ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಮೇ 10ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 5 ರಿಂದ 10ರ ವರೆಗೆ ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮತ್ತು 30-40 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮೇ 6, 7ರಂದು ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮೇ 10ರ ವರೆಗೆ ಸಾಧಾರಣ ಮಳೆಯಾಗಲಿದೆ. ಉಳಿದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಚದುರಿದಂತೆ ಆಗಾಗ ಹಗುರ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
08:49 PM (IST) May 05
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಇಂದು 'ದಳಪತಿ' ವಿಜಯ್ ಎಂದರೆ ಕೇವಲ ಒಬ್ಬ ನಟನಲ್ಲ, ಅವರೊಬ್ಬ ಅಖಂಡ ಸಾಮ್ರಾಜ್ಯದ ಬ್ರ್ಯಾಂಡ್! ಕೇವಲ ತಮಿಳುನಾಡಷ್ಟೇ ಅಲ್ಲದೆ, ಇಡೀ ಭಾರತದಾದ್ಯಂತ ಮತ್ತು ವಿದೇಶಗಳಲ್ಲೂ ತಮ್ಮದೇ ಆದ ಬೃಹತ್ ಅಭಿಮಾನಿ ಬಳಗವನ್ನು ಹೊಂದಿರುವ ವಿಜಯ್, ಇಂದು 'ಜನನಾಯಕನ್' ಆಗಿ ಮಿಂಚುತ್ತಿದ್ದಾರೆ.
07:31 PM (IST) May 05
ದೇಶ ವೈಜ್ಞಾನಿಕವಾಗಿ ಮುಂದುವರೆಯುತ್ತಿದೆ. ಇದರ ಜೊತೆಗೆ ಭವಿಷ್ಯದ ಪೀಳಿಗೆಗೆ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸ ಮಾಡುತ್ತಿರುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
07:15 PM (IST) May 05
ನಾಡಿಗಾಗಿ ಶ್ರಮಿಸಿದ, ಪ್ರಾಣ ತ್ಯಾಗ ಮಾಡಿದ ಮಹನೀಯರ ಹೆಸರನ್ನು ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಲು ಹೋರಾಟ ಮಾಡುತ್ತಿರುವುದು ಒಳ್ಳೆಯ ಕಾರ್ಯ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
05:07 PM (IST) May 05
2026ರ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿ ಅಧಿಕಾರಕ್ಕೇರಿದೆ.
04:38 PM (IST) May 05
New OTT movies: ಮೇ 5 ರಿಂದ 10ರ ನಡುವೆ, ಓಟಿಟಿಯಲ್ಲಿ ಹಲವು ಅದ್ಭುತ ಸಿನಿಮಾ ಮತ್ತು ವೆಬ್ ಸೀರೀಸ್‌ಗಳು ಬಿಡುಗಡೆಗೆ ಸಿದ್ಧವಾಗಿವೆ. ಇದರಲ್ಲಿ ಕ್ರೈಂ ಥ್ರಿಲ್ಲರ್, ಸಸ್ಪೆನ್ಸ್ ಜೊತೆಗೆ ರೊಮ್ಯಾಂಟಿಕ್ ಮತ್ತು ಆಕ್ಷನ್ ಚಿತ್ರಗಳನ್ನು ನೋಡಬಹುದು.
04:35 PM (IST) May 05
ಬಾಗಲಕೋಟೆಯಲ್ಲಿ ಬಿಜೆಪಿಯ ಸೋಲಿಗೆ ವಿರೋಧ ಪಕ್ಷಕ್ಕಿಂತ ಸ್ವಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳೇ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಚಾರದ ವೇಳೆ ಸಿ.ಸಿ. ಪಾಟೀಲ್, ಪ್ರತಾಪ್ ಸಿಂಹ, ಮತ್ತು ಯತ್ನಾಳ್ ಅವರ ಮಾತುಗಳು ಕುರುಬ, ಅಲ್ಪಸಂಖ್ಯಾತ ಹಾಗೂ ಲಿಂಗಾಯತ ಸಮುದಾಯಗಳ ಮತಗಳು ಕೈತಪ್ಪಲು ಕಾರಣವಾದವ?
03:46 PM (IST) May 05
ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ, ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಈಶಪ್ಪ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ.
02:57 PM (IST) May 05
ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾಡಿದ 'ವೋಟ್ ಚೋರಿ' ಆರೋಪಕ್ಕೆ ಮಾಜಿ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ತಮ್ಮದೇ ಸರ್ಕಾರವಿದ್ದಾಗ ಅಕ್ರಮ ಹೇಗೆ ಸಾಧ್ಯ ಎಂದು ಪ್ರಶ್ನಿಸಿ, ತನಿಖೆ ನಡೆಸುವಂತೆ ಸಿಎಂಗೆ ಸವಾಲು ಹಾಕಿದ್ದಾರೆ.
01:34 PM (IST) May 05
ಕೊಪ್ಪಳ ಜಿಲ್ಲೆಯ ಬಸಾಪೂರ ಬಳಿ ಇರುವ ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಬಲ್ಡೋಟಾ(BALDOTA) ವಿರುದ್ಧ ಶಾಸಕ ದರ್ಶನ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
01:22 PM (IST) May 05
Sirsi Haveri Road: ಶಿರಸಿ ಹಾವೇರಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶುರುವಾಗಿ ಐದು ವರ್ಷಗಳ ಮೇಲಾಯ್ತು. ಹೀಗಾಗಿ ಈ ಭಾಗದ ಜನರು ಒಟ್ಟಿಗೆ ಸೇರಿ ರಸ್ತೆಗೋಸ್ಕರ ಪ್ರತಿಭಟನೆ ಮಾಡಿದ್ದಾರೆ. ಓಡಾಡಲು ಸಾಧ್ಯವಾಗದ ರೀತಿಯಲ್ಲಿ ರಸ್ತೆ ಇದ್ದರೂ ಕೂಡ ಜನಪ್ರತಿನಿಧಿಗಳು ಸುಮ್ಮನೆ ಇದ್ದಾರೆ.
01:11 PM (IST) May 05
12:54 PM (IST) May 05
ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಅವರ ಸಮಾಧಿ ಕುರಿತು ನೀಡಿದ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿ, ಸಾ.ರಾ.ಗೋವಿಂದು ನೇತೃತ್ವದಲ್ಲಿ ರಾಜ್ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಚೇತನ್ ಅವರನ್ನು ಗಡಿಪಾರಿಗೆ ಒತ್ತಾಯ.
12:08 PM (IST) May 05
ಯಾವುದಕ್ಕೂ ಕೊರತೆ ಇಲ್ಲದ ಅದೊಂದು ಸುಂದರ ಸಂಸಾರ. ಗಂಡ ಬ್ಯಾಂಕ್ ಉದ್ಯೋಗಿ, ಹೆಂಡತಿ ಕೃಷಿ ಇಲಾಖೆಯಲ್ಲಿ ಅಧಿಕಾರಿ. ಇಬ್ಬರೂ ಸುಶಿಕ್ಷಿತರೇ.. ಆದರೆ, ಅಡುಗೆ ಮನೆಯಲ್ಲಿ ಶುರುವಾದ ಒಂದು ಸಣ್ಣ 'ಉಪ್ಪು-ಖಾರ'ದ ಜಗಳ, ಇಂದು ಭಯಂಕರ ಹೊಡೆದಾಡಿಕೊಂಡು ರಕ್ತಪಾತಕ್ಕೆ ಬಂದು ನಿಂತಿದೆ..
11:31 AM (IST) May 05
10:13 AM (IST) May 05
09:49 AM (IST) May 05
09:37 AM (IST) May 05
ವಿಡಿಯೋ ಕಾಲ್‌ನಲ್ಲಿ ಮಗುವಿನ ಮುಖ ತೋರಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಳಿಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯ ನಂತರ ಆರೋಪಿ ಅರವಿಂದ್ ಗವಳಿಯನ್ನು ಪೊಲೀಸರು ಬಂಧಿಸಿದ್ದು, ಗಾಯಾಳು ಮಹಾದೇವಿ ಕರಿಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
08:47 AM (IST) May 05
08:30 AM (IST) May 05
07:58 AM (IST) May 05
ಮುಂಡಗೋಡ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಕೊಲ್ಲಾಪುರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಏ. 28ರಂದು ಗ್ರಾಮೀಣ ಠಾಣೆ ವ್ಯಾಪ್ತಿಯ ಇಲ್ಲಿಯ ಬೈಪಾಸ್‌ನ ಹಳಿಯಾಳ ರಸ್ತೆ ಸೇತುವೆ ಕೆಳಗೆ ಶವ ಪತ್ತೆಯಾಗಿತ್ತು
07:38 AM (IST) May 05
06:52 AM (IST) May 05
06:27 AM (IST) May 05
ಚಿಕ್ಕಮಗಳೂರಿನ ಯುವ ಕಾಂಗ್ರೆಸ್ ನಾಯಕ ಸಂದೀಪ್ ಅವರು ಕೇರಳ ಚುನಾವಣಾ ಉಸ್ತುವಾರಿಯಾಗಿ ಪರಿಣಾಮಕಾರಿ ಕಾರ್ಯತಂತ್ರಗಳನ್ನು ರೂಪಿಸಿ ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ. ಅವರ ಸಂಘಟನಾ ಚಾತುರ್ಯ ಮತ್ತು ಸ್ಥಳೀಯ ಸಮಸ್ಯೆಗಳ ಆಳವಾದ ಅಧ್ಯಯನಕ್ಕೆ ಹಿರಿಯ ನಾಯಕರಿಂದ ಶ್ಲಾಘನೆ ವ್ಯಕ್ತವಾಗಿದೆ.
06:07 AM (IST) May 05
05:55 AM (IST) May 05
05:44 AM (IST) May 05
ನಟ ವಿಜಯ್‌ರ ರಾಜಕೀಯ ಯಶಸ್ಸಿನ ಹಿಂದಿರುವ ಚುನಾವಣಾ ತಂತ್ರಗಾರ ಅವರನ್ನು 'ದಕ್ಷಿಣ ಭಾರತದ ಪ್ರಶಾಂತ್ ಕಿಶೋರ್' ಎಂದು ಕರೆಯಲಾಗುತ್ತಿದೆ. ಸಿದ್ದರಾಮಯ್ಯನವರಿಗೂ ಸಲಹೆ ನೀಡಿದ್ದ ಇವರ ತಂತ್ರಗಾರಿಕೆಯಿಂದಲೇ ವಿಜಯ್ ಅಲ್ಪಾವಧಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ.
05:31 AM (IST) May 05
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.