ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ಸಿಎಂ ಕುರ್ಚಿ ಕಾದಾಟದ ಅಖಾಡಕ್ಕೆ ಮತ್ತೆ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಸಿಎಂ ಹುದ್ದೆ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆ- ಪ್ರತಿ ಹೇಳಿಕೆ ಸಮರದ ಬಗ್ಗೆ ಅತೃಪ್ತಿ ಹೊರಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಗ್ಗಟ್ಟೇ ಬಲ, ಇಲ್ಲದೆ ಹೋದರೆ ನಮ್ಮನ್ನು ಜನ ತಿರಸ್ಕರಿಸುತ್ತಾರೆಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದ್ದಾರೆ. ಇತ್ತ ಜೆಡಿಎಸ್‌ನಿಂದಲೂ ನಾಲ್ಕು ಸಮಾವೇಶಗಳು ನಡೆಯಲಿವೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಹೇಳಿದ್ದಾರೆ.

06:05 PM (IST) Mar 09
ಕಣಕಣದಲ್ಲಿಯೂ ಕೇಸರಿ ಇದೆ ಎನ್ನುವ ಮೂಲಕ ಗುಟ್ಕಾ ತಿನ್ನುವಂತೆ ಜನರ ಹಾದಿ ತಪ್ಪಿಸುತ್ತಿರುವ ನಟರಾದ ಶಾರುಖ್ ಖಾನ್, ಅಜೆಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
03:30 PM (IST) Mar 09
ವೈದ್ಯ ವೃತ್ತಿಯನ್ನೇ ಉಸಿರಾಗಿಸಿಕೊಂಡಿದ್ದ ಮೂತ್ರಪಿಂಡ ಕಸಿ ತಜ್ಞ ತಮ್ಮ ಬದುಕನ್ನು ಕೊನೆಗೊಳಿಸಿಕೊಳ್ಳುವಂಥ ಕೃತ್ಯಕ್ಕೆ ಕೈಹಾಕಿದ್ದು ಏಕೆ? ಸಾವಿರಾರು ಜನರ ಪ್ರಾಣ ಉಳಿಸಿದ ವೈದ್ಯರಿಗೆ ಆಗಿದ್ದೇನು?
02:27 PM (IST) Mar 09
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಆರತಕ್ಷತೆಯು ಅರಮನೆ ಮೈದಾನದಲ್ಲಿ ನಡೆಯಿತು. ಈ ಆರತಕ್ಷತೆಯಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರ ಸರಳತೆಗೆ ಜನರು ಫಿದಾ ಆದರು. ರಾಜಕೀಯ ವೈರಿಗಳಾದ ಸಿದ್ದರಾಮಯ್ಯ ಮತ್ತು ತೇಜಸ್ವಿ ಸೂರ್ಯ ನಗುತ್ತಾ ಮಾತನಾಡುತ್ತಿದ್ದುದು ವಿಶೇಷವಾಗಿತ್ತು.
ಪೂರ್ತಿ ಓದಿ12:00 PM (IST) Mar 09
ಮಹಾರಾಷ್ಟ್ರದ ಬೊರಿವಾಲಿ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಅಪಾಯಕ್ಕೆ ಸಿಲುಕಿದ್ದರು. ರೈಲ್ವೆ ಪೊಲೀಸರ ಸಮಯಪ್ರಜ್ಞೆಯಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೂರ್ತಿ ಓದಿ11:44 AM (IST) Mar 09
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲುಪಾಲಾಗಿರೋ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಡುಗಡೆಯ ಬಗ್ಗೆ ಎಂಎಲ್‌ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಸರ್ಕಾರ ಬದಲಾವಣೆಯ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ.
ಪೂರ್ತಿ ಓದಿ09:42 AM (IST) Mar 09
ಕಾಂಗ್ರೆಸ್‌ನಲ್ಲಿ ಬಿಜೆಪಿ ಪರ ಕೆಲಸ ಮಾಡುವವರನ್ನು ಗುರುತಿಸಿ ಉಚ್ಚಾಟಿಸಲು ಸಿದ್ಧ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಗುಜರಾತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿರದವರನ್ನು ಹೊರಹಾಕಲು ಸೂಚಿಸಿದ್ದಾರೆ.
ಪೂರ್ತಿ ಓದಿ08:22 AM (IST) Mar 09
Karnataka Rain Alert: ಬಿಸಿಲಿನಿಂದ ಬಳಲುತ್ತಿರುವ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮಾರ್ಚ್ 11 ರಿಂದ ರಾಜ್ಯದ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪೂರ್ತಿ ಓದಿ07:41 AM (IST) Mar 09
ಬಿಜೆಪಿ ಮುಖಂಡ ಬಿ.ಶ್ರೀರಾಮುಲು, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರವು ಎಸ್ಸಿ, ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.
ಪೂರ್ತಿ ಓದಿ07:17 AM (IST) Mar 09
ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್‌ನಲ್ಲಿ ಚಪಾತಿ ವಿಚಾರಕ್ಕೆ ವಿದ್ಯಾರ್ಥಿಗಳ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಉತ್ತರ ಮತ್ತು ದಕ್ಷಿಣ ಭಾರತದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಪೂರ್ತಿ ಓದಿ