ಬೆಂಗಳೂರು (ಮೇ.1): ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್ ಇಲ್ಲಿದೆ.
10:17 PM (IST) May 01
ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್‌ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
09:46 PM (IST) May 01
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ, ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೊ ಗೊತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
09:37 PM (IST) May 01
ಬೆಂಗಳೂರಿನ ಪೀಣ್ಯ ಫ್ಲೈಓವರ್ ನಾಲ್ಕು ದಿನ ಎಲ್ಲಾ ವಾಹನ ಸಂಚಾರ ಬಂದ್, ಬದಲಿ ಮಾರ್ಗ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯಾವ ದಿನದಿಂದ ಫ್ಲೈಓವರ್ ಬಂದ್ ಮಾಡಲಾಗುತ್ತಿದೆ. ಪರ್ಯಾಯ ಮಾರ್ಗ ವಿವರ ಇಲ್ಲಿದೆ.
08:13 PM (IST) May 01
ಗಂಗಾವತಿಯಲ್ಲಿ ವೆಂಕಟೇಶ ಕುರಬರ ಕೊಲೆ ಪ್ರಕರಣದಲ್ಲಿ 6 ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿದ ಬಳಿಕ, ಪೊಲೀಸ್ ಅಧಿಕಾರಿಗಳು ಕುಟುಂಬಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. ಕುಟುಂಬವು ನ್ಯಾಯ ದೊರೆತಿದೆ ಎಂದು ಪ್ರತಿಕ್ರಿಯಿಸಿದೆ.
07:58 PM (IST) May 01
ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 50ನೇ ಅಭಿಮಾನೋತ್ಸವಕ್ಕೆ ಗಂಗಾವತಿ ವಿಧಾನ ಸಭಾ ಕ್ಷೇತ್ರದಿಂದ 10 ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
07:39 PM (IST) May 01
07:24 PM (IST) May 01
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕುಲದೇವತೆ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಪತ್ನಿ ಜತೆ ಆಗಮಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
07:07 PM (IST) May 01
ಹಾಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗಲೇ 2012ರಲ್ಲಿ ವೇತನ ಪರಿಷ್ಕರಣೆಗಾಗಿ ಸಾರಿಗೆ ನೌಕರರ ಮುಷ್ಕರ ನಡೆಸುವ ಪದ್ಧತಿ ಆರಂಭವಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
06:53 PM (IST) May 01
04:39 PM (IST) May 01
04:23 PM (IST) May 01
04:04 PM (IST) May 01
02:40 PM (IST) May 01
Vasudeva Kutumba Serial Producer: ಕಲಾವಿದರು ಧಾರಾವಾಹಿ ಬಿಡ್ತಾರೆ ಎಂದು ಕೆಲವರು ಆರೋಪ ಮಾಡೋದುಂಟು. ಆದರೆ ಇದಕ್ಕೆಲ್ಲ ಕಾರಣ ಬೇರೆ ಇರುತ್ತದೆ. ವಸುದೇವ ಕುಟುಂಬ ಸೀರಿಯಲ್ ಪ್ರೊಡಕ್ಷನ್ ಹೌಸ್ ಸಂಭಾವನೆ ಕೊಡ್ತಿಲ್ಲ ಎಂದು ಕಲಾವಿದರು ಆರೋಪ ಮಾಡಿದ್ದಾರೆ.
02:13 PM (IST) May 01
ಉಡುಪಿ ಮೂಲದ ಕನ್ನಡಿಗ ಕೋಟ ರವಿ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 'ಎಲ್‌ಸಿಎ ಮ್ಯಾನ್' ಎಂದೇ ಖ್ಯಾತರಾದ ಅವರು, ತೇಜಸ್ ಯುದ್ಧ ವಿಮಾನ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
01:55 PM (IST) May 01
ಅಪ್ರಾಪ್ತೆಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದಲ್ಲಿ ಬೆಳಗಾವಿ ಸೆಷನ್ ಕೋರ್ಟ್ ವಿಧಿಸಿದ್ದ ಮರಣದಂಡನೆಯನ್ನು ಧಾರವಾಡ ಹೈಕೋರ್ಟ್ ಪೀಠವು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ.
01:27 PM (IST) May 01
ಕೇಳಲು ವಿಚಿತ್ರ ಹಾಗೂ ಸ್ವಲ್ಪ ಮಟ್ಟಿಗೆ ಭಯಾನಕ ಎನಿಸಿದರೂ, 'ಗ್ರೇವ್‌ಯಾರ್ಡ್ ಡೇಟಿಂಗ್' ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ, ಈ 'ಸತ್ತವರ ನಡುವಿನ ಸಮಾಲೋಚನೆ' ಎಲ್ಲರಿಗೂ ಇಷ್ಟವಾಗಲಿಕ್ಕಿಲ್ಲ. ನೀವು ನಿಮ್ಮ ಸಂಗಾತಿಯನ್ನು ಮೊದಲ ಭೇಟಿಗೆ ಸ್ಮಶಾನಕ್ಕೆ ಕರೆದೊಯ್ಯುವ ಸಾಹಸ ಮಾಡುತ್ತೀರಾ?
01:20 PM (IST) May 01
12:35 PM (IST) May 01
12:34 PM (IST) May 01
ಕರ್ನಾಟಕವನ್ನು ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು, ರಾಜ್ಯ ಸರ್ಕಾರವು ಅಮೆರಿಕದ 'ಅಪ್ಲೈಡ್ ಮೆಟೀರಿಯಲ್ಸ್ ಇಂಕ್' ಕಂಪನಿಗೆ ಬೆಂಗಳೂರಿನಲ್ಲಿ 140 ಎಕರೆ ಜಮೀನು ಹಂಚಿಕೆ ಮಾಡಲು ಅನುಮೋದನೆ ನೀಡಿದೆ.
11:42 AM (IST) May 01
ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಿದ್ದು, ಅಲ್ಲಿಯವರೆಗೆ ಗೊಂದಲ ಸೃಷ್ಟಿಸಬಾರದು ಎಂದಿದ್ದಾರೆ.
11:32 AM (IST) May 01
ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ದಲಿತ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ್ದೇನು?
11:31 AM (IST) May 01
11:27 AM (IST) May 01
ಬೆಂಗಳೂರಿನಲ್ಲಿ, ಮೇಘಾಲಯ ಮೂಲದ 36 ವರ್ಷದ ಮಹಿಳೆಯೊಬ್ಬರು ತನ್ನ 20 ವರ್ಷದ ಲಿವಿಂಗ್ ರಿಲೇಷನ್‌ಶಿಪ್ ಸಂಗಾತಿಯ ಮೇಲೆ ಸಂಶಯಗೊಂಡು ಜಗಳವಾಡಿದ ನಂತರ ಮನನೊಂದು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
11:01 AM (IST) May 01
ಲೋಕಸಭಾ ಚುನಾವಣೆ ವೇಳೆ ಶಿವಮೊಗ್ಗದ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಸ್ಥಳಗಳನ್ನು ಬಳಸಬಾರದು ಎಂದು ನ್ಯಾಯಾಲಯ ಅಭಿಪ್ರಾಯ
10:37 AM (IST) May 01
ಕಾಂಗ್ರೆಸ್ ಮುಖಂಡ ಮದನ್ ರಾಜ್ ಮದುವೆ ಆಮಿಷವೊಡ್ಡಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾರೆ. ಯುವತಿ ಪ್ರಶ್ನಿಸಿದಾಗ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
10:37 AM (IST) May 01
ಕೇಂದ್ರ ಸಚಿವ ವಿ. ಸೋಮಣ್ಣ ಅವರ ಪ್ರಕಾರ, ನಿಧಾನಗತಿಯ ಕಾಮಗಾರಿ ಮತ್ತು ದಾಖಲೆಗಳ ಕೊರತೆಯಿಂದಾಗಿ ಜಲ್ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕ ಸರ್ಕಾರವು ₹16,863.86 ಕೋಟಿ ಅನುದಾನವನ್ನು ಕಳೆದುಕೊಂಡಿದೆ. ಇದು ಕೇಂದ್ರದ ತಾರತಮ್ಯವಲ್ಲ ಎಂದು ಮಾಹಿತಿ ನೀಡಿದ್ದಾರೆ.
10:14 AM (IST) May 01
ಮೇ 1 ರಿಂದ, ಬೆಸ್ಕಾಂ ಗೃಹಬಳಕೆಯ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಿಸಿದೆ. ಕಳೆದ ವರ್ಷದ 2,068 ಕೋಟಿ ರೂ. ಆದಾಯ ಕೊರತೆಯನ್ನು ಸರಿದೂಗಿಸಲು ಕೆಇಆರ್‌ಸಿ ಅನುಮೋದನೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
10:06 AM (IST) May 01
09:30 AM (IST) May 01
ಕೇಂದ್ರ ಹಣಕಾಸು ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಆದಾಯ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆಯಿಂದಾಗಿ ಕರ್ನಾಟಕ ಸೇರಿದಂತೆ ಒಂಬತ್ತು ಪ್ರಮುಖ ರಾಜ್ಯಗಳು ಶೀಘ್ರದಲ್ಲೇ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಲಿವೆ.
09:22 AM (IST) May 01
Simple green chutney recipe: ಕಬಾಬ್ ಅಥವಾ ವಡಾಪಾವ್, ಸ್ಯಾಂಡ್‌ವಿಚ್‌ಗಳಿಗೆ ಹಾಕುವ ಗ್ರೀನ್ ಚಟ್ನಿಯನ್ನು ಹೇಗೆ ಮಾಡೋದು ಎಂದು ಅನೇಕರಿಗೆ ಡೌಟ್ ಇರಬಹುದು. ಹೌದು, ಹೋಟೆಲ್ ಶೈಲಿಯಲ್ಲಿ ಗ್ರೀನ್ ಚಟ್ನಿ (Green Chutney) ಮಾಡುವುದು ಹೇಗೆ ಎಂದು ನೋಡೋಣ
09:21 AM (IST) May 01
08:47 AM (IST) May 01
08:45 AM (IST) May 01
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್-ಬೆಂಗಳೂರು ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗಳಿಗೆ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಇದರೊಂದಿಗೆ, ನವಜಾತ ಶಿಶುಗಳ ತಪಾಸಣಾ ಯೋಜನೆ, ಸೆಮಿಕಂಡಕ್ಟರ್ ಕಂಪನಿಗೆ ಜಮೀನು ಹಂಚಿಕೆಗೂ ಸಂಪುಟ ಒಪ್ಪಿಗೆ ನೀಡಿದೆ.
08:11 AM (IST) May 01
KD Kannada Movie Box Office Collection Report: ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ಸೂರಜ್, ರವಿಶಂಕರ್ ಅವರು ನಟಿಸಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ?
07:17 AM (IST) May 01
ಎಸ್‌ಎಸ್‌ಎಲ್‌ಸಿ ಕನ್ನಡ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಶಿಕ್ಷಣ ಸಚಿವರಿಗೆ ಸಂಶೋಧನಾ ವರದಿಯೊಂದನ್ನು ಸಲ್ಲಿಸಿದೆ.
07:17 AM (IST) May 01
ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ.
07:16 AM (IST) May 01
ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.