ಶಿವಮೊಗ್ಗ: ಬಿಜೆಪಿಗೆ ಮರಳುವ ಕುರಿತು ರಾಷ್ಟ್ರಭಕ್ತರ ಬಳಗ ಸಂಘಟನೆಯ ನಗರದ ಪದಾಧಿಕಾರಿಗಳು ಸೇರಿದಂತೆ 50 ಪ್ರಮುಖರೊಂದಿಗೆ ಮೂರು ಹಂತಗಳಲ್ಲಿ ಚರ್ಚೆ ನಡೆಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಪಕ್ಷಕ್ಕೆ ಮರಳುವಂತೆ ಆಹ್ವಾನಿಸಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನ್ನ ಜೀವನಕ್ಕೆ ಮಾರ್ಗದರ್ಶನ ನೀಡಿದ್ದು ಸಂಘ ಪರಿವಾರ. ಈಗ ಆರ್‌ಎಸ್‌ಎಸ್‌ನ ಪ್ರಮುಖರು ಬಂದು ಬಿಜೆಪಿಗೆ ಸೇರುವಂತೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ 50 ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಬಾರಿ ಸರಿಯಾದ ವ್ಯಕ್ತಿಗಳು ಭರವಸೆ ನೀಡಿದರೆ ಮಾತ್ರ ಚುನಾವಣೆಯಲ್ಲಿ ನಿಂತು ಗೆದ್ದು ಬನ್ನಿ. ಯಾರ್ಯಾರೋ ಹೇಳಿದರು ಎಂದು ಹೋಗಿ, ಕಳೆದ ಬಾರಿಯಂತೆ ಆಗುವುದು ಬೇಡ ಎಂದು ಇವರೆಲ್ಲರೂ ಸಲಹೆ ನೀಡಿದ್ದಾರೆ ಎಂದರು.
07:46 AM (IST) Oct 08
ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಬಯಲು ಸೀಮೆಗೆ ಪ್ರವೇಶಿಸಿರುವ ಭದ್ರಾ ನದಿ ನೀರು ತನ್ನ ಮೊದಲ ಹಂತದ ಪಯಣವನ್ನು ಶೀಘ್ರದಲ್ಲೇ ಮುಗಿಸಲಿದೆ. ಹೊಸದುರ್ಗ, ಹಿರಿಯೂರು ಮತ್ತು ಹೊಳಲ್ಕೆರೆ ತಾಲೂಕುಗಳ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಾಗಿದ್ದರೆ, ಚಿತ್ರದುರ್ಗ ತಾಲೂಕಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ತಲುಪಿಲ್ಲ.
07:36 AM (IST) Oct 08
07:31 AM (IST) Oct 08
ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಅಪಘಾತದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. 8.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಆಸ್ಪತ್ರೆಯಲ್ಲಿ ಜನರೇಟರ್ ಇದ್ದರೂ ಡೀಸೆಲ್ ಇಲ್ಲದ ಕಾರಣ ಈ ದುಸ್ಥಿತಿ ಎದುರಾಗಿದೆ.
07:21 AM (IST) Oct 08
07:13 AM (IST) Oct 08
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಸರ್ಕಾರವು ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಮುಂದಾಗಿದೆ. ಬಿಎಂಟಿಸಿ ದರ ಶೇ.15-17ರಷ್ಟು ಹಾಗೂ ಇತರ ನಿಗಮಗಳ ದರ ಶೇ.13-15ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅತುಲ್ ತಿವಾರಿ ಸಮಿತಿಯ ವರದಿ ಆಧರಿಸಿ ಅಂತಿಮ ನಿರ್ಧಾರ?
07:10 AM (IST) Oct 08