ಧರ್ಮಸ್ಥಳ ವಿರುದ್ದ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಜೆಡಿಎಸ್ ನಾಯಕ ಸಾರಾ ಮಹೇಶ್ ನೇತೃತ್ವದಲ್ಲಿ ಮೈಸೂರಿನಿಂದ ಧರ್ಮಸ್ಥಳ ಯಾತ್ರೆ ಆರಂಭಗೊಂಡಿದೆ. 300 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್ ಯಾತ್ರೆಗೆ ಚಾಲನೆ ನೀಡಲಾಗಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ದ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ನಿಲ್ಲಬೇಕು ಎಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಯಾತ್ರೆ ಆರಂಭಿಸಿದ್ದಾರೆ. ಷಡ್ಯಂತ್ರ ಹಿಂದಿನ ಕಾಣದ ಕೈಗಳಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇತ್ತ ಧರ್ಮಸ್ಥಳ ಪ್ರಕರಣ ಸಂಬಂಧ ಬಂಧಿತ ಮಾಸ್ಕ್ ಮ್ಯಾನ್ ವಿಚಾರಣೆ ಇಂದು ನಡೆಯಲಿದೆ. ಇತ್ತ ಯೂಟ್ಯೂಬರ್ ಸಮೀರ್ ಇಂದು ಕೂಡ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ರಾಜ್ಯದ ಇಂದಿನ ಪ್ರಮುಖ ಸುದ್ದಿಯ ಕ್ಷಣ ಕ್ಷಣದ ಅಪ್‌ಡೇಟ್ ಇಲ್ಲಿದೆ.

11:49 PM (IST) Aug 25
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಮರುವಿಂಗಡಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ವಯ 5 ಪ್ರವರ್ಗಗಳ ಬದಲಾಗಿ 3 ಪ್ರವರ್ಗಗಳಾಗಿ ವಿಂಗಡಿಸಿ, ಮೀಸಲಾತಿ ಪ್ರಮಾಣ ನಿಗದಿಪಡಿಸಲಾಗಿದೆ. 101 ಜಾತಿಗಳ ಪೈಕಿ ಯಾರಿ ಯಾವ ವರ್ಗಕ್ಕೆ ಬರುತ್ತೀರಿ ಈ ಆದೇಶ ಪಟ್ಟಿ ನೋಡಿ..
11:36 PM (IST) Aug 25
ದಕ್ಷಿಣ ಭಾರತದ ಅತ್ಯುತ್ತಮ ಗಣೇಶ ದೇವಸ್ಥಾನಗಳು: ಗಣೇಶ ಚತುರ್ಥಿ ಬಪ್ಪನಿಗೆ ತುಂಬಾ ವಿಶೇಷವಾದ ಹಬ್ಬ. ಈ ವಿಶೇಷ ಸಂದರ್ಭದಲ್ಲಿ ಗಣಪತಿ ಬಪ್ಪನ ದರ್ಶನ ಪಡೆಯಲು ಬಯಸುವವರು ದಕ್ಷಿಣ ಭಾರತದ ಕೆಲವು ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ನಿಮ್ಮ ಹರಕೆಗಳನ್ನು ಪೂರೈಸಿಕೊಳ್ಳಿ.
11:27 PM (IST) Aug 25
11:22 PM (IST) Aug 25
ಮಾಜಿ ಸಂಸದೆ ಸುಮಲತಾ ಅಂಬರೀಶ್ ನಿರ್ಮಿಸಿದ ಬಸ್ ತಂಗುದಾಣವನ್ನು ನೆಲಸಮಗೊಳಿಸಲಾಗಿದೆ. ಕೇವಲ ಎರಡು ವರ್ಷದ ಹಳೆಯ ಬಸ್ ನಿಲ್ದಾಣವನ್ನು ಕೆಡವಿದ್ದಕ್ಕೆ ಆಕ್ರೋಶ ವ್ಯಕ್ತವಾಯಿತು.
11:07 PM (IST) Aug 25
10:50 PM (IST) Aug 25
ಹಾವೇರಿಯಲ್ಲಿ ಚಿತ್ರದುರ್ಗ ಮೂಲದ ನೃತ್ಯ ಮಾಸ್ಟರ್ ಲಿಂಗೇಶ್ ಅವರ ಕೊಲೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ಫ್ಲೈಓವರ್ ಮೇಲೆ ಅವರ ಮೃತದೇಹ ಪತ್ತೆಯಾಗಿದೆ.
10:32 PM (IST) Aug 25
ಮಹಾವತಾರ್ ನರಸಿಂಹ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಸಾಬೀತಾಗಿದೆ. 32 ದಿನಗಳಲ್ಲಿ ಚಿತ್ರವು ವಿಶ್ವಾದ್ಯಂತ 301 ಕೋಟಿ ರೂ.ಗಿಂತ ಹೆಚ್ಚು ಗಳಿಸಿದೆ. 15 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರವು 1450% ಕ್ಕಿಂತ ಹೆಚ್ಚು ಲಾಭ ಬಂದಿದೆ. ಸು ಫ್ರಂ ಸೋಗಿದೆಯೇ ಟಾಫ್-5 ಸ್ಥಾನ?
09:13 PM (IST) Aug 25
07:52 PM (IST) Aug 25
ಧರ್ಮಸ್ಥಳ ಪ್ರಕರಣದಲ್ಲಿ ಜಯಂತ್.ಟಿ ತಮ್ಮ ಪಾತ್ರವನ್ನು ನಿರಾಕರಿಸಿದ್ದಾರೆ, ಸುಜಾತ ಭಟ್ ಪ್ರಕರಣವನ್ನು ಸುಳ್ಳು ಎಂದು ಕರೆದಿದ್ದಾರೆ ಮತ್ತು ಚಿನ್ನಯ್ಯನಿಗೆ ಆಶ್ರಯ ನೀಡಿದ್ದನ್ನು ಒಪ್ಪಿಕೊಂಡಿದ್ದಾರೆ. ಸತ್ಯಕ್ಕಾಗಿ ಹೋರಾಟ ಮಾಡುತ್ತಿರುವುದಾಗಿ ಹೇಳಿ, ಬಂಧನಕ್ಕೆ ಸಿದ್ಧ ಎಂದಿದ್ದಾರೆ.
07:38 PM (IST) Aug 25
ಬಾನು ಮುಷ್ತಾಕ್ ಅವರ ದಸರಾ ಉದ್ಘಾಟನೆ ಆಯ್ಕೆ ಕುರಿತು ಯದುವೀರ್ ಒಡೆಯರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಾಯಿ ಭುವನೇಶ್ವರಿ ಮತ್ತು ಚಾಮುಂಡೇಶ್ವರಿ ಬಗ್ಗೆ ಗೌರವ ಸ್ಪಷ್ಟಪಡಿಸುವಂತೆ ಮುಷ್ತಾಕ್ ಅವರಿಗೆ ಒತ್ತಾಯಿಸಿದ್ದಾರೆ.
06:51 PM (IST) Aug 25
06:48 PM (IST) Aug 25
06:41 PM (IST) Aug 25
05:48 PM (IST) Aug 25
05:23 PM (IST) Aug 25
05:23 PM (IST) Aug 25
ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿರುವುದನ್ನು ಯದುವೀರ್ ಒಡೆಯರ್ ಸ್ವಾಗತಿಸಿದ್ದಾರೆ.
05:07 PM (IST) Aug 25
04:53 PM (IST) Aug 25
04:52 PM (IST) Aug 25
ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿ, ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ, ಸದ್ಗುರುಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಇದು ಹಿಂದೂ ಧರ್ಮದ ಮೇಲಿನ ನಿಜವಾದ ನಂಬಿಕೆಯೇ ಅಥವಾ ರಾಜಕೀಯ ತಂತ್ರಗಾರಿಕೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಎಂದು ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
04:36 PM (IST) Aug 25
ಧಾರವಾಡದ ಐಐಟಿಯಲ್ಲಿ ಎನ್‌ಸಿಸಿ ಆಯ್ಕೆ ರನ್ನಿಂಗ್‌ರೇಸ್ ವೇಳೆ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಅಸ್ತಿತ್ವ ಗುಪ್ತಾ (20) ಎಂಬ ಎಂ.ಟೆಕ್ ವಿದ್ಯಾರ್ಥಿ ಓಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
04:35 PM (IST) Aug 25
ಕಲ್ಯಾಡ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಯುವತಿ ದರ್ಶಿತಾಳನ್ನು ಬಾಯಲ್ಲಿ ಸ್ಫೋಟಕ ತುರುಕಿ ಕೊಲೆ ಮಾಡಲಾಗಿದೆ. ಮಾವನನ್ನು ಸೊಸೆ ಕೊಲೆ ಮಾಡಿರುವ ಘಟನೆಯೂ ವರದಿಯಾಗಿದೆ.
04:19 PM (IST) Aug 25
ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದನ್ನು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಖಂಡಿಸಿದ್ದಾರೆ. ನಾಸ್ತಿಕರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವ ಮೂಲಕ ಸರ್ಕಾರ ಹಿಂದೂ ಧರ್ಮವನ್ನು ಅವಮಾನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
03:55 PM (IST) Aug 25
ನಿರ್ಮಾಣ ಹಂತದ ಕಟ್ಟಡಕ್ಕೆ ಕಿಪಿ ಕೀರ್ತಿಯ ಫೋಟೋ ಅಳವಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಅವಮಾನ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
03:52 PM (IST) Aug 25
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆಯುತ್ತಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೈಸೂರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿಯೂ ಭಾಗವಹಿಸಲಿದ್ದಾರೆ.
03:50 PM (IST) Aug 25
ಅಕ್ರಮಗಳ ತನಿಖೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ಏಕಾಏಕಿ ಶಾಸಕನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇಡಿ ದಾಳಿಯಾಗುತ್ತಿದ್ದಂತೆ ಶಾಸಕ ಮನೆಯ ಗೋಡೆ ಹತ್ತಿ ಕೆಳಕ್ಕೆ ಜಿಗಿದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಓಡಿ ಹೋಗಲು ಪ್ರಯತ್ನಿಸಿದ ಶಾಸಕನನ್ನು ಅರೆಸ್ಟ್ ಮಾಡಲಾಗಿದೆ.
03:32 PM (IST) Aug 25
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕನ್ನಡ ಧ್ವಜ ಮತ್ತು ಭುವನೇಶ್ವರಿ ಪರಿಕಲ್ಪನೆಯನ್ನು ಒಪ್ಪದ ಭಾನು, ಚಾಮುಂಡೇಶ್ವರಿಯನ್ನು ಹೇಗೆ ಒಪ್ಪುತ್ತಾರೆ ಎಂದು ಪ್ರಶ್ನಿಸಿದ್ದಾರೆ.
03:08 PM (IST) Aug 25
02:48 PM (IST) Aug 25
ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರ ದಸರಾ ಉದ್ಘಾಟನೆ ಆಯ್ಕೆಗೆ ವಿರೋಧ ವ್ಯಕ್ತವಾಗಿದೆ. ಶಾಸಕ ಮುನಿರತ್ನ, ಭಾನು ಮುಷ್ತಾಕ್ ಹಿಂದೂ ಧಾರ್ಮಿಕ ಸಂಪ್ರದಾಯಗಳನ್ನು ಪಾಲಿಸಿ ಉದ್ಘಾಟನೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
02:40 PM (IST) Aug 25
ಮಹಿಳೆಗೆ ಕಿರುಕುಳ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕನನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇಷ್ಟೇ ಅಲ್ಲ ವಿಧಾನಸಭಾ ಅಧಿವೇಶನದಿಂದ ದೂರ ಉಳಿಯುವಂತೆ ಸೂಚಿಸಲಾಗಿದೆ.
01:47 PM (IST) Aug 25
ಈಗ ಅನನ್ಯ ಭಟ್ ಇರುವುದೇ ಸುಳ್ಳು ಆಗಿದೆ. ಮಾಸ್ಕ್ ಮ್ಯಾನ್‌ಗೆ ಮಾಸ್ಕ್ ಹಾಕಿಸಿರುವುದೇ ಸರ್ಕಾರ. ಅವನಿಗೆ ಬೆಂಬಲ ಕೊಟ್ಟಿರುವುದೇ ಸಿದ್ದರಾಮಯ್ಯ ಸರ್ಕಾರ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
01:19 PM (IST) Aug 25
ಬಿಜೆಪಿಯವರು 10 ಗುಂಡಿ ತೆಗೆದ ಮೇಲೆ ಮಾತನಾಡುತ್ತಿದ್ದಾರೆ. ಇಲ್ಲಿಯವರೆಗೆ ಯಾಕೆ ಮಾತನಾಡಲಿಲ್ಲ? ಈಗ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದರು.
01:18 PM (IST) Aug 25
01:11 PM (IST) Aug 25
ಲೇಖಕಿ ಭಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಆಹ್ವಾನ ನೀಡಿರುವ ಕಾಂಗ್ರೆಸ್ ನಿರ್ಧಾರ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ತಾಯಿ ಚಾಮಂಡಿಯನ್ನು ನಂಬುತ್ತಾರೋ, ಬಿಡುತ್ತಾರೋ ಅವರಿಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
12:59 PM (IST) Aug 25
ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಈಗ ದೇಶದ ಗಡಿ ದಾಟಿ ವಿದೇಶಗಳಿಗೂ ರಫ್ತಾಗಲು ಸಜ್ಜಾಗಿದೆ. ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದೆ. ಹೆಚ್ಚುತ್ತಿರುವ ಬೇಡಿಕೆ ಹಾಗೂ ಉತ್ಪಾದನಾ ಸಾಮರ್ಥ್ಯದೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಸಿದ್ಧವಾಗಿದೆ.
12:48 PM (IST) Aug 25
ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಭಾನು ಅವರ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ.
12:26 PM (IST) Aug 25
ಪ್ರಧಾನಿ, ಮುಖ್ಯಮಂತ್ರಿ ಪದಚ್ಯುತಿ ಮಸೂದೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ವಿಪಕ್ಷಗಳು ಇದು ವಿರೋಧಿಗಳ ಹಣಿಯುವ ತಂತ್ರ ಎಂದು ಆರೋಪಿಸಿದೆ. ಆದರೆ ಈ ಮಸೂದೆ ಕುರಿತು ಪ್ರಧಾನಿ ಮೋದಿ ತೆಗೆದುಕೊಂಡ ದೃಢ ನಿರ್ಧಾರ ಕುರಿತು ಸಚಿವ ಕಿರಣ್ ರಿಜಿಜು ಬಹಿರಂಗಪಡಿಸಿದ್ದಾರೆ.
12:23 PM (IST) Aug 25
ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ದೂರುದಾರ ತಪ್ಪೊಪ್ಪಿಕೊಂಡಿದ್ದಾನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟಿರುವ ದೂರುದಾರ, ತನಿಖೆಗೆ ಸಹಕರಿಸುತ್ತಿದ್ದಾನೆ. ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸಿರುವ ತನಿಖೆಯಲ್ಲಿ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುವುದಿದೆ.
11:33 AM (IST) Aug 25
ಸಭಾಪತಿ ಯಾರಿಗೆ ಅವಕಾಶ ಕೊಡಬೇಕೆಂದು ಯೋಚಿಸುತ್ತಿರುವಾಗಲೇ ನಾಗರಾಜ ಯಾದವ್, ತಾವು ಹೇಳಬೇಕೆಂದಿದ್ದ ವಿಚಾರವನ್ನು ಒಂದೇ ಉಸಿರಿಗೆ ಫುಲ್‌ಸ್ಟಾಪ್, ಕೊಮಾ ಇಲ್ಲದಂತೆ ಹೇಳಿ ಮುಗಿಸಿ ಬಿಟ್ಟರು.
11:16 AM (IST) Aug 25
11:16 AM (IST) Aug 25
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ದೂರುದಾರ ಚಿನ್ನಯ್ಯ ಅರೆಸ್ಟ್ ಆಗಿ ವಿಚಾರಣೆ ಎದುರಿಸುತ್ತಿದ್ದಾನೆ. ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಇದೀಗ ಎಸ್ಐಟಿ ಅಧಿಕಾರಿಗಳು ತಿಮರೋಡಿ, ಮಟ್ಟೆಣ್ಣನವರ್, ಜಯಂತ್ ಗ್ಯಾಂಗ್‌ಗೆ ನೋಟಿಸ್ ನೀಡುವ ಸಾಧ್ಯತೆ ಇದೆ.