ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ದಲಿತ ಸಂಘಟನೆಗಳು!

Published : Mar 07, 2025, 06:47 AM ISTUpdated : Mar 07, 2025, 06:56 AM IST
ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ದಲಿತ ಸಂಘಟನೆಗಳು!

ಸಾರಾಂಶ

ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ದಲಿತರ ಹಣವನ್ನು ಸಿದ್ದರಾಮಯ್ಯ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು (ಮಾ.7) : ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ‘ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಇಲ್ಲಿಗೆ ಬಂದಿಲ್ಲ. ದಲಿತ ವಿರೋಧಿ ಸರ್ಕಾರದ ವಿರುದ್ಧ ಹೋರಾಡಲು ಬಂದಿದ್ದೇನೆ. ಅಂಬೇಡ್ಕರ್‌ ಅವರ ಅನುಯಾಯಿಯಾಗಿ ನಿಮ್ಮೆಲ್ಲರ ಧ್ವನಿಯಾಗಲು ಬಂದಿದ್ದೇನೆ. ಇಂತಹ ಕರಾಳ ದಿನ ಬರಲಿದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದರು.

ಎಸ್ಸಿ-ಎಸ್ಟಿ ಕಣ್ಣೀರು ಒರೆಸುತ್ತೇನೆ ಎಂದು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ ಅವರೇ ನಿಮ್ಮ ದಲಿತ ಪರ ಕಾಳಜಿ ಎಲ್ಲಿ ಹೋಯ್ತು? ಸಿದ್ದರಾಮಯ್ಯ ಅನುಭವಿ ಸಿಎಂ ಎಂದು ನಾನು ಹೇಳಲ್ಲ. ದಲಿತ ಕೇರಿಗಳಿಗೆ ಗಂಗಾ ಕಲ್ಯಾಣ ಯೋಜನೆ ಕೊಟ್ಟಿದ್ದು, ಸಿಸಿ ರಸ್ತೆ ಕೊಟ್ಟಿದ್ದು ಮಾಜಿ ಸಿಎಂ ಯಡಿಯೂರಪ್ಪ. ಹಾಗಾದರೆ, ಸಿದ್ದರಾಮಯ್ಯ ಅವರೇ ದಲಿತರ ಮೇಲೆ ನಿಮ್ಮ ಕಾಳಜಿ ಎಲ್ಲಿಗೆ ಹೋಯ್ತು? ದಲಿತರ ಮತವನ್ನು ಮತ ಬ್ಯಾಂಕ್‌ ಆಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ದಲಿತರ ₹20 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಸರ್ಕಾರದ ಕಿಡಿ ಹಿಂಡುವ ಕೆಲಸ ಮಾಡಬೇಕು ಎಂದು ಕಿಡಿಕಾರಿದರು.ಸಿದ್ದರಾಮಯ್ಯ ಅವರೇ ನಾಳೆ ನೀವು ಮಂಡನೆ ಮಾಡುತ್ತಿರುವ 16ನೇ ಬಜೆಟ್‌ನಲ್ಲಿ ಎಸ್ಸಿ-ಎಸ್ಟಿ ಹಣ ದುರ್ಬಳಕೆ ಮಾಡುವ ಕೆಲಸಕ್ಕೆ ಕೈ ಹಾಕಬೇಡಿ ಎಂದು ವಿಜಯೇಂದ್ರ ಆಗ್ರಹಿಸಿದರು.

ಇದನ್ನೂ ಓದಿ: Interview : ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ದುರ್ಬಳಕೆ: ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?

ಮೀಸಲು ಹಣ ಭಿಕ್ಷೆ ಅಲ್ಲ, ನಮ್ಮ ಹಕ್ಕು:

ಶುಕ್ರವಾರ ಮಂಡಿಸಲಿರುವ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾಗಿ ಇಡಬೇಕಾದ ಹಣ ಇಡುತ್ತೀರಾ? ಅದನ್ನು ನಾವು ನೋಡಬೇಕು. ಈ ಬಾರಿಯ ಬಜೆಟ್‌ನಲ್ಲಿ ಬರುವ ಹಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗ ಸಮುದಾಯದ ಯೋಜನೆಗೆ ಇರಿಸಬೇಕು. ಗಂಗಾ ಕಲ್ಯಾಣಕ್ಕೆ ಮೀಸಲಾದ ಹಣ ಎಲ್ಲಿಗೆ ಹೋಯ್ತು? ಇದು ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು. ಹಣ ದುರ್ಬಳಕೆ ಆಗಿರುವುದಕ್ಕೆ ಸರ್ಕಾರ ಕ್ಷಮೆ ಯಾಚಿಸಬೇಕು. ನಾವು ಯಾವಾಗಲೂ ನಿಮ್ಮ ಹೋರಾಟದಲ್ಲಿ ಇರುತ್ತೇವೆ ಎಂದು ದಲಿತ ಸಂಘಟನೆಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಬಲ ಸೂಚಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ 30ಕ್ಕೂ ಅಧಿಕ ದಲಿತ ಸಂಘಟನೆಗಳು ಪಾಲ್ಗೊಂಡಿದ್ದವು. ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮ, ಮಾಜಿ ಸಚಿವ ಎನ್‌.ಮಹೇಶ್‌, ಮಾಜಿ ಶಾಸಕ ವೈ.ಸಂಪಂಗಿ ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ದಲಿತ ಸಂಘಟನೆಗಳು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ದಲಿತರ ಹಣ ಗ್ಯಾರಂಟಿಗೆ ಬಳಕೆ: ದಿನೇಶ್ ಗುಂಡೂರಾವ್ ಸಮರ್ಥನೆ

ಕಾಂಗ್ರೆಸ್‌ನಲ್ಲಿ ದಲಿತ ಶಾಸಕರು ಇಲ್ಲವೇ?:

ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ ಮಾತನಾಡಿ, ನಾವೆಲ್ಲರೂ ಅಂಬೇಡ್ಕರ್‌ ಕೊಟ್ಟಿರುವ ಸಂವಿಧಾನದ ಅಡಿತಲ್ಲಿ ಕಾಣಿಸಿಕೊಳ್ಳುತ್ತಿದ್ದೇವೆ. ಅಂಬೇಡ್ಕರ್‌ ಸಂವಿಧಾನ ಎಲ್ಲಾ ಸಮುದಾಯದ ಜನರಿಗೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಶಾಸಕರು ಇಲ್ಲವೇ? ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ ಪಡೆಯದೇ ಇದ್ದರೆ 136 ಸ್ಥಾನ ಗೆಲ್ಲುತ್ತಿದ್ದರಾ? ದಲಿತರ ಮೀಸಲು ಹಣ ದುರುಪಯೋಗ ಆಗದಂತೆ ನೋಡಿಕೊಳ್ಳುವುದು ದಲಿತ ಸಮಯದಾಯ ಶಾಸಕರ ಜವಾಬ್ದಾರಿ ಎಂದು ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ