ಪಶ್ಚಿಮಘಟ್ಟದ ಕುರಿತಾದ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಹಾಗೂ ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಕುರಿತು ಚರ್ಚೆಗೆ ನಿಗದಿಯಂತೆ ಸೋಮವಾರದಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ.
ಸೆ.21ರಿಂದ 23ರವರೆಗೆ ನಡೆಯುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನದಲ್ಲಿ ಈ ವಿಷಯ ಸುದೀರ್ಘವಾಗಿ ಚರ್ಚೆ ನಡೆಸಿ ಪಶ್ಚಿಮಘಟ್ಟ ವ್ಯಾಪ್ತಿಯ ಜನರ ಭಾವನೆ ಆಧರಿಸಿ ಅಧಿಸೂಚನೆ ವಿರುದ್ಧ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒಕ್ಕೊರಲ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
09:47 AM (IST) Sep 21
09:06 AM (IST) Sep 21
08:57 AM (IST) Sep 21
ರಾಜ್ಯದ ಶಕ್ತಿ ಯೋಜನೆಯಂತೆ ಪುರುಷರಿಗೆ ಉಚಿತ ರೈಲ್ವೆ ಪ್ರಯಾಣ ಘೋಷಿಸುವಂತೆ ಪ್ರಧಾನಿ ಮೋದಿಗೆ ಸಚಿವ ಬಸವರಾಜ ರಾಯರಡ್ಡಿ ಸವಾಲು ಹಾಕಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ ಎಂದು ಟೀಕಿಸಿದ ಅವರು, ಹಣ ಮತ್ತು ಜಾತಿ ಆಧಾರಿತವಲ್ಲದ ಪ್ರಾಮಾಣಿಕ ಚುನಾವಣಾ ವ್ಯವಸ್ಥೆಯ ಅಗತ್ಯವನ್ನು ಪ್ರತಿಪಾದಿಸಿದರು.
08:33 AM (IST) Sep 21
ಮಂಗಳೂರು-ಯಶವಂತಪುರ (ಬೆಂಗಳೂರು) ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಬದಲಾಯಿಸುವಂತೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಒತ್ತಾಯಿಸಿದೆ. ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಈ ರೈಲು ಮುಂಜಾನೆ ಮಂಗಳೂರಿನಿಂದಲೇ ಹೊರಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿದೆ.
08:17 AM (IST) Sep 21