‘ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ ಎಚ್ಚರಿಕೆ ಬಗ್ಗೆ ಕೇಳಿದಾಗ, ‘ಮಾರುವೇಷದ ಕಾರ್ಯಾಚರಣೆಗಳನ್ನು ನನ್ನ ಮೇಲಿಂದಲೇ ಶುರು ಮಾಡಲು ಪ್ರಯತ್ನ ಮಾಡಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲ ಸಾಕ್ಷ್ಯಗಳೂ ಇವೆ. ನಾನು ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಏನೇ ಮಾತನಾಡಬೇಕಾದರೂ ಸುಮ್ಮನೆ ಮಾತನಾಡುವುದಿಲ್ಲ’ ಎಂದರು.
08:37 AM (IST) Oct 09
ಕೊಟ್ಟೂರು ಪಟ್ಟಣದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸಲು ಸರ್ಕಾರ ವರ್ತುಲ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ನಗರಾಭಿವೃದ್ಧಿ ಇಲಾಖೆಯು ಸಾರ್ವಜನಿಕರ ಆಕ್ಷೇಪಣೆ ಸ್ವೀಕರಿಸುವ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಯೋಜನೆ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ. ಇದರಿಂದ ಪಟ್ಟಣದ ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ ಎಂಬ ಭರವಸೆ ಮೂಡಿದೆ.
08:20 AM (IST) Oct 09
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ಜನರು ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದಾರೆ. ಕೆಲವರು ಸಾಂಪ್ರದಾಯಿಕವಾಗಿ ಗುಳೆ ಹೋದರೆ, ಉಳಿದವರನ್ನು ತಡೆಯಲು ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವಂತೆ ಡಿಸಿಎಂ ಡಾ. ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
08:05 AM (IST) Oct 09
ಮೈಸೂರು ದಸರಾ ಮಹೋತ್ಸವದ ಮರದ ಅಂಬಾರಿ ತಾಲೀಮಿನ ವೇಳೆ ಮಹೇಂದ್ರ ಆನೆಯು ರಾಜಮಾರ್ಗದಲ್ಲಿ ದಿಢೀರ್ ಹಿಂದೇಟು ಹಾಕಿದೆ. ಆನೆಯ ಸುರಕ್ಷತೆಗಾಗಿ 600 ಕೆ.ಜಿ. ಭಾರದ ಅಂಬಾರಿಯನ್ನು ಕೆಳಗಿಳಿಸಿ ತಾಲೀಮನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಇದರಿಂದಾಗಿ ಈ ಬಾರಿಯ ಅಂಬಾರಿ ಹೊರುವ ಪಟ್ಟಿಯಿಂದ ಮಹೇಂದ್ರ ಆನೆ ಹೊರಬೀಳುವ ಸಾಧ್ಯತೆ ಇದೆ.
07:50 AM (IST) Oct 09
ಅತ್ತಿಬೆಲೆ ಬಳಿಯ ವರಸಿದ್ದಿ ಪೆಟ್ರೋಲ್ ಬಂಕ್‌ಗೆ ವೇಗವಾಗಿ ಬಂದ ಜಾಗ್ವಾರ್ ಕಾರು ಡಿಕ್ಕಿ ಹೊಡೆದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಂಕ್ ಸಿಬ್ಬಂದಿ ಗಾಯ., ಕಾರು ಚಾಲಕ ಸಂಜಯ್ ಪೊಲೀಸರ ವಶಕ್ಕೆ. ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಸುಮಾರು 1 ಕೋಟಿ ರೂ. ನಷ್ಟವಾಗಿದೆ.