ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ಸೋಮವಾರ ಆರಂಭವಾದ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನ ಉಭಯ ಸದನಗಳಲ್ಲಿ ಪಕ್ಷಾತೀತವಾಗಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ(ಎನ್‌ಜಿಟಿ) ವರದಿ ಸಲ್ಲಿಸಿ ಕಾನೂನು ಹೋರಾಟ ಮುಂದುವರೆಸಬೇಕು. ಕೇಂದ್ರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.
ಸೋಮವಾರ ಕಸ್ತೂರಿ ರಂಗನ್ ವರದಿ ಕುರಿತು ಉಭಯ ಸದನಗಳಲ್ಲಿ ನಡೆದ ಚರ್ಚೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಸದಸ್ಯರು ಪಾಲ್ಗೊಂಡು ಮಾತನಾಡಿದರು. ದಶಕದ ಹಿಂದೆ ಉಪಗ್ರಹಗಳ ಮೂಲಕ ಮಾಡಿರುವ ಸಮೀಕ್ಷೆ ಮಾಡಿ ಸಿದ್ಧಪಡಿಸಿರುವ ಈ ಅವೈಜ್ಞಾನಿಕ ವರದಿ ಜಾರಿಯಾದರೆ, ಜನಜೀವನಕ್ಕೆ ಮಾರಕವಾಗಲಿದೆ. ಯಾವುದೇ ಕಾರಣಕ್ಕೂ ಈ ವರದಿ ಒಪ್ಪಬಾರದು. ರಾಜ್ಯ ಸರ್ಕಾರ ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ ನಡೆಸಿ ಎನ್‌ಜಿಟಿಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
10:48 AM (IST) Sep 22
10:45 AM (IST) Sep 22
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮತ್ತು ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು 'ಮಲ್ಟಿಲೇನ್ ಫ್ರೀ ಫ್ಲೋ ಟೋಲಿಂಗ್' (ಎಂಎಲ್‌ಎಫ್‌ಎಫ್) ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದ ವಾಹನಗಳು ಟೋಲ್ ಗೇಟ್‌ನಲ್ಲಿ ನಿಲ್ಲದೆ ಸರಾಗವಾಗಿ ಸಂಚರಿಸಬಹುದು.
10:31 AM (IST) Sep 22
10:11 AM (IST) Sep 22
10:11 AM (IST) Sep 22
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿವೃತ್ತ ಬಿಸಿಎಂ ಹಾಸ್ಟೆಲ್ ಸೂಪರಿಡೆಂಟ್ ಶಿವರಾಜು ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ ವಸ್ತುಗಳು, ಅಪಾರ ಪ್ರಮಾಣದ ಮದ್ಯ ಹಾಗೂ ಅಕ್ರಮ ಆಸ್ತಿ ಪತ್ತೆಯಾಗಿದೆ. ಇಲ್ಲಿದೆ ಇನ್ನಷ್ಟು ವಿವರ..
09:47 AM (IST) Sep 22
09:38 AM (IST) Sep 22
09:37 AM (IST) Sep 22
08:51 AM (IST) Sep 22
08:37 AM (IST) Sep 22
ಉದ್ಯಮಿಯೊಬ್ಬರಿಗೆ ಸುಳ್ಳು ಅತ್ಯಾ*ಚಾರ ಪ್ರಕರಣದ ಬೆದರಿಕೆಯೊಡ್ಡಿ 20 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. 7 ಲಕ್ಷ ರೂ.ಗೆ ಡೀಲ್ ಕುದುರಿಸಿ, ಮೊದಲ ಕಂತಾಗಿ 2.5 ಲಕ್ಷ ರೂ. ಪಡೆಯುತ್ತಿದ್ದಾಗ ಪೂಜಾ ಪ್ರಕಾಶ್ ಎಂಬಾಕೆ ಸಿಕ್ಕಿಬಿದ್ದಿದ್ದಾಳೆ. ಈಕೆಯ ಬಂಧನದ ವಿಡಿಯೋ ಈಗ ವೈರಲ್ ಆಗಿದೆ.
08:15 AM (IST) Sep 22
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸೆಪ್ಟೆಂಬರ್ 26ರಿಂದ ಮಳೆ ಪ್ರಮಾಣ ಇಳಿಕೆಯಾಗಲಿದೆ.
07:57 AM (IST) Sep 22
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ 108 ಆ್ಯಂಬುಲೆನ್ಸ್ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಯೊಳಗೆ ಬೇಡಿಕೆ ಈಡೇರದಿದ್ದರೆ ಸೇವೆ ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗುವ ಆತಂಕ.
07:48 AM (IST) Sep 22
ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಲ್ಲಿ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗಿದೆ. ಉಪಗ್ರಹ ಆಧಾರಿತ ಸಮೀಕ್ಷೆ ಬದಲು ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸಿ ಎನ್‌ಜಿಟಿಗೆ ವರದಿ ಸಲ್ಲಿಸಲು ಆಗ್ರಹಿಸಲಾಗಿದೆ. ಯಾರು ಏನು ಮಾತನಾಡಿದರು? ಇಲ್ಲಿದೆ ವಿವರ.