ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರವೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಸಲ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿ ಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.
10:21 AM (IST) Apr 10
ರಾಜ್ಯ ಸರ್ಕಾರವು ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ರೂಟ್ ಕೆನಾಲ್ ಚಿಕಿತ್ಸೆಯನ್ನು (ಆರ್‌ಸಿಟಿ) ಸೇರಿಸಲು ಅನುಮೋದನೆ ನೀಡಿದೆ. ಈ ನಿರ್ಧಾರದಿಂದಾಗಿ, ಬಡ ರೋಗಿಗಳು ದುಬಾರಿ ವೆಚ್ಚದ ಬದಲು ನಿಗದಿತ ದರದಲ್ಲಿ ಚಿಕಿತ್ಸೆ ಪಡೆದು ಹಲ್ಲುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ.
09:53 AM (IST) Apr 10
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಎಸ್. ಅಶೋಕ್ ಕುಮಾರ್ ಎಂಬ ಕೈದಿ, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಜೈಲಿನ ಅಧಿಕಾರಿಗಳ ಸಹಕಾರದಿಂದ ದೂರ ಶಿಕ್ಷಣದ ಮೂಲಕ ಈ ಸಾಧನೆ ಮಾಡಿರುವ ವಿದ್ಯಾರ್ಥಿ
09:17 AM (IST) Apr 10
Third language mandatory: ಕರ್ನಾಟಕದಲ್ಲಿ 70ರ ದಶಕದಿಂದ ಜಾರಿಯಲ್ಲಿರುವ ತ್ರಿಭಾಷಾ ಸೂತ್ರವು ವಿದ್ಯಾರ್ಥಿಗಳ ಮೇಲೆ ಅನಗತ್ಯ ಹೊರೆಯಾಗಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರವಿದ್ದು, ಹಿಂದಿ ಕಲಿಕೆಯಿಂದ ಉದ್ಯೋಗ ಸಿಗುತ್ತದೆ ಎಂಬುದು ಸುಳ್ಳೆಂದು ಲೇಖನವು ಪ್ರತಿಪಾದಿಸುತ್ತದೆ.
08:23 AM (IST) Apr 10
ಇರಾನ್-ಇಸ್ರೇಲ್ ಯುದ್ಧದಿಂದಾಗಿ ಔಷಧ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಪೂರೈಕೆ ತಡವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಔಷಧಗಳ ಕೊರತೆ ಬೆಲೆ ಏರಿಕೆ ಸಾಧ್ಯತೆಯಿದ್ದು, ಇದರ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.
08:11 AM (IST) Apr 10
PUC results 2026 ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪದವಿ ಪೂರ್ವ ಕಾಲೇಜುಗಳು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.16 ರಷ್ಟು ಫಲಿತಾಂಶ ದಾಖಲಿಸಿದ್ದು, ಕಳೆದ ವರ್ಷಕ್ಕಿಂತ ಶೇ.4ರಷ್ಟು ಸುಧಾರಣೆ ಕಂಡಿವೆ.
07:59 AM (IST) Apr 10
07:27 AM (IST) Apr 10
ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲವಂತದ ಸಂಭೋಗ ನಡೆಸಿದ ಆರೋಪ ಎದುರಿಸುತ್ತಿರುವ ಪತಿಯ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರತ್ಯೇಕಗೊಂಡ ಪತ್ನಿಯೊಂದಿಗೆ ಬಲವಂತದ ಸಂಭೋಗವು ಐಪಿಸಿ 376(ಬಿ) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.