಮಯ ಬದಲಾವಣೆಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.
08:02 AM (IST) May 30