ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದ ರೈತರಿಗೆ ಆಗುವ ಸಮಸ್ಯೆಗಳ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಸ್ಥಳದಲ್ಲೇ ಪರಿಶೀಲನೆ ನಡೆಸಿದ್ದಾರೆ. ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹಾಗೂ ಅರಣ್ಯ ಒತ್ತುವರಿ ನೋಟಿಸ್ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಜನರ ಸಮಸ್ಯೆ ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಅವರ ರಕ್ಷಣೆಗೆ ಅಗತ್ಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಅಲ್ಲದೆ, ಕೇರಳ ಮಾದರಿಯಲ್ಲೇ ಭೌತಿಕ ಸರ್ವೇ ನಡೆಸುವ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
08:54 AM (IST) Sep 20
08:38 AM (IST) Sep 20
kalaburagi young woman missing case: ಇಲ್ಲಿನ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು 4 ತಿಂಗಳ ಹಿಂದೆ ಕಾಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮೆಟ್ಟಲೇರಿದೆ. ಯುವತಿಯು ಬಾಂಗ್ಲಾದೇಶಕ್ಕೆ ಬಲವಂತವಾಗಿ ಸಾಗಿಸಲಾಗಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
08:38 AM (IST) Sep 20
ಕರಾವಳಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಕೇವಲ ಬೂಟಾಟಿಕೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣವಿಲ್ಲ ಹಾಗೂ ಮಂಗಳೂರು ರೈಲ್ವೆ ವಿಭಾಗದ ವಿಚಾರದಲ್ಲಿ ಕೇರಳಕ್ಕೆ ಹೆದರಿ ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
08:22 AM (IST) Sep 20
ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹7,760 ಕೋಟಿ ವಿಶೇಷ ಅನುದಾನ ನೀಡಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹರ್ಷ ವ್ಯಕ್ತಪಡಿಸಿದ್ದು, ರೈಲ್ವೆ ಸಚಿವರನ್ನು ಭೇಟಿಯಾಗಿ ಇತರ ಪ್ರಮುಖ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಮನವಿ ಮಾಡಿದ್ದಾರೆ.
08:03 AM (IST) Sep 20
ಬೆಂಗಳೂರು ಜಲಮಂಡಳಿಯು ಕಾವೇರಿ ನೀರು ಸರಬರಾಜು ಯೋಜನೆಯ 1ನೇ ಹಂತದಲ್ಲಿ ತುರ್ತು ದುರಸ್ತಿ ಕಾಮಗಾರಿ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
08:02 AM (IST) Sep 20
07:36 AM (IST) Sep 20
ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಜನರ ಸಮಸ್ಯೆ ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಅವರ ರಕ್ಷಣೆಗೆ ಅಗತ್ಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಅಲ್ಲದೆ, ಕೇರಳ ಮಾದರಿಯಲ್ಲೇ ಭೌತಿಕ ಸರ್ವೇ ನಡೆಸುವ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶನಿವಾರ ಅವರು ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಭಾಗದಲ್ಲಿ ಎದುರಾಗಿರುವ ಆತಂಕಗಳು ಹಾಗೂ ಪರಿಣಾಮಗಳ ಕುರಿತು ಸ್ಥಳೀಯ ರೈತರು, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಶುಕ್ರವಾರ ದಕ್ಷಿಣ ಕನ್ನಡ, ಶನಿವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಭಾನುವಾರ ಹಾಸನ ಜಿಲ್ಲೆಗೆ ತೆರಳಲಿದ್ದೇನೆ. ಈ ವೇಳೆ ಸ್ಥಳೀಯರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.