LIVE NOW
Published : Jan 30, 2026, 07:32 AM ISTUpdated : Jan 30, 2026, 10:19 AM IST

State News Live: Mandya - ಅಂಕೇಗೌಡರ ಪುಸ್ತಕಮನೆ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ!

ಸಾರಾಂಶ

ಬೆಂಗಳೂರು (ಜ.30): ಗೃಹಲಕ್ಷ್ಮಿ ಬಳಿಕ ಅನ್ನಭಾಗ್ಯದ ಹಣವನ್ನೂ ಸರ್ಕಾರ ಬಾಕಿ ಇರಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಜನವರಿಯ ಅಕ್ಕಿಯನ್ನು ಸರ್ಕಾರ ನೀಡಿಲ್ಲ. ಅಕ್ಕಿಗೆ ಮೀಸಲಿಟ್ಟ 667 ಕೋಟಿ ಎಲ್ಲಿ ಹೋಯ್ತು? ಎಂದು ವಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇರೋದನ್ನು ರಾಜ್ಯದ ಜನರ ಮುಂದೆ ಇರಿಸಿದ್ದ ಬಿಜೆಪಿ ಸದಸ್ಯ ಮಹೇಶ್‌ ಟೆಂಗಿನಕಾಯ ಅವರೇ ಈ ಪ್ರಶ್ನೆ ಮಾಡಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್‌ ಮುನಿಯಪ್ಪ ಕೂಡ ಉತ್ತರ ನೀಡಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

10:19 AM (IST) Jan 30

Mandya - ಅಂಕೇಗೌಡರ ಪುಸ್ತಕಮನೆ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ!

ಮಂಡ್ಯದ ಅಕ್ಷರ ಸಂತ ಅಂಕೇಗೌಡರ 25 ಲಕ್ಷಕ್ಕೂ ಅಧಿಕ ಪುಸ್ತಕಗಳ ಬೃಹತ್ ಸಂಗ್ರಹವು ಸ್ಥಳಾವಕಾಶದ ಕೊರತೆಯಿಂದಾಗಿ ಹಾಳಾಗುವ ಆತಂಕದಲ್ಲಿದೆ. ಶಾಸಕ ದಿನೇಶ್ ಗೂಳಿಗೌಡರ ಮನವಿಗೆ ಸ್ಪಂದಿಸಿರುವ ಸರ್ಕಾರ, ಪುಸ್ತಕಗಳನ್ನು ವ್ಯವಸ್ಥಿತವಾಗಿ ಜೋಡಿಸಲು ರ್‍ಯಾಕ್‌ಗಳ ಅಳವಡಿಕೆಗೆ ಅನುದಾನ ನೀಡುವ ಭರವಸೆ ನೀಡಿದೆ.

Read Full Story

10:11 AM (IST) Jan 30

ಸಹಾಯವಾಣಿ 112ನಲ್ಲಿ ಇನ್ನು ಬಹುಭಾಷೆ ಬಳಕೆ! ಬೆಂಗಳೂರು ನಗರ ಪೊಲೀಸರಿಂದ ಮಹತ್ವದ ಕ್ರಮ

ಬೆಂಗಳೂರು ನಗರ ಪೊಲೀಸರು 'ನಮ್ಮ 112' ತುರ್ತು ಸಹಾಯವಾಣಿಯಲ್ಲಿ ಬಹುಭಾಷಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದ್ದಾರೆ. ಈ ಮೂಲಕ ಭಾಷೆಯ ಅಡೆತಡೆಗಳನ್ನು ನಿವಾರಿಸಿ, ನಾಗರಿಕರಿಗೆ ಉತ್ತಮ ಸೇವೆ ನೀಡುವುದು ಇದರ ಉದ್ದೇಶವಾಗಿದೆ.  

Read Full Story

09:55 AM (IST) Jan 30

ಬೆಂಗಳೂರು ಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಚಿತ್ರಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ - ಪ್ರಕಾಶ್‌ ರಾಜ್‌ ಆಕ್ರೋಶ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೇನ್‌ ಚಿತ್ರಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡದ್ದನ್ನು ರಾಯಭಾರಿ ಪ್ರಕಾಶ್ ರಾಜ್ ವಿರೋಧಿಸಿದ್ದಾರೆ. ಚಿತ್ರಗಳು ಸಮಾಜದ ಅಂಕು-ಡೊಂಕು ತಿದ್ದಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Read Full Story

09:37 AM (IST) Jan 30

ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಲು ಪಾರ್ಕಿಂಗ್‌ ಶುಲ್ಕ ಹೆಚ್ಚಳಕ್ಕೆ ಆರ್ಥಿಕ ಸಮೀಕ್ಷೆ ಪ್ರಸ್ತಾಪ!

ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆಯು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ಕ್ರಮವು ನಗರದಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
Read Full Story

09:22 AM (IST) Jan 30

ವಿಶಿಷ್ಟ ವಿಭಿನ್ನ ವ್ಯಕ್ತಿತ್ವ ಭಾಸ್ಕರ-ಪರ್ವ! ಪತ್ರಕರ್ತರ ನೆಚ್ಚಿನ ಮೇಷ್ಟ್ರು ನಿವೃತ್ತಿ, ಬದುಕು ಬೆಳಗಿದ ಗುರುವಿಗೆ ಗುರುವಂದನೆ!

ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು 33 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮ  ಆಯೋಜಿಸಿದ್ದಾರೆ.

Read Full Story

07:46 AM (IST) Jan 30

ಪ್ರಾಧ್ಯಾಪಕ ವೃತ್ತಿಯಿಂದ ಭಾಸ್ಕರ ಹೆಗಡೆ ನಿವೃತ್ತಿ, ನಾಳೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಅವರ 33 ವರ್ಷಗಳ ಸೇವಾ ನಿವೃತ್ತಿಯ ಅಂಗವಾಗಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

Read Full Story

07:37 AM (IST) Jan 30

ಅಪೆಕ್ಸ್‌ ಬ್ಯಾಂಕ್‌ ಎಲೆಕ್ಷನ್‌ಗೆ ಕೈ ಹೈಕಮಾಂಡ್‌ ಪ್ರವೇಶ!

ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕಾಗಿ ಕೆ.ಎನ್‌.ರಾಜಣ್ಣ ಹಾಗೂ ಪರಿಷತ್‌ ಸದಸ್ಯ ಎಸ್‌. ರವಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಒಮ್ಮತ ಮೂಡಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ.

 

Read Full Story

07:36 AM (IST) Jan 30

ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಬಿಗ್ ಶಾಕ್‌

ಕೆ.ಸಿ.ವೀರೇಂದ್ರ ಪಪ್ಪಿ ಮತ್ತವರ ಸಹಚರರ ವಿರುದ್ಧದ ಅಕ್ರಮ ಬೆಟ್ಟಿಂಗ್‌ ಮತ್ತು ಜೂಜಾಟ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೃಷಿ ಭೂಮಿ, ನಿವೇಶನಗಳು ಸೇರಿ 177.3 ಕೋಟಿ ರು. ಮೌಲ್ಯದ ಸ್ಥಿರ ಮತ್ತು ಚರಾಸ್ತಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

 

Read Full Story

07:36 AM (IST) Jan 30

ಬಂಡೀಪುರ: ರಾತ್ರಿ ಸಂಚಾರ ನಡೆಸಲು ಸುರಂಗ ಮಾರ್ಗ?

ಕರ್ನಾಟಕ- ಕೇರಳ ಸಂಪರ್ಕಿಸುವ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಪ್ರಯಾಣ ನಿಷೇಧ ಸಮಸ್ಯೆ ಪರಿಹರಿಸುವ ಸಂಬಂಧ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ‘ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಿಸುವ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ನೇಮಿಸಲಾಗಿದೆ

 

Read Full Story

07:36 AM (IST) Jan 30

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ

ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ 6 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಚಿಕ್ಕಬಾಗೇವಾಡಿಯಲ್ಲಿ ವೃದ್ಧನೊಬ್ಬನ ಮೇಲೆ, ಹಾರೋಹಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ, ಲಾಡ್ಲಾಪುರದಲ್ಲಿ ನಾಲ್ವರು ಬಾಲಕಿಯರ ಮೇಲೆ ನಾಯಿಗಳು ದಾಳಿ ನಡೆಸಿ, ಗಾಯಗೊಳಿಸಿವೆ.

 

Read Full Story

07:36 AM (IST) Jan 30

ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ!

ಖಾದಿ ಉತ್ಪನ್ನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಪದ್ಧತಿಗೆ ಏ.21ರ ‘ಸರ್ಕಾರಿ ನೌಕರರ ದಿನಾಚರಣೆ’ಯಂದು ಚಾಲನೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

 

Read Full Story

07:34 AM (IST) Jan 30

ಬಾಕಿ ಪಾವತಿಗೆ ಸರ್ಕಾರಕ್ಕೆ ಗುತ್ತಿಗೆದಾರರ ಡೆಡ್‌ಲೈನ್‌

ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ 38,000 ಕೋಟಿ ರು. ಬಿಲ್‌ ಪಾವತಿಗೆ ಆಗ್ರಹಿಸಿ ಮಾ.5 ರಂದು ಬೃಹತ್‌ ಪ್ರತಿಭಟನೆ ನಡೆಸಲಿದ್ದು, ಒಂದು ವಾರ ರಾಜ್ಯಾದ್ಯಂತ ಎಲ್ಲಾ ಕಾಮಗಾರಿ ಸ್ಥಗಿತಗೊಳಿಸುವ ಮೂಲಕ ಬಿಸಿ ಮುಟ್ಟಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ

 

Read Full Story

07:33 AM (IST) Jan 30

ಗೃಹಲಕ್ಷ್ಮಿ ಬೆನ್ನಲ್ಲೇ, ಅನ್ನಭಾಗ್ಯ ಹಣ ಪಾವತಿ ಬಾಕಿ!

ಬೆಳಗಾವಿ ಅಧಿವೇಶನದಲ್ಲಿ ‘ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಪಾವತಿಯಾಗದ ವಿಚಾರ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಜಟಾಪಟಿಗೆ ಕಾರಣವಾದ ಬೆನ್ನಲ್ಲೇ ಇದೀಗ, ‘ಅನ್ನಭಾಗ್ಯ’ದ ಫಲಾನುಭವಿಗಳಿಗೆ ಒಂದು ತಿಂಗಳ ಹಣ ಪಾವತಿಯಾಗದ ವಿಚಾರ ಗುರುವಾರ ವಿಧಾನಸಭೆಯಲ್ಲಿ ಸದ್ದು ಮಾಡಿತು.

 

Read Full Story

More Trending News